ಸರಗೂರು ಪಟ್ಟಣದ ಜೆಎಸ್‌ಎಸ್ ಶಿವರಾತ್ರಿ ಶಿವಾನುಭವ ಮಂಟಪದಲ್ಲಿ ಆಯೋಜಿಸಿದ್ದ ಆರೋಗ್ಯ ತಪಾಸಣೆ ಶಿಬಿರ ಕಾರ್ಯಕ್ರಮವನ್ನು ಗಣ್ಯರು ಉದ್ಘಾಟಿಸಿದರು. ಕೆ.ಎನ್.ಸುಬ್ಬಣ್ಣ, ಸಿ.ಕೆ.ಗಿರೀಶ್, ವೆಂಕಟೇಶ್, ಬಸವರಾಜಪ್ಪ, ರಾಧಿಕಾ ಇದ್ದರು. 
ಮೈಸೂರು

ಯುವಕರಿಗೆ ರಕ್ತದಾನ ಜಾಗೃತಿ ಅಗತ್ಯ

ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಎನ್.ಸುಬ್ಬಣ್ಣ ಹೇಳಿಕೆ

ಸರಗೂರು: ನರೇಂದ್ರ ಮೋದಿ ಅವರ 25 ವರ್ಷಗಳ ಸಾರ್ವಜನಿಕ ಸೇವೆ ಹಾಗೂ ಸಮರ್ಪಣಾ ಮನೋಭಾವ ದೇಶದ ಜನರಿಗೆ ಸ್ಫೂರ್ತಿಯಾಗಿದೆ. ಅವರ ಸೇವಾ ಸಂದೇಶವನ್ನು ಜನರಿಗೆ ತಲುಪಿಸುವ ಉದ್ದೇಶದಿಂದ ವಿವಿಧ ಜನಪರ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಎನ್.ಸುಬ್ಬಣ್ಣ ತಿಳಿಸಿದರು.

ಪಟ್ಟಣದ ಜೆಎಸ್‌ಎಸ್ ಶಿವರಾತ್ರಿ ಶಿವಾನುಭವ ಮಂಟಪದಲ್ಲಿ ಮಂಗಳವಾರ ಭಾರತೀಯ ಜನತಾ ಪಕ್ಷ ತಾಲೂಕು ಘಟಕದ ವತಿಯಿಂದ ಸೇವಾ ಸಂಕಲ್ಪ ಅಭಿಯಾನ ಕಾರ್ಯಕ್ರಮದ ಅಂಗವಾಗಿ ಆಯೋಜಿಸಿದ್ದ ಉಚಿತ ಆರೋಗ್ಯ ತಪಾಸಣೆ ಮತ್ತು ರಕ್ತದಾನ ಶಿಬಿರ ಉದ್ಘಾಟಿಸಿ ಮಾತನಾಡಿದರು. ಆರೋಗ್ಯ ಸೇವೆ ಹಾಗೂ ರಕ್ತದಾನದಂತಹ ಸಾಮಾಜಿಕ ಕಾರ್ಯಗಳ ಮೂಲಕ ಸಮಾಜಕ್ಕೆ ಕೊಡುಗೆ ನೀಡುವುದು ಸೇವಾ ಸಂಕಲ್ಪ ಅಭಿಯಾನದ ಪ್ರಮುಖ ಉದ್ದೇಶವಾಗಿದೆ ಎಂದು ತಿಳಿಸಿದರು.

ರಕ್ತದಾನವು ತುರ್ತು ಸಂದರ್ಭದಲ್ಲಿ ಅನೇಕ ಜೀವಗಳನ್ನು ಉಳಿಸಲು ನೆರವಾಗುವ ಮಹತ್ವದ ಸೇವೆಯಾಗಿದೆ. ಯುವಕರಲ್ಲಿ ರಕ್ತದಾನದ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ಶಿಬಿರ ಹಮ್ಮಿಕೊಳ್ಳಲಾಗಿದೆ ಎಂದರು.

ಬಿಜೆಪಿ ತಾಲೂಕು ಮಂಡಲ ಅಧ್ಯಕ್ಷ ಸಿ.ಕೆ.ಗಿರೀಶ್ ಮಾತನಾಡಿ, ಸೇವಾ ಮನೋಭಾವವನ್ನು ಕೇವಲ ರಾಜಕೀಯ ಕ್ಷೇತ್ರಕ್ಕೆ ಸೀಮಿತಗೊಳಿಸದೆ ಸಮಾಜದ ಅಗತ್ಯವಿರುವ ಜನರಿಗೆ ನೆರವಾಗುವ ಮೂಲಕ ಅರ್ಥಪೂರ್ಣವಾಗಿ ಆಚರಿಸುವ ಉದ್ದೇಶದಿಂದ ಸೇವಾ ಸಂಕಲ್ಪ ಅಭಿಯಾನ ನಡೆಸಲಾಗುತ್ತಿದೆ ಎಂದು ಹೇಳಿದರು.

ಸಾರ್ವಜನಿಕರಿಗೆ ಆರೋಗ್ಯ ತಪಾಸಣೆ ನಡೆಸಲಾಯಿತು. ಬಿಜೆಪಿ ಕಾರ್ಯಕರ್ತರು, ಸಾರ್ವಜನಿಕರು ರಕ್ತದಾನ ಮಾಡಿದರು.

ತಾಲೂಕು ಆರೋಗ್ಯಾಧಿಕಾರಿ ಡಾ.ಟಿ.ರವಿಕುಮಾರ್, ಡಾ.ಸೋಮಣ್ಣ, ಬೊಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿನಯ್ ಕುಮಾರ್, ಅರಸು, ಎಚ್.ಡಿ.ಕೋಟೆ ಬಿಜೆಪಿ ಮಂಡಲ ಅಧ್ಯಕ್ಷ ವೆಂಕಟೇಶ್, ಮೊತ್ತ ಬಸವರಾಜಪ್ಪ, ಬಸವ ಬಳಗ ಅಧ್ಯಕ್ಷ ಹಂಚೀಪುರ ಗಣಪತಿ, ವೀರಶೈವ ಮಹಾಸಭಾ ಅಧ್ಯಕ್ಷ ನಟರಾಜು, ತಾಲೂಕು ಪ್ರಧಾನ ಕಾರ್ಯದರ್ಶಿ ಪ್ರಕಾಶ್, ನವೀನ, ಪಪಂ ಸದಸ್ಯೆ ರಾಧಿಕಾ ಶ್ರೀನಾಥ್, ಟೌನ್ ಅಧ್ಯಕ್ಷ ಚನ್ನಪ್ಪ, ಮಹದೇವ, ಸುನಂದಾ, ಜಯಲಕ್ಷ್ಮೀ, ರವಿ, ಗುರುಸ್ವಾಮಿ, ರಾಜು, ಯುವ ಮೋರ್ಚಾ ಅಧ್ಯಕ್ಷ ಕೃಷ್ಣಪ್ಪ, ರಾಮು, ಸೋಮಾಚಾರಿ, ನೂರಳಾಸ್ವಾಮಿ, ರವಿ ಗೌಡ ಭಾಗವಹಿಸಿದ್ದರು.