ಪಿರಿಯಾಪಟ್ಟಣದ ಶ್ರೀ ಆದಿಚುಂಚನಗಿರಿ ಶಿಕ್ಷಣ ಸಂಸ್ಥೆ ವತಿಯಿಂದ ಏರ್ಪಡಿಸಲಾಗಿದ್ದ ರಕ್ತದಾನ ಶಿಬಿರದಲ್ಲಿ ಕಾಲೇಜಿನ ಉಪನ್ಯಾಸಕರು ಮತ್ತು ಶಿಕ್ಷಕರು ರಕ್ತದಾನ ಮಾಡಿದರು. ಕಾಲೇಜಿನ ಆಡಳಿತಾಧಿಕಾರಿ ಸುಧಾಕರ್, ಪ್ರಾಂಶುಪಾಲ ಕೆ.ಆರ್.ಪ್ರವೀಣ್, ಕೃಷ್ಣೇಗೌಡ, ಉದಯ್ ಇತರರು ಇದ್ದರು.
- Balgangadhar Sri
- Sri Adichunchanagiri Educational Institution
ಪಿರಿಯಾಪಟ್ಟಣ: ಶ್ರೀ ಬಾಲಗಂಗಾಧರನಾಥ ಸ್ವಾಮೀಜಿಗಳು ಮೂರುವರೆ ದಶಕಗಳ ಕಾಲ ಶ್ರೀಮಠವನ್ನು ಮುನ್ನಡೆಸಿ ತ್ರಿವಿಧ ದಾಸೋಹದಲ್ಲಿ ತಮ್ಮನ್ನು ಅರ್ಪಿಸಿಕೊಂಡಿದ್ದರು ಎಂದು ಪಟ್ಟಣದ ಶ್ರೀ ಆದಿಚುಂಚನಗಿರಿ ಶಿಕ್ಷಣ ಸಂಸ್ಥೆಯ ಪ್ರಾಂಶುಪಾಲ ಕೆ.ಆರ್.ಪ್ರವೀಣ್ ತಿಳಿಸಿದರು.
ಶ್ರೀಬಾಲಗಂಗಾಧರನಾಥ ಮಹಾಸ್ವಾಮೀಜಿ ಅವರ 13ನೇ ವರ್ಷದ ಪುಣ್ಯ ಸಂಸ್ಮರಣೆ ದಿನಾಚರಣೆ ಅಂಗವಾಗಿ ಇತ್ತೀಚೆಗೆ ಪಟ್ಟಣದ ಶ್ರೀಆದಿಚುಂಚನಗಿರಿ ಶಿಕ್ಷಣ ಸಂಸ್ಥೆ ವತಿಯಿಂದ ಏರ್ಪಡಿಸಲಾಗಿದ್ದ ರಕ್ತದಾನ ಶಿಬಿರದಲ್ಲಿ ಮಾತನಾಡಿದರು. ದೇಶದ ಶೈಕ್ಷಣಿಕ ಮತ್ತು ಆರೋಗ್ಯ ಕ್ಷೇತ್ರದಲ್ಲಿ ಮಹತ್ತರ ಕ್ರಾಂತಿಯನ್ನೇ ಸೃಷ್ಟಿಸಿದ ಶ್ರೀಗಳು ನೂರಾರು ಸಂಸ್ಥೆಗಳನ್ನು ಸ್ಥಾಪಿಸುವ ಮೂಲಕ ವಿಶಿಷ್ಟ ಕೊಡುಗೆ ನೀಡಿದ್ದಾರೆ ಎಂದು ತಿಳಿಸಿದರು.
ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಘಟಕದ ಅಧ್ಯಕ್ಷ ನವೀನ್ ಕುಮಾರ್ ಮಾತನಾಡಿ, ಬಾಲಗಂಗಾಧರನಾಥ ಸ್ವಾಮೀಜಿಗಳು ದೈವಾಂಶ ಸಂಭೂತರಾಗಿದ್ದು, ಅನ್ನ, ಅಕ್ಷರ, ಆರೋಗ್ಯ ದಾಸೋಹ ಮಾಡಿ ನಾಡಿನಾದ್ಯಂತ ತಮ್ಮದೇ ಆದ ಕೊಡುಗೆಯನ್ನು ನೀಡಿ ಹೋಗಿದ್ದಾರೆ ಎಂದು ತಿಳಿಸಿದರು.
ಸುಮಾರು 60ಕ್ಕೂ ಹೆಚ್ಚು ವಿದ್ಯಾರ್ಥಿಗಳು ಮತ್ತು ಶಿಕ್ಷಕರು ರಕ್ತದಾನ ಮಾಡುವುದರ ಮೂಲಕ ಪೂಜ್ಯ ಸ್ವಾಮೀಜಿ ಅವರ ಪುಣ್ಯಸ್ಮರಣೆಯನ್ನು ಅರ್ಥಪೂರ್ಣವಾಗಿಸಿದರು.
ತಾಲೂಕು ಒಕ್ಕಲಿಗರ ಹಿತರಕ್ಷಣಾ ಸಮಿತಿ ಅಧ್ಯಕ್ಷ ಕೃಷ್ಣೇಗೌಡ, ಮಾಜಿ ಅಧ್ಯಕ್ಷ ಉದಯ್, ತಾ.ವರ್ತಕರ ಸಂಘದ ಅಧ್ಯಕ್ಷ ರಾಜೇಗೌಡ, ಉಪಾಧ್ಯಕ್ಷ ಮೋಹನ್, ಮುಖಂಡರಾದ ಶ್ರೀನಿವಾಸ್, ಸುಬ್ರಹ್ಮಣ್ಯ, ಕಾಲೇಜಿನ ಆಡಳಿತಾಧಿಕಾರಿ ಸುಧಾಕರ್, ಉಪನ್ಯಾಸಕರಾದ ಬಿ.ವೈ.ಕಿರಣ್, ದಿವ್ಯಾ, ಸ್ವಾಮಿಗೌಡ, ಮಹಾದೇವ್, ಸ್ವಾಮಿ, ಚನ್ನಕೇಶವ ವಿಜಯ್, ನಾಗನಂದ್, ಮೋಹನ್, ಪಲ್ಲವಿ, ಪ್ರೀತು, ಶ್ರುತಿ ಹಾಗೂ ನೂರಾರು ವಿದ್ಯಾರ್ಥಿಗಳು ಹಾಜರಿದ್ದರು.