ಹನಗೋಡು ಹೋಬಳಿ ಕರಣಕುಪ್ಪೆ ಗ್ರಾಮದ ಎಸ್‌ಎನ್‌ಜಿ ವಿದ್ಯಾಸಂಸ್ಥೆಯ ವತಿಯಿಂದ ಪ್ರೌಢಶಾಲಾ ವಿಭಾಗದ ಪ್ರತಿಭಾ ಕಾರಂಜಿ ಕಾರ್ಯಕ್ರಮವನ್ನು ಗಣ್ಯರು ಉದ್ಘಾಟಿಸಿದರು. ಬಿಇಒ ಕಾಳನಾಯ್ಕ, ಗಣಪತಿ, ಟಿ.ಎ.ಫಾಲ್ಗುಣ, ರಮೇಶ್ ಇತರರಿದ್ದರು. 
ಮೈಸೂರು

ಸ್ಪರ್ಧಾ ಮನೋಭಾವ ಬೆಳೆಸುವ ಸಾಂಸ್ಕೃತಿಕ ಚಟುವಟಿಕೆ

ಕ್ಷೇತ್ರ ಶಿಕ್ಷಣಾಧಿಕಾರಿ ಕಾಳನಾಯ್ಕ ಅಭಿಮತ

ಹನಗೋಡು: ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ, ಸೃಜನಶೀಲತೆ, ಕಲಾಸಕ್ತಿ ಹಾಗೂ ಸ್ಪರ್ಧಾತ್ಮಕ ಮನೋಭಾವ ಬೆಳೆಸಲು ಸಾಂಸ್ಕೃತಿಕ ಸ್ಪರ್ಧೆಗಳು ಸಹಕಾರಿಯಾಗಿವೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಕಾಳನಾಯ್ಕ ತಿಳಿಸಿದರು.

ಹನಗೋಡು ಹೋಬಳಿ ಕರಣಕುಪ್ಪೆ ಗ್ರಾಮದ ಎಸ್‌ಎನ್‌ಜಿ ವಿದ್ಯಾಸಂಸ್ಥೆ ವತಿಯಿಂದ ಆಯೋಜಿಸಿದ್ದ ಪ್ರೌಢಶಾಲಾ ವಿಭಾಗದ ಪ್ರತಿಭಾ ಕಾರಂಜಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ವಿದ್ಯಾರ್ಥಿಗಳಿಗೆ ಶಿಕ್ಷಣದ ಜತೆಗೆ ಪಠ್ಯೇತರ ಚಟುವಟಿಕೆಗಳಿಗೂ ಆದ್ಯತೆ ನೀಡಬೇಕು. ಪ್ರತಿಯೊಬ್ಬ ವಿದ್ಯಾರ್ಥಿಯಲ್ಲೂ ಒಂದಲ್ಲ ಒಂದು ವಿಶೇಷ ಪ್ರತಿಭೆ ಅಡಗಿರುತ್ತದೆ. ಅದನ್ನು ಗುರುತಿಸಿ ಹೊರತರುವ ಜವಾಬ್ದಾರಿ ಶಿಕ್ಷಕರು ಹಾಗೂ ಪಾಲಕರ ಮೇಲಿದೆ. ಪ್ರತಿಭಾ ಕಾರಂಜಿಯಂತಹ ವೇದಿಕೆಗಳು ಗ್ರಾಮೀಣ ಭಾಗದ ಮಕ್ಕಳಿಗೆ ಕಲೆ, ಸೃಜನಶೀಲತೆ ಹಾಗೂ ಅಭಿವ್ಯಕ್ತಿ ಸಾಮರ್ಥ್ಯವನ್ನು ಪ್ರದರ್ಶಿಸುವ ಮೂಲಕ ತಮ್ಮ ಪ್ರತಿಭೆ ಪ್ರದರ್ಶಿಸಲು ಉತ್ತಮ ಅವಕಾಶ ಒದಗಿಸುತ್ತದೆ ಎಂದರು.

ವಿದ್ಯಾರ್ಥಿಗಳು ಸಂಗೀತ, ನೃತ್ಯ, ಭಾಷಣ ಸೇರಿದಂತೆ ವಿವಿಧ ಸಾಂಸ್ಕೃತಿಕ ಹಾಗೂ ಕಲಾತ್ಮಕ ಸ್ಪರ್ಧೆಗಳಲ್ಲಿ ಪಾಲ್ಗೊಂಡರು. ತಾಪಂ ಮಾಜಿ ಸದಸ್ಯ ಗಣಪತಿ, ಎಸ್‌ಎನ್‌ಜಿ ವಿದ್ಯಾಸಂಸ್ಥೆಯ ಸಂಸ್ಥಾಪಕ ಟಿ.ಎ.ಫಾಲ್ಗುಣ, ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ರಮೇಶ್, ತಾಲೂಕು ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ರಾಮಕೃಷ್ಣ, ಕರಣಕುಪ್ಪೆ ಪ್ರಾಥಮಿಕ ಶಾಲೆ ಮುಖ್ಯಶಿಕ್ಷಕ ಕುಮಾರ್, ಸಣ್ಣೇನಹಳ್ಳಿ ಪ್ರಾಥಮಿಕ ಶಾಲೆ ಮುಖ್ಯಶಿಕ್ಷಕ ಗಂಗಾಧರ್, ಕಡೆಮನುಗನಹಳ್ಳಿ ಪ್ರೌಢಶಾಲೆ ಮುಖ್ಯಶಿಕ್ಷಕಿ ಜಯಂತಿ, ಸಂಸ್ಥೆಯ ಗೌರವಾಧ್ಯಕ್ಷ ಪ್ರಭಾಕರ ಆರಾಧ್ಯ, ಮುಖಂಡರಾದ ಕೆ.ಎಂ.ರಾಜು, ಕೆ.ಸಿ.ಮಹದೇವಪ್ಪ, ಅಶೋಕ್, ಎಸ್‌ಎನ್‌ಜಿ ಕಾಲೇಜಿನ ಪ್ರಾಂಶುಪಾಲ ಟಿ.ಎ. ದಿನೇಶ್ ಕುಮಾರ್ ಉಪಸ್ಥಿತರಿದ್ದರು.