ಮೈಸೂರು

ಬಿಜೆಪಿಗೆ ಸಂವಿಧಾನದ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ: ಸಿದ್ದರಾಮಯ್ಯ

ಆರ್‌ಎಸ್‌ಎಸ್‌ ಸಂವಿಧಾನ ವಿರೋಧಿ ಸಂಘಟನೆ; ಬಿಜೆಪಿಯಿಂದ ಪಾಠ ಕಲಿಯುವ ಅಗತ್ಯವಿಲ್ಲ

ಮೈಸೂರು: ಬಿಜೆಪಿಯವರಿಗೆ ಸಂವಿಧಾನದ ಬಗ್ಗೆ ಮಾತನಾಡುವ ಯಾವುದೇ ನೈತಿಕತೆ ಇಲ್ಲ. ಸಂವಿಧಾನ ದಿನವನ್ನು ಹೇಗೆ ಆಚರಿಸಬೇಕು ಎಂಬುದನ್ನು ಬಿಜೆಪಿಯವರಿಂದ ನಾವು ಕಲಿಯಬೇಕಾದ ಅಗತ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.

ಸಂವಿಧಾನದ ವಿರೋಧಿಗಳಾದ ಬಿಜೆಪಿಯವರು ನಮಗೆ ಸಂವಿಧಾನದ ಬಗ್ಗೆ ಪಾಠ ಹೇಳುವ ಅಗತ್ಯವಿಲ್ಲ. ಆರ್‌ಎಸ್‌ಎಸ್‌ ಕೂಡ ಸಂವಿಧಾನಕ್ಕೆ ಯಾವಾಗಲೂ ವಿರೋಧ ವ್ಯಕ್ತಪಡಿಸುತ್ತಾ ಬಂದಿದೆ. ಆರ್‌ಎಸ್‌ಎಸ್‌ನ ಮೊದಲ ಅಧ್ಯಕ್ಷರೇ ಸಂವಿಧಾನವನ್ನು ವಿರೋಧಿಸಿದ್ದರು. ಇಂತಹವರಿಂದ ನಾವು ಸಂವಿಧಾನದ ಬಗ್ಗೆ ಪಾಠ ಕಲಿಯಬೇಕೇ ಎಂದು ಪ್ರಶ್ನಿಸಿದರು.

ಮೈಸೂರಿನಲ್ಲಿ ಸಂವಿಧಾನ ದಿನಾಚರಣೆ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿಯವರಿಗೆ ಸಂವಿಧಾನದ ಬಗ್ಗೆ ಮಾತನಾಡುವ ನೈತಿಕ ಹಕ್ಕಿಲ್ಲ ಎಂದು ತಿರುಗೇಟು ನೀಡಿದರು.