ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ವತಿಯಿಂದ ನಗರದ ಖಾಸಗಿ ಹೋಟೆಲ್‌ನಲ್ಲಿ ಗುರುವಾರ ಆಯೋಜಿಸಿದ್ದ ಸಂಪರ್ಕ ಸಭೆ ಹಾಗೂ ವಿಷಯಾಧಾರಿತ ತರಬೇತಿ ಕಾರ್ಯಕ್ರಮದಲ್ಲಿ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ಶಿಕ್ಷಣ ನಿಧಿ ಸಲಹಾ ಸಮಿತಿ ಎಚ್.ವಿ. ರಾಜೀವ್ ಮಾತನಾಡಿದರು. ಜಿ. ನಂಜೇಗೌಡ, ಎಸ್.ಕೆ. ಮಂಜುನಾಥ್, ಬಿ.ಮಹದೇವಸ್ವಾಮಿ, ಎಸ್.ಆರ್. ನಾರಾಯಣ ರಾವ್, ಬಿ.ಟಿ. ಗುರುರಾಜ್ ಇದ್ದರು 
ಮೈಸೂರು

ಸಮ ಸಮಾಜ ನಿರ್ಮಾಣದಲ್ಲಿ ಸಹಕಾರ ಕ್ಷೇತ್ರದ ಕೊಡುಗೆ ಅಪಾರ : ಎಚ್.ವಿ. ರಾಜೀವ್

ಮೈಸೂರು: ಸಮ ಸಮಾಜ ನಿರ್ಮಾಣ ಮಾಡುವುದರಲ್ಲಿ ಸಹಕಾರ ಸಂಘಗಳ ಕೊಡುಗೆ ಇದೆ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ಶಿಕ್ಷಣ ನಿಧಿ ಸಲಹಾ ಸಮಿತಿ ಎಚ್.ವಿ. ರಾಜೀವ್ ಅಭಿಪ್ರಾಯಪಟ್ಟರು.
ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ವತಿಯಿಂದ ನಗರದ ಖಾಸಗಿ ಹೋಟೆಲ್‌ನಲ್ಲಿ ಗುರುವಾರ ಆಯೋಜಿಸಿದ್ದ ಸಂಪರ್ಕ ಸಭೆ ಹಾಗೂ ವಿಷಯಾಧಾರಿತ ತರಬೇತಿ ಕಾರ್ಯಕ್ರಮದಲ್ಲಿ ಮಾತನಾಡಿ, ಹಲವಾರು ಸಹಕಾರಿಗಳು ಏನನ್ನೂ ಬಯಸದೆ ಸಹಕಾರ ಚಳುವಳಿ ಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ. ಇದರಿಂದ ಆರ್ಥಿಕ ಅಗತ್ಯತೆ ಇರುವ ಹಲವಾರು ಜನರಿಗೆ ಉಪಯೋಗವಾಗಿದೆ ಎಂದು ಹೇಳಿದರು.
ಸಹಕಾರಿಗಳಲ್ಲಿ ಸಹಕಾರದ ಕುರಿತು ಹೆಚ್ಚಿನ ಆಸಕ್ತಿ ಮೂಡಿಸುವಲ್ಲಿ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ಯಶಸ್ವಿಯಾಗಿದೆ. ಸಹಕಾರ ಕಾಯ್ದೆಗಳಲ್ಲಿ ಆಗಿಂದಾಗೆ ಆಗುವ ಬದಲಾವಣೆಗಳು ಕುರಿತು ಸಂಸ್ಥೆಯು ನಿರಂತರವಾಗಿ ಸಹಕಾರಿಗಳಿಗೆ ತರಬೇತಿ ನೀಡುತ್ತಾ ಬರುತ್ತಿದೆ. ಇದರ ಜತೆಗೆ ವಾರ್ಷಿಕ ಲೆಕ್ಕಪತ್ರ ನಿರ್ವಹಣೆ, ಕಾನೂನಿನ ಕುರಿತು ನಿರಂತರವಾಗಿ ಮಾಹಿತಿ ನೀಡುತ್ತಿದೆ. ಇದರ ಪರಿಣಾಮ ಸಹಕಾರಿಗಳಲ್ಲಿ ಸಹಕಾರದ ಕುರಿತು ಹೆಚ್ಚಿನ ಆಸಕ್ತಿ ಮೂಡುತ್ತಿದೆ. ಹೊಸತಲೆಮಾರಿನ ಜನರನ್ನು ಸಹಕಾರ ಕ್ಷೇತ್ರದತ್ತ ಸೆಳೆಯಲು ಸಹ ಸಂಸ್ಥೆಯು ನಿರಂತರವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಹೇಳಿದರು.
ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ವೃತ್ತಿಪರ ನಿರ್ದೇಶಕ ಬಿ.ಮಹದೇವಸ್ವಾಮಿ ಮಾತನಾಡಿ, ಸಹಕಾರ ಸಂಘಗಳು ನಗರ ಹಾಗೂ ಗ್ರಾಮೀಣ ಸೇರಿದಂತೆ ಎಲ್ಲ ಕಡೆಗಳಲ್ಲೂ ಕಾಣಬಹುದು. ಆದರೆ, ಸೌಹಾರ್ದ ಸಹಕಾರಿ ಸಂಸ್ಥೆಗಳು ನಗರ ಪ್ರದೇಶಗಳಲ್ಲಿ ಮಾತ್ರ ಹೆಚ್ಚಿನ ಸಂಖ್ಯೆಯಲ್ಲಿದ್ದು, ಈ ಸಂಸ್ಥೆಗಳನ್ನು ಗ್ರಾಮೀಣ ಭಾಗಕ್ಕೂ ವಿಸ್ತರಿಸಬೇಕು ಎಂದರು.
ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ಅಧ್ಯಕ್ಷ ಜಿ. ನಂಜೇಗೌಡ ಕಾರ್ಯಕ್ರಮ ಉದ್ಘಾಟಿಸಿದರು. ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿರ್ದೇಶಕ ಎಸ್.ಕೆ. ಮಂಜುನಾಥ್, ಮೈಸೂರು, ಮಂಡ್ಯ ಮತ್ತು ಕೊಡಗು ಜಿಲ್ಲಾ ಸೌಹಾರ್ದ ಸಹಕಾರಿಗಳ ಒಕ್ಕೂಟ ಅಧ್ಯಕ್ಷ ಎಸ್.ಆರ್. ನಾರಾಯಣ ರಾವ್, ಮಂಡ್ಯ ಜಿಲ್ಲಾ ಸೌಹಾರ್ದ ಸಹಕಾರಿಗಳ ಒಕ್ಕೂಟ ಅಧ್ಯಕ್ಷ ಬಿ.ಟಿ. ಗುರುರಾಜ್ ಇದ್ದರು.