ತಿ.ನರಸೀಪುರ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ಕರ್ನಾಟಕ ರಾಜ್ಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದ ತಾಲೂಕು ಘಟಕಕ್ಕೆ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಸಿ.ಪ್ರಕಾಶ್, ಕೆ.ಎಸ್.ಲಿಂಗರಾಜು, ಶ್ರೀನಿವಾಸ್, ಕೆ.ಪಿ.ಕೆಂಪೇಗೌಡ, ಮೊಹಮ್ಮದ್ ಇಷ್ಹಾಕ್, ಟಿ.ಎಂ.ಮಹೇಶ ಇದ್ದರು.
ತಿ.ನರಸೀಪುರ: ಪಟ್ಟಣದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ಕರ್ನಾಟಕ ರಾಜ್ಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದ ತಾಲೂಕು ಘಟಕಕ್ಕೆ ನೂತನ ಪದಾಧಿಕಾರಿಗಳನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು.
ಅಧ್ಯಕ್ಷರಾಗಿ ಕೆ.ಎಸ್.ಲಿಂಗರಾಜು, ಗೌರವಾಧ್ಯಕ್ಷರಾಗಿ ರಾಜಣ್ಣ, ಉಪಾಧ್ಯಕ್ಷರಾಗಿ ಶ್ರೀನಿವಾಸ್, ಮಹಿಳಾ ಉಪಾಧ್ಯಕ್ಷರಾಗಿ ವಿ.ರೇಣುಕಾ, ಪ್ರಧಾನ ಕಾರ್ಯದರ್ಶಿಯಾಗಿ ಅಮ್ಜದ್ ಪಾಷ, ಖಜಾಂಚಿಯಾಗಿ ಸಿ.ಪುಟ್ಟಸ್ವಾಮಿ, ಸಂಘಟನಾ ಕಾರ್ಯದರ್ಶಿಯಾಗಿ ಮಹದೇವು, ಮಹಿಳಾ ಸಂಘಟನಾ ಕಾರ್ಯದರ್ಶಿಯಾಗಿ ಆರ್.ನಿರ್ಮಲಾ, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಬಿ.ಶಿಲ್ಪಾ, ಕ್ರೀಡಾ ಕಾರ್ಯದರ್ಶಿಯಾಗಿ ಕೆ.ಪಿ.ಕೆಂಪೇಗೌಡ ಅವರನ್ನು ನೇಮಕ ಮಾಡಲಾಯಿತು.
ಜಿಲ್ಲಾಧ್ಯಕ್ಷ ಸಿ.ಪ್ರಕಾಶ್ ಮಾತನಾಡಿ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಹಿತ ಕಾಪಾಡಲು, ಆಂತರಿಕ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಲು ಕ್ಷೇಮಾಭಿವೃದ್ಧಿ ಸಂಘ ಪೂರಕವಾಗಿ ಕಾರ್ಯನಿರ್ವಹಿಸಲಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ಸಭೆಗಳನ್ನು ನಡೆಸಿ ಕಾರ್ಯಕಾರಿ ಸಮಿತಿಗೆ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗುತ್ತಿದೆ. ತಾಲೂಕಿನ ಪ್ರತಿಯೊಬ್ಬ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸಂಘಟಿತರಾಗಲು ಹಾಗೂ ಸಂಘದ ಕಾರ್ಯ ಚಟುವಟಿಕೆಗಳಲ್ಲಿ ಕ್ರೀಯಾಶೀಲರಾಗಿ ತೊಡಗಿಸಿಕೊಳ್ಳಬೇಕು ಎಂದು ತಿಳಿಸಿದರು.
ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಸವರಾಜು, ಗೌರವಾಧ್ಯಕ್ಷ ಎಸ್.ಧರ್ಮೇಂದ್ರ, ಖಜಾಂಚಿ ಮಹದೇವ ನಾಯಕ, ಮಹಿಳಾ ಉಪಾಧ್ಯಕ್ಷೆ ಟಿ.ಸೌಮ್ಯಲತಾ, ಸಂಘಟನಾ ಕಾರ್ಯದರ್ಶಿ ಮೊಹಮ್ಮದ್ ಇಷ್ಹಾಕ್, ತಾಯೂರು ಪಿಡಿಒ ಟಿ.ಎಂ.ಮಹೇಶ, ವಿವಿಧ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಇದ್ದರು.