ಮೈಸೂರು ನಗರದ ಎಸ್‌ಡಿಎಂ ಇನ್‌ಸ್ಟಿಟ್ಯೂಟ್ ಫಾರ್ ಮ್ಯಾನೇಜ್ಮೆಂಟ್ ಕಾಲೇಜಿನಲ್ಲಿ ಮೈಸೂರು ವಿಭಾಗ ಮಟ್ಟದ ಪಾಲುದಾರರ ಸಮಾಲೋ ಚನಾ ಕಾರ್ಯಾಗಾರವನ್ನು ಮೈಸೂರು ಚೇಂಬರ್ ಆಫ್ ಕಾಮರ್ಸ್ ಅಧ್ಯಕ್ಷ ಕೆ.ಬಿ. ಲಿಂಗರಾಜು ಉದ್ಘಾಟಿಸಿದರು. ಪ್ರಭಾಕರ, ವಿಜಯಶಂಕರ್, ಮೌಸಮಿ ಸೇಮ್ ಗುಪ್ತ, ಸುರೇಶ್ ಕುಮಾರ್ ಜೈನ್ ಹಾಗೂ ಇತರರು ಇದ್ದರು. 
ಮೈಸೂರು

‘ಕರ್ನಾಟಕ ಎಂಎಸ್‌ಎಂಇ ನೀತಿ’ ಅಡಿಯಲ್ಲಿ ಮೈಸೂರಿನಲ್ಲಿ ಕಾರ್ಯಾಗಾರ

ಸದೇಶ್ ಕಾರ್ಮಾಡ್
ಮೈಸೂರು: ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆ ವತಿಯಿಂದ ‘ಕರ್ನಾಟಕ ಎಂಎಸ್‌ಎಂಇ ನೀತಿ-2025’ ಅಡಿಯಲ್ಲಿ ಬುಧವಾರ ಎಸ್‌ಡಿಎಂ ಇನ್‌ಸ್ಟಿಟ್ಯೂಟ್ ಫಾರ್ ಮ್ಯಾನೇಜ್ಮೆಂಟ್ ಕಾಲೇಜಿನಲ್ಲಿ ಮೈಸೂರು ವಿಭಾಗ ಮಟ್ಟದ ಪಾಲುದಾರರ ಸಮಾಲೋಚನಾ ಕಾರ್ಯಾಗಾರ ಆಯೋಜಿಸಲಾಗಿತ್ತು.
ಕಾರ್ಯಾಗಾರದಲ್ಲಿ ಮಂಡ್ಯ, ಮೈಸೂರು ಹಾಗೂ ಚಾಮರಾಜನಗರ ಸೇರಿದಂತೆ 8 ಜಿಲ್ಲೆಗಳ ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆಯ ಸಹದ್ಯೋಗಿಗಳು ಪಾಲ್ಗೊಂಡಿದ್ದರು. ನಂತರ ಕರ್ನಾಟಕ ಕೈಗಾರಿಕಾ ನೀತಿ 2025ರ ಅಡಿಯಲ್ಲಿ ಎಂ.ಎಸ್.ಎಂ.ಇ ಪ್ರೋತ್ಸಾಹ ಮತ್ತು ಸೌಲಭ್ಯಗಳು, ಹಣಕಾಸು ಸೌಲಭ್ಯ, ತಂತ್ರಜ್ಞಾನ ಬಳಕೆ ಹಾಗೂ ಡಿಜಿಟಲೀಕರಣಕ್ಕೆ ಆದ್ಯತೆ, ಮಾರುಕಟ್ಟೆ, ಮೂಲಸೌಕರ್ಯ ಹಾಗೂ ನಿಯಂತ್ರಣಾತ್ಮಕ ನಿಯಮಾವಳಿಗೆ ನೆರವು, ಕೌಶಲಾಭಿವೃದ್ಧಿ, ನವೀನತೆ ಮತ್ತು ಹಸಿರು ತಂತ್ರಜ್ಞಾನಗಳ ಪ್ರವೇಶಕ್ಕೆ ಆದ್ಯತೆಯ ಕುರಿತು ಚರ್ಚಿಸಲಾಯಿತು.
ಕಾರ್ಯಾಗಾರದಲ್ಲಿ ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆಯ ನಿರ್ದೇಶಕ ಡಾ.ಬಿ.ಸಿ.ಸತೀಶ್, ಮೈಸೂರು ಚೇಂಬರ್ ಆಫ್ ಕಾಮರ್ಸ್ ಅಧ್ಯಕ್ಷ ಕೆ.ಬಿ. ಲಿಂಗರಾಜು, ಚಾಮರಾಜನಗರ ಚೇಂಬರ್ ಅಫ್ ಕಾಮರ್ಸ್ ಅಧ್ಯಕ್ಷ ಪ್ರಭಾಕರ, ಮಂಡ್ಯ ಚೇಂಬರ್ ಆಫ್ ಕಾಮರ್ಸ್ ಅಧ್ಯಕ್ಷ ಪ್ರಭಾಕರ್, ಎಸ್‌ಸಿ- ಎಸ್‌ಟಿ ಅಸೋಸಿಯೇಟ್‌ನ ಅಧ್ಯಕ್ಷ ವಿಜಯಶಂಕರ್, ಎಸ್‌ಡಿಎಂ ಇನ್‌ಸ್ಟಿಟ್ಯೂಟ್ ಫಾರ್ ಮ್ಯಾನೇಜ್ಮೆಂಟ್ ಕಾಲೇಜಿನ ಡೀನ್ ಮೌಸಮಿ ಸೇಮ್ ಗುಪ್ತ, ಮೈಸೂರು ಕೈಗಾರಿಕೆಗಳ ಸಂಘದ ಪ್ರಧಾನ ಕಾರ್ಯದರ್ಶಿ ಸುರೇಶ್ ಕುಮಾರ್ ಜೈನ್ ಇದ್ದರು.