ಬನ್ನೂರಿನಲ್ಲಿ ರೋಟರಿ ಸಂಸ್ಥೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಹಾಗೂ ಶಾಲಾ ಶಿಕ್ಷಣ ಇಲಾಖೆ ಸಹಯೋಗದಲ್ಲಿ ಕಾರ್ಯಾಗಾರ ಆಯೋಜಿಸಲಾಗಿತ್ತು. ರೋಟರಿ ಅಧ್ಯಕ್ಷ ಡಾ.ರಾಜೀವ್, ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಸಿ.ಶಿವಮೂರ್ತಿ, ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ನಿರ್ದೇಶಕ ಸಿ.ಆರ್.ನಾಗರಾಜಯ್ಯ, ಉಪಯೋಜನಾ ಸಮನ್ವಯಾಧಿಕಾರಿ ಶೋಭಾ, ವಲಯ ಪ್ರತಿನಿಧಿ ಅತ್ತಹಳ್ಳಿ ಕೆಂಪೇಗೌಡ ಇತರರು ಇದ್ದರು. 
ಮೈಸೂರು

ಕಾರ್ಯಾಗಾರಗಳು ವಿದ್ಯಾರ್ಥಿಗಳಿಗೆ ಸ್ಫೂರ್ತಿದಾಯಕ

ಕಿರಣ್ ಗೌಡ.ಜಿ

ಪ್ರಮುಖ ಮುಖ್ಯಾಂಶಗಳು

  • ರೋಟರಿ ಅಧ್ಯಕ್ಷ ಡಾ.ರಾಜೀವ್ ಅಭಿಪ್ರಾಯ
ಬನ್ನೂರು: ಶಿಕ್ಷಣಕ್ಕೆ ಅನುಕೂಲವಾಗುವ ಕಾರ್ಯಾಗಾರಗಳು ಪ್ರತಿ ವಿದ್ಯಾರ್ಥಿಗೂ ಸ್ಫೂರ್ತಿದಾಯಕವಾಗಿರುತ್ತದೆ ಎಂದು ರೋಟರಿ ಅಧ್ಯಕ್ಷ ಡಾ.ರಾಜೀವ್ ತಿಳಿಸಿದರು.
ಪಟ್ಟಣದ ಖಾಸಗಿ ಸಮುದಾಯ ಭವನದಲ್ಲಿ 10ನೇ ತರಗತಿ ವಿದ್ಯಾರ್ಥಿಗಳಿಗೆ ಭಾನುವಾರ ಆಯೋಜಿಸಿದ್ದ ಪ್ರೇರಣೆ ಸ್ಫೂರ್ತಿದಾಯಕ ಕಾರ್ಯಕ್ರಮದಲ್ಲಿ ಮಾತನಾಡಿದರು. 
ರೋಟರಿ ಸಂಸ್ಥೆ ಹಲವು ಸಮಾಜಮುಖಿ ಕೆಲಸ ಮಾಡುತ್ತಿದ್ದು, ಈ ಹಿನ್ನೆಲೆಯಲ್ಲಿ ನಮ್ಮ ಹೋಬಳಿಯ 10ನೇ ತರಗತಿಯ ಎಲ್ಲ ಮಕ್ಕಳಿಗೂ ಅನುಕೂಲವಾಗಲಿದೆ. ಈ ಉಚಿತ ಕಾರ್ಯಾಗಾರವನ್ನು ನುರಿತ ಶಿಕ್ಷಣ ತಜ್ಞರಿಂದ ಆಯೋಜಿಸಲಾಗಿದೆ ಎಂದು ತಿಳಿಸಿದರು. ಎಲ್ಲ ವಿದ್ಯಾರ್ಥಿಗಳಿಗೆ ಪ್ರಶ್ನೆ ಪತ್ರಿಕೆಯಿಂದ ಪ್ರಾರಂಭವಾಗಿ ಉತ್ತರ ಹೇಗೆ ಬರೆಯಬೇಕು ಎನ್ನುವಂತಹ ಮಾಹಿತಿಯನ್ನು ತಿಳಿಸಿಕೊಡಲಾಗುತ್ತದೆ ಎಂದರು.
ಈ ಕಾರ್ಯಾಗಾರಕ್ಕೆ 24 ವಿವಿಧ ಶಾಲೆಗಳಿಂದ 10ನೇ ತರಗತಿ ವ್ಯಾಸಂಗ ಮಾಡುತ್ತಿರುವಂತ ವಿದ್ಯಾರ್ಥಿಗಳು ಆಗಮಿಸಿದ್ದು, ಗಣಿತ, ವಿಜ್ಞಾನ, ಆಂಗ್ಲ ಮಾಧ್ಯಮಕ್ಕೆ ಸಂಬಂಧಿಸಿದಂತೆ ಮಾಹಿತಿ ತಿಳಿಸಿಕೊಡಲಾಗುತ್ತದೆ ಎಂದು ಹೇಳಿದರು. ಇದನ್ನು ಸಮರ್ಪಕವಾಗಿ ಬಳಸಿಕೊಂಡು ಮುಂದಿನ ಪರೀಕ್ಷೆಯಲ್ಲಿ ಉನ್ನತ ಮಟ್ಟದಲ್ಲಿ ತೇರ್ಗಡೆಯಾಗಿ ಉತ್ತಮ ಭವಿಷ್ಯ ರೂಪಿಸಿಕೊಳ್ಳಿ ಎಂದರು.
 ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಸಿ.ಶಿವಮೂರ್ತಿ ಮಾತನಾಡಿ, ರೋಟರಿ ಸಂಸ್ಥೆ ಎಲ್ಲ ವಿದ್ಯಾರ್ಥಿಗಳಿಗೆ ತುಂಬ ಅನುಕೂಲವಾಗುವಂತ ಕೆಲಸ ಮಾಡುತ್ತಿದ್ದು, ಎಲ್ಲರು ಸದುಪಯೋಗ ಪಡೆದುಕೊಳ್ಳಿ ಎಂದು ತಿಳಿಸಿದರು. 
ಉಚಿತ ಕಾರ್ಯಗಾರದಲ್ಲಿ ಸುಮಾರು 400ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದರು. ರೋಟರಿ ಅಧ್ಯಕ್ಷ ಡಾ.ರಾಜೀವ್, ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಸಿ.ಶಿವಮೂರ್ತಿ, ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ನಿರ್ದೇಶಕ ಸಿ.ಆರ್.ನಾಗರಾಜಯ್ಯ, ಉಪ ಯೋಜನಾ ಸಮನ್ವಯಾಧಿಕಾರಿ ಶೋಭಾ, ವಲಯ ಪ್ರತಿನಿಧಿ ಅತ್ತಹಳ್ಳಿ ಕೆಂಪೇಗೌಡ ಸೇರಿದಂತೆ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.