ಬನ್ನೂರು : ಗ್ರಾಮೀಣ ಭಾಗದ ಜನರಿಗೆ ಅನುಕೂಲವಾಗುವ ಉದ್ದೇಶದಿಂದ ನೇತ್ರ ತಪಾಸಣೆ ಶಿಬಿರ ಹಮ್ಮಿಕೊಳ್ಳಲಾಗಿದೆ ಎಂದು ರೋಟರಿ ಮಾಜಿ ಅಧ್ಯಕ್ಷ ಡಾ.ಮಹೇಂದ್ರಸಿಂಗ್ ಕಾಳಪ್ಪ ತಿಳಿಸಿದರು.
ಪಟ್ಟಣದ ರೋಟರಿ ಸಂಸ್ಥೆ, ಕಾನ್‌ಸಿಂಗ್‌ಜೀ ರಾಜ್‌ಪುರೋಹಿತ್, ಶ್ರೀ ಗೌರಿದೇವಿ, ಲಯನ್ಸ್ ಕ್ಲಬ್ ಆಫ್ ಈರೋಡ್ ಕಾವೇರಿ ಟ್ರಸ್ಟ್, ಕೊಯಮತ್ತೂರು ಕಣ್ಣಿನ ಆಸ್ಪತ್ರೆ ಸಹಯೋಗದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಕಣ್ಣಿನ ತಪಾಸಣಾ ಉಚಿತ ಶಿಬಿರ ಉದ್ಘಾಟಿಸಿ ಮಾತನಾಡಿದರು.
ಗ್ರಾಮೀಣ ಭಾಗ ಸೇರಿದಂತೆ ಪಟ್ಟಣದಲ್ಲಿ ಎಷ್ಟೋ ಜನರು ಆರ್ಥಿಕ ಸಮಸ್ಯೆಯಿಂದ ಕಣ್ಣಿನ ಆರೋಗ್ಯದ ಕಡೆ ಗಮನ ಕೊಡುತ್ತಿಲ್ಲ. ಹಾಗಾಗಿ ಪ್ರತಿ ತಿಂಗಳ ಕೊನೆಯ ಭಾನುವಾರ ಬೆಳಗ್ಗೆ 7ರಿಂದ ಮಧ್ಯಾಹ್ನ 12ರವರೆಗೆ ಉಚಿತ ಶಿಬಿರ ಆಯೋಜಿಸಲಾಗುತ್ತಿದೆ. ಸಾರ್ವಜನಿಕರು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಹೇಳಿದರು.
350ಕ್ಕೂ ಹೆಚ್ಚು ಜನರು ಕಣ್ಣಿನ ತಪಾಸಣೆ ಮಾಡಿಸಿಕೊಂಡರು. ಕೆ.ರಾಜೇಶ್‌ಕುಮಾರ್, ಕೊಯಮತ್ತೂರು ಕಣ್ಣಿನ ಆಸ್ಪತ್ರೆ ಮೇಲ್ವಿಚಾರಕ ವಿಜಯ್‌ಕುಮಾರ್, ಸಂತೋಷ್‌ಕುಮಾರಿ, ವನ್ಯರಾಜ್ ಪುರೋಹಿತ್, ವಿರಾಟ್‌ರಾಜ್ ಪುರೋಹಿತ್, ಕಮಲಾ ಕಣ್ಣನ್, ವಿಜಯಕುಮಾರ್, ಡಾ. ಸಾಯಿಕಾರ್ತಿಕ್, ಡಾ. ಸುಪ್ರೀಮ್ ದತ್ತಾ, ಯಾಸೀನ್, ರೋಟರಿ ಅಧ್ಯಕ್ಷ ಪ್ರಸನ್ನ, ಕಾರ್ಯದರ್ಶಿ ಮುರಳಿಗೋಪಾಲ್, ಮಾಣಿಕ್‌ಚಂದ್ ಚೌಧರಿ, ನಂಜುಂಡಸ್ವಾಮಿ, ದಿಲೀಪ್ ಉಪಸ್ಥಿತರಿದ್ದರು.