ಹುಣಸೂರು ನಗರದ ಸರ್ಕಾರಿ ಬಾಲಕಿಯರ ಪದವಿಪೂರ್ವ ಕಾಲೇಜು(ಪ್ರೌಢಶಾಲಾ ವಿಭಾಗ)ನಲ್ಲಿ ಆಯೋಜಿಸಿದ್ದ ಕಾರ್ಯಕ್ರಮವನ್ನು ಭಾಗ್ಯಮ್ಮ ಉದ್ಘಾಟಿಸಿದರು. ಬಿಇಒ ಮಹದೇವ್, ಎಪಿಪಿ ಎಚ್.ಡಿ.ಪಾರ್ವತಿ, ಗೀತಾ, ಎಸ್.ಶಿವಣ್ಣೇಗೌಡ, ಸಿ. ಹರೀಶ್ ಕುಮಾರ್ ಇತರರಿದ್ದರು.
- ಹೆಚ್ಚುವರಿ ಸಿವಿಲ್ ನ್ಯಾಯಾಧೀಶೆ ಭಾಗ್ಯಮ್ಮ
- ನಗರದ ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜಿ(ಪ್ರೌಢಶಾಲಾ ವಿಭಾಗ)ನಲ್ಲಿ
ಹುಣಸೂರು: ಗ್ರಾಹಕರ ಹಕ್ಕುಗಳನ್ನು ರಕ್ಷಿಸಲು ಕಾನೂನಿನ ಬಲವಿದ್ದು, ಅನ್ಯಾಯಕ್ಕೊಳಗಾದ ಗ್ರಾಹಕರು ನ್ಯಾಯಾಲಯದ ಮೂಲಕ ನ್ಯಾಯ ಪಡೆಯಬಹುದಾಗಿದೆ ಎಂದು ಹೆಚ್ಚುವರಿ ಸಿವಿಲ್ ನ್ಯಾಯಾಧೀಶೆ ಭಾಗ್ಯಮ್ಮ ತಿಳಿಸಿದರು.
ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ ಮತ್ತು ಶಾಲಾ ಶಿಕ್ಷಣ ಇಲಾಖೆ ಸಹಯೋಗದಲ್ಲಿ ಮಂಗಳವಾರ ನಗರದ ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜಿ(ಪ್ರೌಢಶಾಲಾ ವಿಭಾಗ)ನಲ್ಲಿ ಆಯೋಜಿಸಿದ್ದ ವಿಶ್ವ ಗ್ರಾಹಕರ ದಿನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ವ್ಯವಸ್ಥೆಯೊಂದರಲ್ಲಿ ತೊಡಕುಗಳು ಕಾಣಿಸಿಕೊಂಡಾಗ ಮಾತ್ರ ಅದನ್ನು ಸರಿಪಡಿಸಲು ಕಾನೂನನ್ನು ರಚಿಸಲಾಗುತ್ತದೆ. ವಿಶ್ವಾದ್ಯಂತ ಗ್ರಾಹಕರು ವರ್ತಕರಿಂದ ತಮಗಾಗುತ್ತಿರುವ ಅನ್ಯಾಯಗಳ ವಿರುದ್ಧ ದನಿ ಎತ್ತಲು ಆರಂಭಿಸಿದ ವೇಳೆ ಗ್ರಾಹಕರ ಹಕ್ಕುಗಳ ಸಂರಕ್ಷಣೆಗೆ ದೇಶಗಳು ಕಾನೂನನ್ನು ಜಾರಿಗೆ ತರಲಾಯಿತು. ಇಂತಹ ಕಾನೂನು ನಮ್ಮ ದೇಶದಲ್ಲಿ 1986ರಲ್ಲಿ ರೂಪುಗೊಂಡು ಜಾರಿಯಾಯಿತು. ಬೇಡಿಕೆ ಮತ್ತು ಪೂರೈಕೆಗಳ ಸಮತೋಲನ ಸಾಧಿಸುವತ್ತ ಸರ್ಕಾರಗಳು ಗಮನಹರಿಸಿ ನಕಲಿ ಬೇಡಿಕೆಯ ಮೂಲಕ ಬೆಲೆ ಏರಿಕೆಯನ್ನು ನಿಯಂತ್ರಿಸಲು ಮತ್ತು ಗ್ರಾಹಕರಿಗೆ ಆಗುವ ಅನ್ಯಾಯಗಳ ವಿರುದ್ಧ ಕಾನೂನನ್ನು ರಚಿಸಲಾಯಿತು. ವಿದ್ಯಾರ್ಥಿಗಳು ಗ್ರಾಹಕರ ಸಂರಕ್ಷಣೆ ಕಾಯ್ದೆಗಳ ಕುರಿತಾಗಿ ತಿಳಿದುಕೊಂಡು ಇತರರಿಗೂ ಅರಿವು ಮೂಡಿಸಬೇಕೆಂದು ತಿಳಿಸಿದರು.
ಅಧ್ಯಕ್ಷತೆ ವಹಿಸಿದ್ದ ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಪಿ.ಮಹದೇವ್ ಮಾತನಾಡಿದರು. ಸಹಾಯಕ ಸರ್ಕಾರಿ ಅಭಿಯೋಜಕಿ ಎಚ್.ಡಿ.ಪಾರ್ವತಿ ವಿದ್ಯಾರ್ಥಿಗಳು ಮೊಬೈಲ್‌ನ ಹಿತಮಿತ ಬಳಕೆಗೆ ಆದ್ಯತೆ ನೀಡಿರೆಂದು ಕಿವಿಮಾತು ಹೇಳಿದರು. ವಕೀಲ ಎನ್.ವೆಂಕಟೇಶ್ ಗ್ರಾಹಕರ ಹಕ್ಕುಗಳ ಕುರಿತು ವಿಶೇಷ ಉಪನ್ಯಾಸ ನೀಡಿದರು. ತಾಲೂಕು ವಕೀಲರ ಸಂಘದ ಅಧ್ಯಕ್ಷ ಎಸ್.ಶಿವಣ್ಣೇಗೌಡ, ಉಪಾಧ್ಯಕ್ಷ ಸಿ.ಹರೀಶ್‌ಕುಮಾರ್, ಉಪಪ್ರಾಂಶುಪಾಲೆ ಗೀತಾ, ಇಸಿಒ ಸುನಿಲ್, ಶಿಕ್ಷಕ ಯೋಗೇಶ್ ಇತರರಿದ್ದರು.