ಮೈಸೂರು ನಗರದ ಕೆ.ಆರ್.ಆಸ್ಪತ್ರೆಯ ಪೆಥಾಲಜಿ ಲೆಕ್ಚರರ್ ಹಾಲ್‌ನಲ್ಲಿ ಶುಕ್ರವಾರ ಆಯೋಜಿಸಿದ್ದ ಯೋಗ- ಆರೋಗ್ಯಕ ಕುರಿತು ಆಯೋಜಿಸಿದ್ದ ವಿಚಾರ ಸಂಕಿರಣವನ್ನು ಮೈಸೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ ಡೀನ್ ಮತ್ತು ನಿರ್ದೇಶಕ ಡಾ.ಮುದಸ್ಸರ್ ಅಜೀಜ್ ಖಾನ್ ಉದ್ಘಾಟಿಸಿದರು. ಡಾ.ಜೆ.ಎಂ. ವಾಣಿಶ್ರೀ, ಡಾ.ಹರೀಶ್ ಬಾಬು, ಡಾ.ಎನ್.ವಿ. ಕೃಷ್ಣಮೂರ್ತಿ ಹಾಗೂ ಇತರರು ಇದ್ದರು. 
ಮೈಸೂರು

ದೈಹಿಕ, ಮಾನಸಿಕ ಆರೋಗ್ಯಕ್ಕೆ ಯೋಗ ಅವಶ್ಯಕ

ಮೈಸೂರು: ದೈಹಿಕ ಹಾಗೂ ಮಾನಸಿಕ ಆರೋಗ್ಯಕ್ಕೆ ಯೋಗ ಮತ್ತು ಆಯುರ್ವೇದ ಪೂರಕ ಎಂದು ಮೈಸೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ ಡೀನ್ ಮತ್ತು ನಿರ್ದೇಶಕ ಡಾ.ಮುದಸ್ಸರ್ ಅಜೀಜ್ ಖಾನ್ ಹೇಳಿದರು.
ಸರ್ಕಾರಿ ಆಯುರ್ವೇದ ಸಂಶೋಧನಾ ಕೇಂದ್ರವು ಮೈಸೂರು ವೈದ್ಯಕೀಯ ಕಾಲೇಜಿನ ಮನೋರೋಗ ವಿಭಾಗದ ಸಹಯೋಗದೊ ಂದಿಗೆ ಕೆ.ಆರ್.ಆಸ್ಪತ್ರೆಯ ಪೆಥಾಲಜಿ ಲೆಕ್ಚರರ್ ಹಾಲ್‌ನಲ್ಲಿ ಶುಕ್ರವಾರ ಆಯೋಜಿಸಿದ್ದ ಯೋಗ- ಆರೋಗ್ಯಕ ಕುರಿತು ಆಯೋಜಿಸಿದ್ದ ವಿಚಾರ ಸಂಕಿರಣ ಉದ್ಘಾಟಿಸಿ ಮಾತನಾಡಿ, ಯೋಗ ಮತ್ತು ಆಯುರ್ವೇದ ವೈಯಕ್ತಿಕ ಮತ್ತು ಸಮುದಾಯ ಆರೋಗ್ಯಕ್ಕೆ ಒಳ್ಳೆಯದು ಎಂದು ಅಭಿಪ್ರಾಯಪ್ಟಟರು.
ಯುವಜನರು ಉತ್ತಮ ಆಲೋಚನೆಗಳನ್ನು ಮಾಡಬೇಕು. ಆ ಮೂಲಕ ಗುರಿ ತಲುಪಬೇಕು. ದೊಡ್ಡ ಕನಸುಗಳನ್ನು ಕಂಡು ನನಸು ಮಾಡಿಕೊಳ್ಳುವ ಪ್ರಯತ್ನ ಮಾಡಬೇಕು ಎಂದು ಅವರು ಸಲಹೆ ಮಾಡಿದರು.
ಪಂಚಕರ್ಮ ಆಸ್ಪತ್ರೆ ಉಪ ವೈದ್ಯಕೀಯ ಅಧೀಕ್ಷಕಿ ಡಾ.ಜೆ.ಎಂ. ವಾಣಿಶ್ರೀ ಮಾತನಾಡಿ, ಆರೋಗ್ಯಕರ ಜೀವನಕ್ಕಾಗಿ ಯೋಗಾಭ್ಯಾಸ ಮಾಡಬೇಕು ಎಂದು ಯುವಜನಾಂಗಕ್ಕೆ ಕಿವಿಮಾತು ಹೇಳಿದರು.
ಆಯುಷ್ ಇಲಾಖೆ ನಿವೃತ್ತ ಉಪನಿರ್ದೇಶಕ ಡಾ.ಹರೀಶ್ ಬಾಬು, ಮಹಾರಾಜ ಆಯುರ್ವೇದ ಕಾಲೇಜಿನ ಪ್ರಾಂಶುಪಾಲ ಡಾ.ಎನ್.ವಿ. ಕೃಷ್ಣಮೂರ್ತಿ, ಕೆ.ಆರ್. ಆಸ್ಪತ್ರೆ ಮನೋರೋಗ ವಿಭಾಗದ ಮುಖ್ಯಸ್ಥ ಡಾ.ಬಿ.ಎನ್. ರವೀಶ್, ಸರ್ಕಾರಿ ಆಯುರ್ವೇದ ಕಾಲೇಜಿನ ಪ್ರಾಂಶುಪಾಲ ಡಾ. ಶ್ರೀವತ್ಸ, ಸರ್ಕಾರಿ ಆಯುರ್ವೇದ ಸಂಶೋಧನಾ ಕೇಂದ್ರದ ಸಹಾಯಕ ನಿರ್ದೇಶಕ ಡಾ.ಲಕ್ಷ್ಮೀನಾರಾಯಣ ಶೆಣೈ, ಶ್ರೀ ನಟರಾಜ ನರ್ಸಿಂಗ್ ಕಾಲೇಜಿನ ಪ್ರಾಂಶುಪಾಲ ಡಾ.ರಾಜೇಶ್, ಶ್ರೀ ಛಾಯಾದೇವಿ ಶಿಕ್ಷಣ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ.ಸಿ. ಅಂಥೋಣಿ ಪೌಲ್ ರಾಜ್ ಇದ್ದರು.