ಮೈಸೂರು: ನರೇಂದ್ರ ಮೋದಿ ಮೂರನೇ ಬಾರಿ ಪ್ರಧಾನಿಯಾಗಬೇಕು ಅನ್ನೋದು ಎಲ್ಲರ ಆಶಯವಾಗಿದೆ. 400ಕ್ಕೂ ಹೆಚ್ಚು ಸೀಟುಗಳನ್ನು ಎನ್'ಡಿಎ ಮೈತ್ರಿ ಗೆಲ್ಲುತ್ತದೆ. ಮೈಸೂರು ಲೋಕಸಭಾ ಕ್ಷೇತ್ರದಲ್ಲೂ ಗೆಲ್ಲುವ ವಿಶ್ವಾಸ ಹೊಂದಿದ್ದೇವೆ ಎಂದು ಮಾಜಿ ಸಚಿವ ಡಾ.ಸಿ.ಎಚ್. ಅಶ್ವಥ್ ನಾರಾಯಣ್ ಹೇಳಿದರು.
ಮೈಸೂರಿನ ಶಾಸಕರು ಉತ್ತಮವಾಗಿ ಕೆಲಸ ಮಾಡಿದ್ದಾರೆ. ಸಂಸದ ಪ್ರತಾಪಸಿಂಹ ಅದ್ಬುತವಾಗಿ ಕೆಲಸ ಮಾಡಿದ್ದಾರೆ. ರೈಲ್ವೇ ಆರೋಗ್ಯ ಶಿಕ್ಷಣ ಕುಡಿಯವ ನೀರು ಸೇರಿ ಎಲ್ಲಾ ಕಡೆ ಉತ್ತಮ ಕೆಲಸ ಮಾಡಿದ್ದಾರೆ. ನಾಲ್ವಡಿ ಕಾಲದ ರೀತಿಯಲ್ಲಿ ಪ್ರತಾಪಸಿಂಹ ಕೆಲಸ ಮಾಡಿದ್ದಾರೆ. ಕೊಡಗು ಮೈಸೂರು ಎಲ್ಲಾ ಕ್ಷೇತ್ರದಲ್ಲೂ ಮತ್ತೊಮ್ಮೆ ನಮ್ಮ ಅಭ್ಯರ್ಥಿ ಮತ್ತೆ ಆಯ್ಕೆಯಾಗಬೇಕು. ಕಳೆದ ಬಾರಿಗಿಂತ ಹೆಚ್ಚಿನ ಮತ ಪಡೆಯಬೇಕು ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.