ವಾಣಿ ಕಾಲೇಜಿನ ಕನ್ನಡ ಉಪನ್ಯಾಸಕ ಬೆಳಿಯಪ್ಪ ಕೆ. ಮಾತನಾಡಿದರು. ಶ್ರೀನಾಥ್ ಕೆ.ಎನ್, ಪ್ರಸಾದ್ ಕುಮಾರ್ ಮೊದಲಾದವರಿದ್ದರು. 
ಜಿಲ್ಲೆ

ಇತಿಹಾಸ ಪುರುಷರ ಆದರ್ಶ ಪಾಲನೆ: ಬೆಳಿಯಪ್ಪ ಕೆ. ಆಶಯ

ಬೆಳ್ತಂಗಡಿ: ಇತಿಹಾಸದ ಮಹಾಪುರುಷರನ್ನು ನೆನಪಿಸಿ ಅವರ ಆದರ್ಶ ಪಾಲಿಸುವುದು ನಮ್ಮೆಲ್ಲರ ಧ್ಯೇಯವಾಗಿರಬೇಕು ಎಂದು ವಾಣಿ ಪದವಿ ಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕ ಬೆಳಿಯಪ್ಪ ಕೆ. ಹೇಳಿದರು.

ವಾಣಿ ಶಿಕ್ಷಣ ಸಂಸ್ಥೆಗಳ ಆಶ್ರಯದಲ್ಲಿ ನಡೆದ ನಾಡಪ್ರಭು ಕೆಂಪೇಗೌಡರ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ವಾಣಿ ಶಿಕ್ಷಣ ಸಂಸ್ಥೆಯ ಜತೆ ಕಾರ್ಯದರ್ಶಿ ಶ್ರೀನಾಥ್ ಕೆ.ಎನ್ ಅಧ್ಯಕ್ಷತೆ ವಹಿಸಿದ್ದರು. ಸಂಸ್ಥೆಯ ಆಡಳಿತ ಅಧಿಕಾರಿ ಪ್ರಸಾದ್ ಕುಮಾರ್ ಉಪಸ್ಥಿತರಿದ್ದರು. ಪ್ರಾಂಶುಪಾಲ ಯದುಪತಿ ಗೌಡ ಸ್ವಾಗತಿಸಿದರು. ಉಪಪ್ರಾಂಶುಪಾಲ ವಿಷ್ಣು ಪ್ರಕಾಶ್ ಎಂ. ವಂದಿಸಿದರು. ಉಪನ್ಯಾಸಕ ಮಹಾಬಲ ಗೌಡ ಕಾರ್ಯಕ್ರಮ ನಿರೂಪಿಸಿದರು.