accidents 
ಮೈಸೂರು

ಪ್ರತ್ಯೇಕ ಎರಡು ಅಪಘಾತದಲ್ಲಿ ಇಬ್ಬರು ಬೈಕ್ ಸವಾರರ ಸಾವು

ಅವಿನಾಶ್ ಜೈನಹಳ್ಳಿ
ನಗರದಲ್ಲಿ ಭಾನುವಾರ ಸಂಭವಿಸಿದ ಪ್ರತ್ಯೇಕ ಎರಡು ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಮತಪಟ್ಟಿದ್ದಾರೆ.
ಎನ್.ಆರ್.ಮೊಹಲ್ಲಾದ ಶಿವಾಜಿ ರಸ್ತೆಯಲ್ಲಿ ಭಾನುವಾರ ಬೆಳಗ್ಗೆ ಕಾರು ಡಿಕ್ಕಿ ಹೊಡೆದು ಬೈಕ್ ಸವಾರ ರಾಜೀವ್ ನಗರದ ನಿವಾಸಿ, ಖಾಸಗಿ ಕಂಪನಿ ಉದ್ಯೋಗಿ ಜಫ್ರಿ ವಿಜಯ್‌ಕುವಾರ್(40) ಮತಪಟ್ಟಿದ್ದಾರೆ.
ಬೆಳಗ್ಗೆ 9 ಗಂಟೆ ಸಮಯದಲ್ಲಿ ವಿಜಯ್ ಕುವಾರ್ ಅವರು ಹೋಟೆಲ್‌ನಲ್ಲಿ ತಿಂಡಿ ಪಾರ್ಸಲ್ ತೆಗೆದುಕೊಂಡು ಮನೆಗೆ ಹಿಂದಿರುಗುತ್ತಿದ್ದಾಗ ಎದುರಿನಿಂದ ಅತಿ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದಿದೆ.
ಟನೆಯಿಂದ ವಿಜಯ್ ಕುವಾರ್‌ಗೆ ತೀವ್ರ ಪೆಟ್ಟಾಗಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಮತಪಟ್ಟಿದ್ದಾರೆ.
ಈ ಸಂಬಂಧ ಎನ್.ಆರ್.ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಂಜನಗೂಡು ರಸ್ತೆಯ ಬಂಡಿಪಾಳ್ಯದ ಎಂಪಿಎಂಸಿ ಬಳಿ ಭಾನುವಾರ ಬೆಳಗ್ಗೆ ನಡೆದ ಮತ್ತೊಂದು ಅಪಘಾತದಲ್ಲಿ ಕೆಎಸ್‌ಆರ್‌ಟಿಸಿ ಬಸ್‌ಗೆ ಹಿಂದಿನಿಂದ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮತಪಟ್ಟಿದ್ದಾರೆ.
ಕೆಸರೆ ನಿವಾಸಿ, ಟೈಲ್ಸ್ ಕಾರ್ಮಿಕ ರಾಘವೇಂದ್ರ(43) ಮತರು.
ಭಾನುವಾರ ಬೆಳಗ್ಗೆ ರಾವೇಂದ್ರ ಅವರು ಬೈಕ್‌ನಲ್ಲಿ ನಂಜನಗೂಡಿಗೆ ತೆರಳುವ ವೇಳೆ ಮುಂದೆ ಸಾಗುತ್ತಿದ್ದ ಸಾರಿಗೆ ಬಸ್‌ಗೆ ಡಿಕ್ಕಿ ಹೊಡೆದಿದ್ದು, ತೀವ್ರವಾಗಿ ಗಾಯಗೊಂಡಿದ್ದಾರೆ.
ಈ ಸಂಬಂಧ ಕೆ.ಆರ್.ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.