ಹುಣಸೂರಿನ ತಾಲೂಕು ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಶಿಕ್ಷಕರ ಕ್ರೀಡಾಕೂಟವನ್ನು ಬಿಇಒ ಕಾಳನಾಯ್ಕ ಗುಂಡು ಎಸೆಯುವ ಮೂಲಕ ಚಾಲನೆ ನೀಡಿದರು. ಶಿಕ್ಷಕರ ಗಾಗೂ ನೌಕರರ ಸಂಘದ ಪದಾಧಿಕಾರಿಗಳು ಇದ್ದರು.  
ಮೈಸೂರು

ಶಿಕ್ಷಕರು ಕ್ರೀಡಾಕೂಟದಲ್ಲಿ ಭಾಗವಹಿಸಿ

ಹುಣಸೂರು:

ಶಿಕ್ಷಕರ ದಿನಾಚರಣೆ ಅಂಗವಾಗಿ ನಗರದ ಕ್ರೀಡಾಂಗಣದಲ್ಲಿ ಮಂಗಳವಾರ ಶಿಕ್ಷಕರಿಗಾಗಿ ಆಯೋಜಿಸಿದ್ದ ಕ್ರೀಡಾಕೂಟವನ್ನು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಕಾಳನಾಯಕ ಅವರು ಗುಂಡು ಎಸೆಯುವ ಮೂಲಕ ಚಾಲನೆ ನೀಡಿದರು.

ಬಳಿಕ ಮಾತನಾಡಿದ ಅವರು, ಶಿಕ್ಷಕರ ಕಣ್ಮಣಿ ಸರ್ವಪಲ್ಲಿ ಡಾ.ರಾಧಕೃಷ್ಣನ್ ಅವರ ಜನ್ಮ ದಿನದ ಅಂಗವಾಗಿ ನಡೆಯುವ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳು ಶಿಕ್ಷಕರು ತಮ್ಮೊಳಗಿನ ಪ್ರತಿಭೆಯ ಅನಾವರಣಕ್ಕೆ ಉತ್ತಮ ವೇದಿಕೆಯಾಗಿದೆ. ಸದಾ ಮಕ್ಕಳೊಂದಿಗೆ ಕಾರ್ಯನಿರ್ವಹಿಸುವ ನೀವು ಒಂದು ದಿನ ಎಲ್ಲ ತೊಳಲಾಟಗಳನ್ನು ಬಿಟ್ಟು ಸಂಭ್ರಮದಿಂದ ಭಾಗವಹಿಸಬೇಕು. ಆದರೆ ತಾಲೂಕಿನಲ್ಲಿ 1106 ಶಿಕ್ಷಕರಿದ್ದು, ಕೇವಲ 100 ಮಂದಿಯಷ್ಟು ಮಾತ್ರ ಕ್ರೀಡೆಯಲ್ಲಿ ಭಾಗವಹಿಸುತ್ತಿರುವುದು ಬೇಸರದ ಸಂಗತಿ ಎಂದರು.
ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ, ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಶಶಿಕುಮಾರ್ ಮಾತನಾಡಿ, ಶಾಲೆಯ ಸದಾ ಒತ್ತಡದಲ್ಲಿ ಕೆಲಸ ಮಾಡುವ ಶಿಕ್ಷಕರು ಒಂದು ದಿನ ಕ್ರೀಡೆಯಲ್ಲಿ ಪಾಲ್ಗೊಳ್ಳುವ ಮೂಲಕ ಸಂತಸದಿಂದ ಇರಬೇಕು.ಹಿಂದೆಲ್ಲ ಹೆಚ್ಚಿನ ಶಿಕ್ಷಕರು ಕ್ರೀಡಾಕೂಟದಲ್ಲಿ ಭಾಗವಹಿಸುತ್ತಿದ್ದರು. ಆದರೆ ಇತ್ತೀಚಿನ ವರ್ಷಗಳಲ್ಲಿ ಕೆಲವೇ ಮಂದಿ ಶಿಕ್ಷಕರು ಭಾಗವಹಿಸಿರುವುದಕ್ಕೆ ಬೇಸರ ವ್ಯಕ್ತಪಡಿಸಿದರು.