ವಿಜಯಪುರ : ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯೆ ಡಾ. ನಾಗಲಕ್ಷಿ$್ಮ ಚೌಧರಿ ಜ. 21 ರಿಂದ ಜ. 24ರ ರವರೆಗೆ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.
ಜ. 22 ರಂದು ಬೆಳಗ್ಗೆ 9.30ಕ್ಕೆ ಮುದ್ದೇಬಿಹಾಳ ತಾಲೂಕಿನ ಶಿರೋಳ ರಸ್ತೆಯಲ್ಲಿರುವ ಅಲೆಮಾರಿ ಜನಾಂಗದ ವಾಸಸ್ಥಾನಕ್ಕೆ ಭೇಟಿ ನೀಡಲಿದ್ದು, ಮಧ್ಯಾಹ್ನ 12ಕ್ಕೆ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಮಧ್ಯಾಹ್ನ 2.30ಕ್ಕೆ ಮುದ್ದೇಬಿಹಾಳ ತಾಲೂಕು ಆಸ್ಪತ್ರೆಗೆ ನಂತರ 3.30ಕ್ಕೆ ವಿಜಯಪುರ ಜಿಲ್ಲೆಯ ಡೊಂಕಮಡು ಗ್ರಾಮಕ್ಕೆ ಭೇಟಿ ನೀಡುವರು.
ಜ. 23 ರಂದು ಬೆಳಗ್ಗೆ 9.30ಕ್ಕೆ ವಿದ್ಯಾರ್ಥಿಗಳಿಗೆ ಮತ್ತು ಸಾಮಾಜಿಕ ಕಾರ್ಯಕರ್ತರಿಗೆ ಸಂವಿಧಾನ, ಸಾಮಾಜಿಕ ನ್ಯಾಯದ ಕಾನೂನುಗಳ ಕುರಿತು ಜಾಗೃತಿ ಮೂಡಿಸಲು ಹಮ್ಮಿಕೊಂಡಿರುವ ರಾಜ್ಯಮಟ್ಟದ ಕಾರ್ಯಾಗಾರ ಉದ್ಘಾಟಿಸುವರು. ನಂತರ ಮಧ್ಯಾಹ್ನ 1.30ಕ್ಕೆ ಬಬಲೇಶ್ವರ ತಾಲೂಕಿನ ಸಾರವಾಡ ಗ್ರಾಮಕ್ಕೆ ಹಾಗೂ ಸಂಜೆ 5ಕ್ಕೆ ವಿಜಯಪುರ ನಗರದಲ್ಲಿರುವ ಮಹಿಳಾ ಪೊಲೀಸ್ ಠಾಣೆಗೆ ಭೇಟಿ ನೀಡಲಿದ್ದಾರೆ.
ಜ. 24 ರಂದು ಬೆಳಗ್ಗೆ 11ಕ್ಕೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಹಿಳಾ ಪ್ರಗತಿ ಪರಿಶೀಲನಾ ಸಭೆ ನಂತರ ಮಧ್ಯಾಹ್ನ 1ಕ್ಕೆ ಸುದ್ದಿಗೋಷ್ಠಿ ನಡೆಸುವರು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.