ಜಿಲ್ಲೆ

ಬಗ್ಗವಳ್ಳಿ ಸಹಕಾರ ಸಂಘಕ್ಕೆ ನಾಗಭೂಷಣ್ ಅಧ್ಯಕ್ಷ

ತರೀಕೆರೆ: ಅಜ್ಜಂಪುರ ತಾಲೂಕಿನ ಬಗ್ಗವಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಚನ್ನಾಪುರ ನಾಗಭೂಷಣ್ ಅವಿರೋಧ ಆಯ್ಕೆಯಾದರು.
ಹಿಂದಿನ ಅಧ್ಯಕ್ಷ ಜಿ.ಇ.ಪ್ರಭು ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಚನ್ನಾಪುರ ನಾಗಭೂಷಣ್ ಮಾತ್ರ ನಾಮಪತ್ರ ಸಲ್ಲಿಸಿದ್ದರಿಂದ ಚುನಾವಣಾಧಿಕಾರಿ ಯತೀಶ್ ಅವಿರೋಧ ಆಯ್ಕೆ ಘೋಷಿಸಿದರು.
ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಿ.ಎಸ್.ಸುರೇಶ್ ನೂತನ ಅಧ್ಯಕ್ಷರನ್ನು ಅಭಿನಂದಿಸಿ ಮಾತನಾಡಿ, ರೈತರಿಗೆ ಅನುಕೂಲವಾಗುವಂತೆ ಸಕಾಲದಲ್ಲಿ ಸಾಲ ಸೌಲಭ್ಯ ವಿತರಿಸುವುದು ಮಾತ್ರವಲ್ಲ, ಮರು ಪಾವತಿಗೂ ಒತ್ತು ಹೆಚ್ಚು ನೀಡಿ ಸಹಕಾರ ಸಂಘದ ಪ್ರಗತಿಗೆ ಶ್ರಮಿಸಬೇಕು. ಜಿಲ್ಲಾ ಸಿಡಿಸಿಸಿ ಬ್ಯಾಂಕ್‌ನಿಂದ ಸದ್ಯದಲ್ಲೇ ಲಭ್ಯವಾಗುವ ಅನುದಾನ ನೀಡಿ ರೈತರಿಗೆ ಹೊಸ ಸಾಲ ಹಂಚಿಕೆ ಮಾಡಲು ಅವಕಾಶ ಕಲ್ಪಿಸಲಾಗುವುದು ಎಂದು ಭರವಸೆ ನೀಡಿದರು.
ಸಿಡಿಸಿಸಿ ಬ್ಯಾಂಕ್ ನಿರ್ದೇಶಕ ಕೆ.ಆರ್.ಆನಂದಪ್ಪ, ಪಿಎಸಿಎಸ್ ಉಪಾಧ್ಯಕ್ಷ ಲಿಂಗರಾಜು, ನಿರ್ದೇಶಕರಾದ ಸುರೇಶ್, ರಾಣಿ, ಮಮತ, ಸಿದ್ದೇಗೌಡ, ತಿಪ್ಪೇಸ್ವಾಮಿ, ಮೂಡಲಗಿರಿಯಪ್ಪ, ಸಿಇಒ ವಿನಯ್‌ಕುಮಾರ್ ಮತ್ತಿತರರಿದ್ದರು.