ಜಿಲ್ಲೆ

ಜುಲೈ 26ರಂದು ನಾಡಪ್ರಭು ಕೆಂಪೇಗೌಡ ಸಂಸ್ಮರಣೋತ್ಸವ

ಆರ್.ಕೃಷ್ಣ

ಮೈಸೂರು: ಒಕ್ಕಲಿಗ ಯುವ ಬ್ರಿಗೇಡ್‌ನಿಂದ ಜು.26ರಂದು ಪಿರಿಯಾಪಟ್ಟಣದ ಬಸವೇಶ್ವರ ವೃತ್ತದಲ್ಲಿರುವ ಡಿ.ದೇವರಾಜ ಅರಸು ಭವನದಲ್ಲಿ ನಾಡಪ್ರಭು ಕೆಂಪೇಗೌಡ ಸಂಸ್ಮರಣೋತ್ಸವ, ಪ್ರಗತಿಪರ ರೈತರಿಗೆ ಪ್ರಶಸ್ತಿ ಪ್ರದಾನ ಹಾಗೂ ಪ್ರತಿಭಾ ಪುರಸ್ಕಾರ ಆಯೋಜಿಸಲಾಗಿದೆ.

ಕೆಂಗೇರಿ ವಿಶ್ವ ಒಕ್ಕಲಿಗರ ಮಹಾಸಂಸ್ಥಾನದ ಪೀಠಾಧಿಪತಿ ಡಾ.ಶ್ರೀನಿಶ್ಚಲಾನಂದನಾಥ ಸ್ವಾಮೀಜಿ, ಕುಂಚಟಿಗರ ಮಠದ ಪೀಠಾಧ್ಯಕ್ಷ ಡಾ.ಶ್ರೀ ಹನುಮಂತನಾಥ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ. ಮಾಜಿ ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ ನಾರಾಯಣ ಕಾರ್ಯಕ್ರಮ ಉದ್ಘಾಟಿಸಲಿದ್ದು, ಬೆಂಗಳೂರು ಕೃಷಿ ವಿವಿ ಕುಲಪತಿ ಡಾ.ಎಸ್.ವಿ.ಸುರೇಶ ಅಧ್ಯಕ್ಷತೆ ವಹಿಸುವರು.

ಅಂಜಲಿ ಫೌಂಡೇಷನ್‌ನ ಡಾ.ಲಕ್ಷ್ಮೀ ಅಶ್ವಿನ್‌ಗೌಡ, ವಿಜಯವಾಣಿ ಸ್ಥಾನಿಕ ಸಂಪಾದಕ ಎಂ.ಆರ್.ಸತ್ಯನಾರಾಯಣ, ನಿವೃತ್ತ ಕೆಎಎಸ್ ಅಧಿಕಾರಿ ಡಾ.ಕೆ.ಎನ್.ಚಂದ್ರಶೇಖರ್, ಪ್ರಾಧ್ಯಾಪಕಿ ಡಾ.ನವಿತಾ ತಿಮ್ಮಯ್ಯ, ಮುಖಂಡರಾದ ದೀಪುಗೌಡ, ಡಾ.ಬಿ.ಸಿ.ನವೀನ್ ಇತರರು ಭಾಗವಹಿಸಲಿದ್ದಾರೆ. ನಾಡಪ್ರಭು ಕೆಂಪೇಗೌಡರ ಕುರಿತು ನಿವೃತ್ತ ಪ್ರಾಂಶುಪಾಲ ಪ್ರೊ.ಸಿ.ನಂಜುಂಡಯ್ಯ ಮಾತನಾಡಲಿದ್ದಾರೆ.

ಯುಪಿಎಸ್‌ಸಿ ಸಾಧಕ ಎಸ್.ಶ್ರೇಯಶ್ ಸೇರಿದಂತೆ ಪ್ರಗತಿಪರ ರೈತರನ್ನು ಸನ್ಮಾನಿಸಲಾಗುವುದು ಎಂದು ಒಕ್ಕಲಿಗರ ಯುವ ಬ್ರಿಗೇಡ್‌ನ ಸಂಸ್ಥಾಪಕ ಅಧ್ಯಕ್ಷ ನಂಜೇಗೌಡ ನಂಜುಂಡ ಹೇಳಿಕೆಯಲ್ಲಿ ತಿಳಿಸಿದ್ದಾರೆ.