ಜಿಲ್ಲೆ

ನಾಡ್ಪಾಲು ಗ್ರಾಮ ದತ್ತು

ಇಂದಿರಾ ಎನ್ ಕೆ

ಹೆಬ್ರಿ: ನಾಡ್ಪಾಲು ಗ್ರಾಮವನ್ನು ದತ್ತು ತೆಗೆದುಕೊಳ್ಳುತ್ತಿದ್ದೇನೆ. ತಿಂಗಳೆ ಪ್ರತಿಷ್ಠಾನದ ಪತ್ರ ಇದ್ದಲ್ಲಿ ಮುಂದಿನ ದಿನಗಳಲ್ಲಿ ಎಲ್ಲ ರೀತಿಯ ಚಿಕಿತ್ಸೆಗಳು ಉಚಿತವಾಗಿ ದೊರೆಯುತ್ತದೆ ಎಂದು ಉಡುಪಿ ಪ್ರಸಾದ್ ನೇತ್ರಾಲಯದ ಡಾ.ಕೃಷ್ಣಪ್ರಸಾದ್ ಕೂಡ್ಲು ಹೇಳಿದರು.

ತಿಂಗಳೆಯಲ್ಲಿ ಇತ್ತೀಚೆಗೆ ನಡೆದ ಧರ್ಮ, ಕಲೆ, ಸಾಹಿತ್ಯೋತ್ಸವ ಕಾರ್ಯಕ್ರಮದಲ್ಲಿ ತಿಂಗಳೆ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದರು.

ಸಾವಂತವಾಡಿ ಸಿಂಧೂ ದುರ್ಗ ಸಂಸ್ಥಾನದ ರಾಜ ಬಹುದ್ದೂರ್ ಕೇಮ್ ಸಾವಂತ್ ಭೋಸ್ಲೆ ಅಧ್ಯಕ್ಷತೆ ವಹಿಸಿದ್ದರು. ಡಾ.ಕೃಷ್ಣಪ್ರಸಾದ್ ಕೂಡ್ಲು ಅವರಿಗೆ ತಿಂಗಳೆ ಪ್ರಶಸ್ತಿ ಪ್ರದಾನಿಸಲಾಯಿತು. ಶೈಕ್ಷಣಿಕ ಸಾಧಕಿ ಪ್ರಿಯಾ ಉದಯ ಆಚಾರ್ಯ ತಣ್ಣೀರು ಅವರಿಗೆ ವಿಶೇಷ ಅಭಿನಂದನೆ ಸಲ್ಲಿಸಲಾಯಿತು.

ವಿಜಯ ಪಾತ್ರೇಪೆಕರ್, ಡಾ.ವೀಣಾ ಬನ್ನಂಜೆ, ಶ್ರೀಕಾಂತ್ ಶೆಟ್ಟಿ ಉಪಸ್ಥಿತರಿದ್ದರು. ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ, ಡಾ.ಧನಂಜಯ ಸರ್ಜಿ, ಯಶ್‌ಪಾಲ್ ಸುವರ್ಣ ಭೇಟಿ ನೀಡಿದರು. ತಿಂಗಳೆ ವಿಕ್ರಮಾರ್ಜುನ ಹೆಗ್ಗಡೆ ಸ್ವಾಗತಿಸಿದರು. ಅಮಿತಾಂಜಲಿ ಕಿರಣ್ ಹಾಗೂ ಡಾ.ಪ್ರಶಾಂತ್ ಶೆಟ್ಟಿ ನಿರೂಪಿಸಿದರು.