ಬನ್ನೂರಿನ ರೋಟರಿ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಪರಿಸರ ಜಾಗೃತಿ ವೇದಿಕೆ ಅಧ್ಯಕ್ಷ ಡಾ.ಮಹೇಂದ್ರಸಿಂಗ್ ಕಾಳಪ್ಪ ಪ್ರತಿ ವಿದ್ಯಾರ್ಥಿಗಳಿಗೆ ಸಸಿ ವಿತರಣೆ ಮಾಡಿದರು. ರೋಟರಿ ಶಾಲಾ ಮುಖ್ಯ ಶಿಕ್ಷಕಿ ರಾಧ, ನಂಜುಂಡಸ್ವಾಮಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.
- ಪರಿಸರ ಜಾಗೃತಿ ವೇದಿಕೆ ಅಧ್ಯಕ್ಷ ಡಾ.ಮಹೇಂದ್ರಸಿಂಗ್ ಕಾಳಪ್ಪ ಹೇಳೀಕೆ
ಬನ್ನೂರು: ಪ್ರತಿ ಜೀವಿಗಳ ಪೋಷಣೆಯಲ್ಲಿ ಪರಿಸರ ಪ್ರಮುಖ ಪಾತ್ರವಹಿಸಲಿದೆ ಎಂದು ಪರಿಸರ ಜಾಗೃತಿ ವೇದಿಕೆ ಅಧ್ಯಕ್ಷ ಡಾ.ಮಹೇಂದ್ರಸಿಂಗ್ ಕಾಳಪ್ಪ ತಿಳಿಸಿದರು.
ಪಟ್ಟಣದ ರೋಟರಿ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಗುರುವಾರ ಆಯೋಜಿಸಲಾಗಿದ್ದ ಪರಿಸರ ಜಾಗೃತಿ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಸಸಿ ವಿತರಣೆ ಮಾಡಿ ಮಾತನಾಡಿದರು.
ವಿಶ್ವದಾದ್ಯಂತ ಪರಿಸರದ ಬಗ್ಗೆ ಜಾಗೃತಿ ಮತ್ತು ಪರಿಸರ ರಕ್ಷಣೆಗೆ ಉತ್ತೇಜನ ನೀಡಲು ಈ ದಿನವನ್ನು ಆಚರಣೆ ಮಾಡಲಾಗುತ್ತದೆ ಎಂದು ತಿಳಿಸಿದರು.
ಪ್ರತಿ ವರ್ಷ ಜೂನ್ 5ರಂದು ಪ್ರತಿಯೊಬ್ಬರಲ್ಲು ಪರಿಸರದ ಬಗ್ಗೆ ಕಾಳಜಿ ಮೂಡಿಸುವ ಸಲುವಾಗಿ ವಿಶ್ವ ಪರಿಸರ ದಿನವನ್ನು ಆಚರಿಸಲಾಗುತ್ತದೆ ಎಂದು ಹೇಳಿದರು. ಪ್ರಕೃತಿಯ ಸಂವೃದ್ಧಿ ಆರೋಗ್ಯಕರ ಜೀವನ ಮತ್ತು ಭೂಮಿಯ ಮೇಲಿನ ಪ್ರತಿಯೊಂದು ಜೀವಿಯ ಜೀವನದ ಅಸ್ಥಿತ್ವಕ್ಕೆ ಕಾರಣವಾಗಿದೆ ಎಂದರು.
ಭೂಮಿ ಮೇಲಿನ ಪ್ರತಿಯೊಂದು ಜೀವ ಸಂಕುಲಕ್ಕೂ ಆಹಾರ , ಗಾಳಿ, ನೀರು ಇತರೆ ಅಗತ್ಯಗಳಿಗೆ ಪರಿಸರವನ್ನು ಅವಲಂಬಿಸಿದೆ. ಇತ್ತೀಚಿನ ದಿನದಲ್ಲಿ ಮಾನವನು ಆಧುನಿಕ ಬದುಕಿನ ಗೀಳಿಗೆ ಬಿದ್ದು, ಪರಿಸರವನ್ನು ನಾಶ ಮಾಡುತ್ತಿದ್ದು, ಮಾನವನ ದುರಾಸೆಯಿಂದ ಗಾಳಿ, ನೀರು, ಮಣ್ಣು ಸೇರಿದಂತೆ ಪರಿಸರದ ಪ್ರತಿಯೊಂದು ಅಂಶವು ಕಲುಷಿತವಾಗುತ್ತದೆ. ಮನುಷ್ಯ ತನ್ನ ಅಭಿವೃದ್ಧಿಗಾಗಿ ಅರಿವಿಲ್ಲದಂತೆ ಪರಿಸರ ಹಾಳು ಮಾಡುತ್ತಿದ್ದಾನೆ ಎಂದರು. ಜಾಗೃತಿ ಮೂಢಿಸಲು ಪ್ರತಿವರ್ಷ 143ಕ್ಕು ಹೆಚ್ಚು ದೇಶಗಳು ವಿಶ್ವ ಪರಿಸರ ದಿನವನ್ನು ಆಚರಣೆ ಮಾಡುವ ಮೂಲಕ, ಪರಿಸರ ಉಳಿಸುವಂತ ನಿಟ್ಟಿನಲ್ಲಿ ವಿಶ್ವ ಪರಿಸರ ದಿನವನ್ನು ವಿವಿಧ ಧ್ಯೇಯ ವಾಕ್ಯದೊಂದಿಗೆ ಆಚರಿಸಲಾಗುತ್ತಿದೆ ಎಂದು ತಿಳಿಸಿದರು.
ಪ್ರತಿ ವಿದ್ಯಾರ್ಥಿಗಳು ತಮ್ಮ ಹುಟ್ಟುಹಬ್ಬ, ತಂದೆತಾಯಿ ಮದುವೆ ದಿನ, ಸಮಾರಂಭದ ದಿನ, ಮರ ಕಡಿದ ಜಾಗ, ಬೆಟ್ಟಗಳನ್ನು ಗುರುತಿಸಿ ಗಿಡ ನೆಡುವಂತ ಕಾರ್ಯ ಮಾಡಿ, ಪೋಷಣೆ ಮಾಡಿದರೆ ಮುಂದಿನ ಪೀಳಿಗೆಗೆ ಪರಿಸರವನ್ನು ಉಳಿಸಬಹುದು ಎಂದು ಕರೆ ನೀಡಿದರು. ರೋಟರಿ ಶಾಲಾ ಮುಖ್ಯ ಶಿಕ್ಷಕಿ ರಾಧ, ನಂಜುಂಡಸ್ವಾಮಿ ಸೇರಿದಂತೆ ಶಿಕ್ಷಕ ವರ್ಗದವರು ಹಲವರು ಉಪಸ್ಥಿತರಿದ್ದರು.