ಹುಣಸೂರು ತಾಲೂಕು ವೀರಶೈವ ಲಿಂಗಾಯತ ನೌಕರರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಆಯೋಜನೆಗೊಂಡಿರುವ ಕಾರ್ಕ್ರಮದ ಆಹ್ವಾನ ಪತ್ರಿಕೆಯನ್ನು ಗಣ್ಯರು ಬಿಡುಗಡೆಗೊಳಿಸಿದರು. ಡಾ.ವೃಷಭೇಂದ್ರಸ್ವಾಮಿ, ಎಸ್.ಎ.ಹರೀಶ, ಎ.ಎನ್.ತ್ರಿನೇಶ್, ಕೆ.ಎಸ್.ಗುಂಡಪ್ಪ ಇದ್ದರು.  
ಮೈಸೂರು

ನಾಳೆ ಪ್ರತಿಭಾ ಪುರಸ್ಕಾರ, ನಿವೃತ್ತ ನೌಕರರಿಗೆ ಸನ್ಮಾನ

ಹುಣಸೂರು: ರಾಜ್ಯ ವೀರಶೈವ ಲಿಂಗಾಯತ ನೌಕರರ ಕ್ಷೇಮಾಭಿವೃದ್ಧಿ ಸಂಘದ ತಾಲೂಕು ಘಟಕದ ವತಿಯಿಂದ ಡಿ.13ರಂದು ಪ್ರತಿಭಾ ಪುರಸ್ಕಾರ, ನಿವೃತ್ತ ನೌಕರರಿಗೆ ಗೌರವ ಸಮರ್ಪಣೆ ಇನ್ನಿತರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ತಾಲೂಕು ಅಧ್ಯಕ್ಷ ಎಸ್.ಎ.ಹರೀಶ ತಿಳಿಸಿದರು.
ಡಿ.13ರ ಬೆಳಗ್ಗೆ 11 ಗಂಟೆಗೆ ನಗರದ ಕೆಎಸ್‌ಆರ್‌ಟಿಸಿ ಬಸ್ ಡಿಪೋ ಮುಂಭಾಗದ ಸಿ.ಪಿ.ಆರ್ಕೇಡ್ ಬಿಲ್ಡಿಂಗ್ ಸಭಾಂಗಣದಲ್ಲಿ ಕಾರ್ಯಕ್ರಮ ಆಯೋಜನೆಗೊಂಡಿದ್ದು, ಮಾದಳ್ಳಿ ಉಕ್ಕಿನಕಂತೆ ಮಠದ ಶ್ರೀ ಸಾಂಬಸದಾಶಿವಸ್ವಾಮೀಜಿ ಮತ್ತು ಗಾವಡಗೆರೆ ಶ್ರೀ ಗುರುಲಿಂಗಜಂಗಮದೇವರ ಮಠದ ಶ್ರೀ ನಟರಾಜ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ. ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ತಾಲೂಕು ಅಧ್ಯಕ್ಷ ಎಚ್.ಎಸ್.ಸೋಮಶೇಖರ್ ಕಾರ್ಯಕ್ರಮ ಉದ್ಘಾಟಿಸಲಿದ್ದು, ಸಂಘದ ಗೌರವಾಧ್ಯಕ್ಷ ಡಾ.ವೃಷಭೇಂದ್ರಸ್ವಾಮಿ, ಕೇಂದ್ರ ಕಾರ್ಯಕಾರಿ ಸಮಿತಿ ಸದಸ್ಯ ಎಸ್.ಬಸವರಾಜು ಸೇರಿದಂತೆ ಸಮಾಜದ ಪ್ರಮುಖರು ಭಾಗವಹಿಸಲಿದ್ದಾರೆ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ಗೌರವಾಧ್ಯಕ್ಷ ಡಾ.ವೃಷಭೇಂದ್ರಸ್ವಾಮಿ ಮಾತನಾಡಿ, ಕಾರ್ಯಕ್ರಮದಲ್ಲಿ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿಯಲ್ಲಿ ಅತಿಹೆಚ್ಚು ಅಂಕ ಗಳಿಸಿದ ಸಮಾಜದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೆರವೇರಿಸಲಾಗುವುದು. ವಿವಿಧ ಕ್ಷೇತ್ರಗಳಲ್ಲಿ ಸಾಧನಗೈದು ಪ್ರಶಸ್ತಿ, ಗೌರವಗಳಿಂದ ಪುರಸ್ಕೃತಗೊಂಡಿರುವ 8 ಸಾಧಕರಾದ ವಿ.ಎನ್.ಕುಸುಮಾ, ಡಾ.ರೇಣುಕಾಪ್ರಸಾದ್, ಎಸ್.ಎ.ಹರೀಶ, ಎಂ.ಪಿ.ಮಂಜುಳಾ, ಸುಜಾತಾ, ಎ.ಎಂ.ಶಿವು, ಮೀನಾಕ್ಷಮ್ಮ ಮತ್ತು ಎಸ್.ಎಚ್.ಮಧುರ ಅವರನ್ನು ಸನ್ಮಾನಿಸಲಾಗುವುದು ಹಾಗೂ 2026ನೇ ಸಾಲಿನ ಕ್ಯಾಲೆಂಡರ್ ಬಿಡುಗಡೆಗೊಳಿಸಲಾಗುವುದು ಎಂದರು.
ಇದೇ ವೇಳೆ ಕಾರ್ಯಕ್ರಮದ ಆಹ್ವಾನ ಪತ್ರಿಕೆಯನ್ನು ಗಣ್ಯರು ಬಿಡುಗಡೆಗೊಳಿಸಿದರು. ಸಂಘದ ಉಪಾಧ್ಯಕ್ಷ ಎ.ಎನ್.ತ್ರಿನೇಶ್, ಸಂಚಾಲಕ ಕೆ.ಎಸ್.ಗುಂಡಪ್ಪ ಹಾಜರಿದ್ದರು.