ಪುರುಷೋತ್ತಮ್ 
ಮೈಸೂರು

ನಾಡಿದ್ದು ನವಚೈತನ್ಯದ ಸಾರ್ಥಕ ಸಂಭ್ರಮ

ಹುಣಸೂರು: ಎಚ್.ಶಿವರಾಮೇಗೌಡರ ಕರ್ನಾಟಕ ರಕ್ಷಣಾ ವೇದಿಕೆ (ಕನ್ನಡಪರ ಸಂಘಟನೆಗಳ ಒಕ್ಕೂಟ), ಹುಣಸೂರು ಹಾಗೂ ರೋಟರಿ ಸಂಸ್ಥೆ ಸಹಯೋಗದಲ್ಲಿ ಸೆ.6ರಂದು ನವಚೈತನ್ಯದ ಸಾರ್ಥಕ ಸಂಭ್ರಮ ಕಾರ್ಯಕ್ರಮ ಆಯೋಜಿಸಲಾಗಿದೆ.
ಅಂದು ಮಧ್ಯಾಹ್ನ 3 ಗಂಟೆಗೆ ರೋಟರಿ ಭವನದಲ್ಲಿ ಹುಣಸೂರು ಘಟಕದ ನೂತನ ಪದಾಧಿಕಾರಿಗಳ ಜವಾಬ್ದಾರಿ ಸ್ವೀಕಾರ, ಸಂಘಟನೆಯ ಮುಂದಿನ ಕಾರ್ಯಚಟುವಟಿಕೆಗಳ ಕುರಿತು ಚರ್ಚೆ ಹಾಗೂ ಕನ್ನಡಪರ ಮತ್ತು ಸಮಾಜಮುಖಿ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿರುವ ಸಾಧಕರಿಗೆ ಸನ್ಮಾನ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಲಾಗಿದೆ ಎಂದು ಜಿಲ್ಲಾಧ್ಯಕ್ಷ ಪುರುಷೋತ್ತಮ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.