ನಂಜನಗೂಡು ತಾಲೂಕಿನ ಗೋಳೂರು ಗ್ರಾಮದ ಗ್ರಾಮದೇವತೆ ಜಾತ್ರೆ ಅಂಗವಾಗಿ ಹೆಣ್ಣು ಮಕ್ಕಳ ವಿಡಿಯೋ ಮಾಡಿದರೆ ದಂಡ ವಿಧಿಸುವ ಬಗ್ಗೆ ಗ್ರಾಮದ ಚಿಕ್ಕಜವರ ಡಂಗೂರ ಸಾರುತ್ತಿರುವ ದೃಶ್ಯ. 
ಮೈಸೂರು

ಜಾತ್ರೆಯಲ್ಲಿ ವಿಡಿಯೋ ಚಿತ್ರೀಕರಣ ನಿಷಿದ್ಧ

ನಾಗೇಶ ಎಸ್
ನಂಜನಗೂಡು: ತಾಲೂಕಿನ ಗೋಳೂರು ಗ್ರಾಮದಲ್ಲಿ ನಡೆಯಲಿರುವ ಗ್ರಾಮದೇವತೆ ಜಾತ್ರೆ ಹಿನ್ನೆಲೆಯಲ್ಲಿ ಗ್ರಾಮಸ್ಥರು ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದ್ದಾರೆ.
ಜಾತ್ರೆ ವೇಳೆ ಕುಡಿದು ಗಲಾಟೆ ಮಾಡುವವರು ಅಥವಾ ಹೆಣ್ಣು ಮಕ್ಕಳ ವಿಡಿಯೋ ಮಾಡುವವರ ವಿರುದ್ಧ 30 ಸಾವಿರ ರೂ. ದಂಡ ವಿಧಿಸಲಾಗುತ್ತದೆ ಎಂದು ಎಚ್ಚರಿಕೆ ನೀಡಲಾಗಿದೆ. ಫೆ.10ರಿಂದ ಮೂರು ದಿನಗಳ ಕಾಲ ಜಾತ್ರೆ ನಡೆಯಲಿದ್ದು, ಯಾವುದೇ ರೀತಿಯ ವಿಡಿಯೋ ಚಿತ್ರೀಕರಣಕ್ಕೆ ಅವಕಾಶ ಇಲ್ಲ ಎಂದು ಗ್ರಾಮದ ಮುಖಂಡರು ಸ್ಪಷ್ಟಪಡಿಸಿದ್ದಾರೆ.
ಈ ಸಂಬಂಧ ಗ್ರಾಮದ ನಿವಾಸಿ ಚಿಕ್ಕಜವರ ಅವರ ಮೂಲಕ ಡಂಗೂರ ಸಾರಲಾಗಿದ್ದು, ಸಾರ್ವಜನಿಕರಿಗೆ ಮುಂಚಿತವಾಗಿ ಎಚ್ಚರಿಕೆ ನೀಡಲಾಗಿದೆ. ಜಾತ್ರೆಯ ಶಾಂತಿ, ಸುವ್ಯವಸ್ಥೆ ಮತ್ತು ಮಹಿಳೆಯರ ಗೌರವ ಕಾಪಾಡುವ ಉದ್ದೇಶದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ.]