ವಿಶ್ವ ಕ್ಷಯರೋಗ ದಿನಾಚರಣೆ ಅಂಗವಾಗಿ ತಾಲೂಕಿನ ಯರಹಳ್ಳಿ ಗ್ರಾಮದಲ್ಲಿ ಜನರಿಗೆ ಗ್ರಾಮದ ಕ್ಷಯರೋಗದ ಲಕ್ಷಣಗಳು, ಚಿಕಿತ್ಸೆಯ ಕುರಿತು ಆರೋಗ್ಯ ಇಲಾಖೆಯಿಂದ ಅರಿವು ಮೂಡಿಸಲಾಯಿತು. 
ಮೈಸೂರು

ಯರಹಳ್ಳಿ ಗ್ರಾಮಸ್ಥರಿಗೆ ‘ಟಿಬಿ’ ಅರಿವು

ವಿಶ್ವ ಕ್ಷಯರೋಗ ದಿನಾಚರಣೆ

ಎಚ್.ಡಿ. ಕೋಟೆ: ವಿಶ್ವ ಕ್ಷಯರೋಗ ದಿನಾಚರಣೆ ಅಂಗವಾಗಿ ತಾಲೂಕಿನ ಯರಹಳ್ಳಿ ಗ್ರಾಮದಲ್ಲಿ ಗ್ರಾಮಸ್ಥರಿಗೆ ಕ್ಷಯರೋಗದ ಲಕ್ಷಣಗಳು, ಚಿಕಿತ್ಸೆಯ ಕುರಿತು ಇತ್ತೀಚೆಗೆ ಆರೋಗ್ಯ ಇಲಾಖೆಯಿಂದ ಅರಿವು ಮೂಡಿಸಲಾಯಿತು.

ಮೈಸೂರು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಕ್ಷಯರೋಗ ನಿಯಂತ್ರಣ ಕೇಂದ್ರದ ವತಿಯಿಂದ ಆಯೋಜಿಸಿದ್ದ ಜಾಗೃತಿ ಕಾರ್ಯಕ್ರಮದಲ್ಲಿ ಆರೋಗ್ಯ ಸಿಬ್ಬಂದಿ, ಕ್ಷಯರೋಗದ ಲಕ್ಷಣಗಳು ಕಂಡುಬಂದರೆ ನಿರ್ಲಕ್ಷ್ಯ ಮಾಡದೆ ಕೂಡಲೇ ಆರೋಗ್ಯ ಕೇಂದ್ರಕ್ಕೆ ತೆರಳಿ ಪರೀಕ್ಷೆ ಮಾಡಿಸಿಕೊಳ್ಳುವಂತೆ ಗ್ರಾಮಸ್ಥರಿಗೆ ಸಲಹೆ ನೀಡಿದರು.

ಎರಡು ವಾರ ಅಥವಾ ಅದಕ್ಕಿಂತ ಹೆಚ್ಚು ಕಾಲ ಸತತವಾಗಿ ಕೆಮ್ಮುವುದು, ಜ್ವರ, ಅದರಲ್ಲೂ ಸಂಜೆ ವೇಳೆ ಜ್ವರ ಬರುವುದು, ಎದೆ ನೋವು, ದೇಹದ ತೂಕ ಕಡಿಮೆಯಾಗುವುದು, ಹಸಿವು ಕಡಿಮೆಯಾಗುವುದು ಹಾಗೂ ಕಫದಲ್ಲಿ ರಕ್ತ ಕಾಣಿಸಿಕೊಳ್ಳುವುದು ಕ್ಷಯರೋಗದ ಪ್ರಮುಖ ಲಕ್ಷಣಗಳಾಗಿವೆ ಎಂದು ತಿಳಿಸಿದರು.

ಈ ರೀತಿಯ ಲಕ್ಷಣಗಳು ಕಂಡುಬಂದಲ್ಲಿ ಸ್ವಯಂ ಚಿಕಿತ್ಸೆ ಪಡೆಯದೆ ಸಮೀಪದ ಸರ್ಕಾರಿ ಆರೋಗ್ಯ ಕೇಂದ್ರಕ್ಕೆ ತೆರಳಿ ಸೂಕ್ತ ಪರೀಕ್ಷೆ ಮಾಡಿಸಿಕೊಳ್ಳಬೇಕು. ಕ್ಷಯರೋಗದ ಪರೀಕ್ಷೆ ಹಾಗೂ ಚಿಕಿತ್ಸೆ ಎಲ್ಲ ಸರ್ಕಾರಿ ಆರೋಗ್ಯ ಕೇಂದ್ರಗಳಲ್ಲಿ ಉಚಿತವಾಗಿ ಮತ್ತು ಖಚಿತವಾಗಿ ಲಭ್ಯವಿದೆ ಎಂದು ಆರೋಗ್ಯ ಸಿಬ್ಬಂದಿ ಮಾಹಿತಿ ನೀಡಿದರು.

ಕ್ಷಯರೋಗದಿಂದ ಬಳಲುತ್ತಿರುವವರಿಗೆ ಚಿಕಿತ್ಸೆಯ ಜತೆಗೆ ಪೌಷ್ಟಿಕ ಆಹಾರ ಸೇವನೆಗೆ ಉತ್ತೇಜನ ನೀಡುವ ಉದ್ದೇಶದಿಂದ ಮಾಸಿಕ 500 ಪ್ರೋತ್ಸಾಹಧನ ನೀಡಲಾಗುತ್ತದೆ ಎಂದು ತಿಳಿಸಲಾಯಿತು. ಕ್ಷಯರೋಗವನ್ನು ಆರಂಭದಲ್ಲೇ ಪತ್ತೆಹಚ್ಚಿ ಸಂಪೂರ್ಣ ಚಿಕಿತ್ಸೆಯನ್ನು ಪಡೆದುಕೊಂಡರೆ ಗುಣಪಡಿಸಿಕೊಳ್ಳಬಹುದು. ಆದ್ದರಿಂದ ಸಾರ್ವಜನಿಕರು ರೋಗದ ಲಕ್ಷಣಗಳ ಬಗ್ಗೆ ಜಾಗೃತರಾಗಿರಬೇಕು ಎಂದು ಮನವಿ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಪಿಎಚ್‌ಸಿಇಒಗಳಾದ ಅಶೋಕ್, ಅರಳಪ್ಪ, ಆಶಾ ಕಾರ್ಯಕರ್ತೆಯರಾದ ಮಂಜುಳಾ, ಶೀಲಾ ಸೇರಿದಂತೆ ಆರೋಗ್ಯ ಸಿಬ್ಬಂದಿ ಹಾಗೂ ಗ್ರಾಮಸ್ಥರು ಇದ್ದರು.