ಜಿಲ್ಲೆ

ನಗ್ರಿ ಮಹಾಬಲ ರೈಗೆ ಕದ್ರಿ ವಿಷ್ಣು ಪ್ರಶಸ್ತಿ ಪ್ರದಾನ

Mangaluru - Hariprasad Rai



ಮಂಗಳೂರು : ಕಟೀಲು ಮೇಳದಲ್ಲಿ 35 ವರ್ಷಗಳಿಂದ ಕಲಾ ಸೇವೆ ಮಾಡುತ್ತಿರುವ ಬಣ್ಣದ ವೇಷಧಾರಿ ನಗ್ರಿ ಮಹಾಬಲ ರೈ ಅವರಿಗೆ ಕದ್ರಿ ಯಕ್ಷ ಬಳಗದ ವತಿಯಿಂದ ಕದ್ರಿ ವಿಷ್ಣು ಪ್ರಶಸ್ತಿ -2024 ನೀಡಿ ಗೌರವಿಸಲಾಯಿತು. ಕದ್ರಿಯಲ್ಲಿ ನಡೆದ ಕಟೀಲು ಮೇಳದ ಸೇವೆ ಆಟದ ಸಂದರ್ಭ ಪ್ರಶಸ್ತಿ ಪ್ರಧಾನ ಮಾಡಲಾಯಿತು.
ಇದೇ ಸಂದರ್ಭ ಕರ್ನಾಟಕ ಯಕ್ಷಗಾನ ಅಕಾಡೆಮಿಯ ಸಹಭಾಗಿತ್ವದಲ್ಲಿ ವಿಷ್ಣು ಸಂಸ್ಮರಣೆ ನಡೆಯಿತು. ಸುಧಾಕರ ರಾವ್ ಪೇಜಾವರ ಅವರು ಕದ್ರಿ ವಿಷ್ಣು ಸಂಸ್ಮರಣೆ ಮಾಡಿದರು. ಅಕಾಡೆಮಿಯ ಸದಸ್ಯ ಮೋಹನ್ ಕೊಪ್ಪಳ ಕದ್ರಿ , ಯಕ್ಷ ಬಳಗದ ಅಧ್ಯಕ್ಷ ಕದ್ರಿ ನವನೀತ ಶೆಟ್ಟಿ ಭಾಸ್ಕರ ಶೆಟ್ಟಿ ಗುರುದೇವ್, ಸೀತಾರಾಮ್ ಅರೆಕೆರೆಬೈಲ್, ರವೀಂದ್ರನಾಥ ಶೆಟ್ಟಿ ಮುಂಡ್ಕೂರು, ಗೋಕುಲ್ ಕದ್ರಿ, ಬೆಟ್ಟಂಪಾಡಿ ಸುಂದರ ಶೆಟ್ಟಿ,ಜಯಶೀಲ ಅಡ್ಯಂತಾಯ, ತಾರಾನಾಥ ಶೆಟ್ಟಿ ಬೋಳಾರ, ರಾಮಚಂದ್ರ ಭಟ್ ಎಲ್ಲೂರು, ನಿವೇದಿತಾ ಶೆಟ್ಟಿ, ಭಾಸ್ಕರ ರೈ ಕುಕ್ಕುವಳ್ಳಿ, ಹರೀಶ್ ಕುಮಾರ್ ಚಿತ್ರಾಪುರ, ಮೂಲ್ಕಿ ಕರುಣಾಕರ ಶೆಟ್ಟಿ, ಪಣಂಬೂರು ಶ್ರೀಧರ ಐತಾಳ, ಸುಧಾಕರ ಶೆಟ್ಟಿ ದೋಣಿಂಜೆ,ನಾಗೇಶ್ ಭಂಡಾರಿ ಡೊಂಬಿವಿಲಿ ಉಪಸ್ಥಿತರಿದ್ದರು. ಪ್ರದೀಪ್ ಆಳ್ವ ಕದ್ರಿ ಸನ್ಮಾನ ಪತ್ರ ವಾಚಿಸಿದರು. ಶಿವಪ್ರಸಾದ್ ಪ್ರಭು ಸ್ವಾಗತಿಸಿದರು. ಪುರುಷೋತ್ತಮ ಭಂಡಾರಿ ಅಡ್ಯಾರ್ ಕಾರ್ಯಕ್ರಮ ನಿರೂಪಿಸಿದರು.