ಸರಗೂರು ತಾಲೂಕಿನ ಪಟ್ಟಣದ ತಹಸೀಲ್ದಾರ್ ಕಚೇರಿಯಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಡಾ.ಬಿ.ಆರ್. ಅಂಬೇಡ್ಕರ್ ಅವರ 135ನೇ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. 
ಮೈಸೂರು

ದೇಶ ಕಂಡ ಮಹಾನ್ ಮಾನವತಾವಾದಿ

ಪ್ರಮುಖ ಮುಖ್ಯಾಂಶಗಳು

  • ಮುಖ್ಯ ಶಿಕ್ಷಕ ರಘೋತ್ತಮ್ ಬಣ್ಣನೆ
ಸರಗೂರು: ವಿವಿಧ ಸಂಸ್ಕೃತಿ, ಧರ್ಮದವರು ನೆಲೆಸಿರುವ ಭಾರತ ದೇಶಕ್ಕೆ ಸಮರ್ಥವಾದ ಸಂವಿಧಾನವನ್ನು ಅಂಬೇಡ್ಕರ್ ನೀಡಿದ್ದಾರೆ ಎಂದು ಸರ್ಕಾರಿ ಬಾಲಕಿಯರ ಪ್ರೌಢಶಾಲೆ ಮುಖ್ಯಶಿಕ್ಷಕ ರಘೋತ್ತಮ್ ಹೇಳಿದರು.
ಪಟ್ಟಣದ ತಹಸೀಲ್ದಾರ್ ಕಚೇರಿ ಆವರಣದಲ್ಲಿ ಮಂಗಳವಾರ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಹಯೋಗದೊಂದಿಗೆ ಡಾ.ಬಿ.ಆರ್.ಅಂಬೇಡ್ಕರ್ 135ನೇ ಜಯಂತಿಯಲ್ಲಿ ಅಂಬೇಡ್ಕರ್ ಫೋಟೋಗೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿ, ಅಂಬೇಡ್ಕರ್ ಅವರು ದೇಶ ಕಂಡ ಮಹಾನ್ ಮಾನವತಾವಾದಿ ಎಂದು ಬಣ್ಣಿಸಿದರು.
ಎಸ್ಸಿ-ಎಸ್ಟಿ ಸಮಿತಿ ಸದಸ್ಯ ಕುರ್ಣೇಗಾಲ ಬೆಟ್ಟ ಸ್ವಾಮಿ ಮಾತನಾಡಿ ಅಂಬೇಡ್ಕರ್ ಅವರ ಚಿಂತೆಗಳನ್ನು ಪುಸ್ತಕಕ್ಕೆ ಸೀಮಿತಗೊಳಿಸದೆ ಪ್ರತಿಯೊಬ್ಬರೂ ಮೈಗೂಡಿಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.
ಪಪಂ ಸದಸ್ಯ ಶ್ರೀನಿವಾಸ, ಆದಿಕರ್ನಾಟಕ ಮಹಾಸಭಾ ಮಾಜಿ ಅಧ್ಯಕ್ಷ ಸರಗೂರು ಶಿವಣ್ಣ, ತಹಸೀಲ್ದಾರ್ ಮೋಹನಕುಮಾರಿ, ಕಾಂಗ್ರೆಸ್ ಪಕ್ಷದ ಟೌನ್ ಹಾಗೂ ಆರ್ಯ ಈಡಿಗ ಸಮಾಜದ ತಾಲೂಕು ಅಧ್ಯಕ್ಷ ಎಸ್.ಎನ್.ನಾಗರಾಜು, ಆದಿಕರ್ನಾಟಕ ಮಹಾಸಭಾ ಅಧ್ಯಕ್ಷ ಇಟ್ನ ರಾಜಣ್ಣ ಮಾತನಾಡಿದರು.
