ಸರಗೂರು ತಾಲೂಕಿನ ಪಟ್ಟಣ ಪಂಚಾಯಿತಿ ನೂತನ ಅಧ್ಯಕ್ಷೆ ಚೈತ್ರ ಸ್ವಾಮಿ ಅಧಿಕಾರ ಸ್ವೀಕರಿಸಿದರು. ಶ್ರೀನಿವಾಸ, ಚೆಲುವ ಕೃಷ್ಣ ಇತರರು ಇದ್ದರು. 
ಮೈಸೂರು

ಅನುದಾನ ಪಡೆದು ಅಭಿವೃದ್ಧಿಗೆ ಶ್ರಮ

ಶಿವಶಂಕರ್ ಎಂ. ಹೆಬ್ಬಳ್ಳ

ಪ್ರಮುಖ ಮುಖ್ಯಾಂಶಗಳು

  • ಸರಗೂರು ಪ.ಪಂ. ಅಧ್ಯಕ್ಷ ಚೈತ್ರಾಸ್ವಾಮಿ ಭರವಸೆ
ಸರಗೂರು: ನನ್ನ ಅಧಿಕಾರದ ಅವಧಿಯಲ್ಲಿ ಪಟ್ಟಣ ಪಂಚಾಯಿತಿ ಸದಸ್ಯರು, ಸಿಬ್ಬಂದಿ ಹಾಗೂ ಸಾರ್ವಜನಿಕರ ಸಹಕಾರ ಪಡೆದು ಸರ್ಕಾರದಿಂದ ಬಿಡುಗಡೆಯಾದ ಅನುದಾನಗಳನ್ನು ಸದ್ಬಳಕೆ ಮಾಡಿಕೊಂಡು ಅಭಿವೃದ್ಧಿಗೆ ಮುಂದಾಗುತ್ತೇನೆ ಎಂದು ಪಟ್ಟಣ ಪಂಚಾಯಿತಿ ನೂತನ ಅಧ್ಯಕ್ಷೆ ಚೈತ್ರಾ ಸ್ವಾಮಿ ತಿಳಿಸಿದರು.
ಪಟ್ಟಣ ಪಂಚಾಯಿತಿ ಅಧ್ಯಕ್ಷರ ಕೊಠಡಿಯಲ್ಲಿ ಸೋಮವಾರ ಪೂಜೆ ಸಲ್ಲಿಸಿ ನಂತರ ಅಧಿಕಾರ ಸ್ವೀಕರಿಸಿ ಮಾತನಾಡಿದರು. ಪಟ್ಟಣದ ಅಭಿವೃದ್ಧಿಗೆ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪ ಹಾಗೂ ಸಂಸದ ಸುನೀಲ್ ಬೋಸ್ ಹಾಗೂ ಶಾಸಕ ಅನಿಲ್ ಚಿಕ್ಕಮಾದು ಅವರನ್ನು ಜತೆಗೂಡಿ ಸರ್ಕಾರದ ಅನುದಾನವನ್ನು ಸದ್ಬಳಕೆ ಮಾಡಿಕೊಂಡು ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸುತ್ತೇನೆ ಎಂದು ತಿಳಿಸಿದರು.
ಪಪಂ ಸದಸ್ಯರಾದ ಶ್ರೀನಿವಾಸ, ಚೆಲುವ ಕೃಷ್ಣ, ಸಣ್ಣ ತಾಯಮ್ಮ, ಅಕ್ರಮ ಸಕ್ರಮ ಸಮಿತಿ ಸದಸ್ಯ ಶಿವಶಂಕರ್, ಮುಖಂಡರಾದ ರಂಗನಾಥ, ಮಕ್ ಪಿರುಲ್ಲಾ, ಆರ್ಯ ಮಹೇಶ್, ಮಹದೇವ, ಮುಖಂಡರು ಸೇರಿದಂತೆ ಇತರರು ಹಾಜರಿದ್ದರು.