ವಿಆರ್‌ಎಲ್ ಲಾರಿ ಚಾಲಕನ ಮೇಲೆ ಶುಕ್ರವಾರ ರಾತ್ರಿ ದುಷ್ಕರ್ಮಿಗಳು ನಡೆಸಿದ್ದ ಹಲ್ಲೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ನಗರ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.
ಲಾರಿ ಚಾಲಕ ಬೆಳಗಾವಿ ಜಿಲ್ಲೆಯ ಪತ್ರೇಪ್ಪ ಯಲ್ಲಪ್ಪ ವತ್ರ (30) ಮೇಲೆ ಏಳು ಜನ ದುಷ್ಕರ್ಮಿಗಳು ತೀವ್ರವಾಗಿ ಹಲ್ಲೆ ನಡೆಸಿ, ಅಕೌಂಟ್‌ನಲ್ಲಿ ಇದ್ದ ಆರು ಸಾವಿರ ರೂ.ಗಳನ್ನು ಬಲವಂತವಾಗಿ ತಮ್ಮ ಖಾತೆಗೆ ವರ್ಗಾವಣೆ ಮಾಡಿಸಿಕೊಂಡಿದ್ದರು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಹೆಬ್ಬಾಳು ಠಾಣಾ ಪೊಲೀಸರು ತನಿಖೆ ಚುರುಕುಗೊಳಿಸಿದ್ದು, ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.