ಕಾರ್ಯಕ್ರಮದಲ್ಲಿ ಇಒ ಪ್ರೇಮ್ ಕುಮಾರ್, ವೃತ್ತ ನಿರೀಕ್ಷಕ ಪ್ರಸನ್ನ ಕುಮಾರ್, ಪಪಂ ಸದಸ್ಯ ಚೆಲುವಕೃಷ್ಣ, ಜಿಪಂ ಮಾಜಿ ಸದಸ್ಯ ಚಿಕ್ಕವೀರನಾಯಕ, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಕೆ.ಕೆಂಡಗಣ್ಣಸ್ವಾಮಿ, ಮುಖಂಡರಾದ ನಾಗರಾಜು, ಸ್ವಾಮಿ, ಬಾಬು ಜಗಜೀವನರಾಮ್ ವಿಚಾರ ವೇದಿಕೆ ಅಧ್ಯಕ್ಷ ಕೊತ್ತೆಗಾಲ ತಿಮ್ಮಯ್ಯ, ಕಸಾಪ ಪ್ರಧಾನ ಕಾರ್ಯದರ್ಶಿ ನಿಂಗರಾಜು, ಪುಟ್ಟ ಹನುಮಯ್ಯ, ಅಂಬೇಡ್ಕರ್ ಭವನ ಟ್ರಸ್ಟ್ ಅಧ್ಯಕ್ಷ ಸಣ್ಣಸ್ವಾಮಿ, ಸರಗೂರು ಅಭಿವೃದ್ಧಿ ಹೋರಾಟ ಸಮಿತಿ ಸಂಚಾಲಕ ಸರಗೂರು ಕೃಷ್ಣ, ದಸಂಸ ಸಂಯೋಜಕ ಜಿಲ್ಲಾ ಉಪಾಧ್ಯಕ್ಷರಾದ ಹುಣಗಹಳ್ಳಿ ಗೋವಿಂದ, ಅಣ್ಣಯ್ಯಸ್ವಾಮಿ, ಗ್ರಾಮೀಣ ಮಹೇಶ್, ಸೂರ್ಯ ಕುಮಾರ್, ಹೂವಿನಕೊಳ ಮಹೇಂದ್ರ, ಯೂತ್ ಕಾಂಗ್ರೆಸ್ ಅಧ್ಯಕ್ಷ ಮಸಹಳ್ಳಿ ನವೀನ್, ಕೂಡಗಿ ಗೋವಿಂದರಾಜು, ಮಹದೇವಸ್ವಾಮಿ, ದೇವರಾಜು, ಪಪಂ ಮುಖ್ಯಾಧಿಕಾರಿ ಎಸ್.ಕೆ.ಸಂತೋಷ ಕುಮಾರ್, ಕೆಇಬಿ ಇಲಾಖೆ ಎಇಇ ರಮೇಶ್, ಎಂಆರ್‌ಡಬ್ಲುೃ ದೇವರಾಜು, ತೋಟಗಾರಿಕೆ ಇಲಾಖೆ ಸಿಬ್ಬಂದಿ ಗೋವಿಂದರಾಜು, ಪಶುಸಂಗೋಪನಾ ಇಲಾಖೆ ಅಧಿಕಾರಿ ಪಾಟೀಲ್, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಗುಣದರ್, ಮಹದೇವಸ್ವಾಮಿ, ಬೋಗಯ್ಯ, ನಾಗರಾಜು, ಸಿಬ್ಬಂದಿ ವರ್ಗದವರು ಉಪ ತಹಸೀಲ್ದಾರ್ ಸುನೀಲ್, ಮನೋಹರ್, ರಾಜಸ್ವ ನಿರೀಕ್ಷಕ ರವಿಚಂದ್ರನ್, ಮುಜೀಬ್, ನಾಗರಾಜು, ಆಶಾ ಕಾರ್ಯಕರ್ತೆಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.
ಪಟ್ಟಣದ ನಾಲ್ಕನೇ ವಾರ್ಡಿನ ಬಲಗೈ ಸಮಾಜದ ಮುಖಂಡರು ಅಂಬೇಡ್ಕರ್ ಭವನದಿಂದ ಪ್ರಮುಖ ಬೀದಿಗಳಲ್ಲಿ ಹಾಗೂ ತಹಸೀಲ್ದಾರ್ ಕಚೇರಿವರಗೂ ಬೈಕ್ ರ‌್ಯಾಲಿ ನಡೆಸಿದರು.