ನಂಜನಗೂಡು ತಾಲೂಕಿನ ಮಡುವಿನಹಳ್ಳಿ ಗ್ರಾಮದ ರೈತನ ಜಮೀನಿನಲ್ಲಿ ಹುಲಿ ಹೆಜ್ಜೆ ಗುರುತು ಕಂಡುಬಂದಿರುವುದು. 
ಮೈಸೂರು

ಮಡುವಿನಹಳ್ಳಿ ಗ್ರಾಮದಲ್ಲಿ ಹುಲಿ ಹೆಜ್ಜೆ ಗುರುತು ಪತ್ತೆ

ಪ್ರಮುಖ ಮುಖ್ಯಾಂಶಗಳು

  • ಹುಲಿ ಹೆಜ್ಜೆ ಗುರುತು ಪತ್ತೆ
ನಂಜನಗೂಡು: ತಾಲೂಕಿನ ಮಡುವಿನಹಳ್ಳಿ ಗ್ರಾಮದ ರೈತ ಗುರುಮಲ್ಲ ಅವರ ಜಮೀನಿನಲ್ಲಿ ಭಾನುವಾರ ರಾತ್ರಿ ಹುಲಿ ಓಡಾಡಿರುವುದು ಹೆಜ್ಜೆ ಗುರುತಿನಿಂದ ತಿಳಿದು ಬಂದಿದೆ.
ಸೋಮವಾರ ಬೆಳಗ್ಗೆ ಜಮೀನಿಗೆ ತೆರಳಿದ ರೈತರು ಭಯಭೀತರಾಗಿದ್ದಾರೆ. ತಕ್ಷಣವೇ ಅರಣ್ಯ ಅಧಿಕಾರಿಗಳು ಹುಲಿ ಸೆರೆಗೆ ಬೋನು ಅಳವಡಿಸಬೇಕು ಎಂದು ಒತ್ತಾಯಿಸಿದ್ದಾರೆ.