ಜಿಲ್ಲೆ

ಮುತ್ತಗಾ ಗ್ರಾಮದ ಕಂಠಿ ಬಸವೇಶ್ವರ ದೇವಸ್ಥಾನದಲ್ಲಿರುವ ನಂದಿ ವಿಗ್ರಹ ಧ್ವಂಸಗೊಳಿಸಿದ ದುಷ್ಕರ್ಮಿಗಳು : ಉದ್ವಿಗ್ನ

ಶಹಾಬಾದ ತಾಲೂಕಿನ ಮುತ್ತಗಾ ಗ್ರಾಮದಲ್ಲಿರುವ ಕಂಠಿ ಬಸವೇಶ್ವರ ದೇವಸ್ಥಾನದಲ್ಲಿನ ನಂದಿ ವಿಗ್ರಹವನ್ನು ದುಷ್ಕರ್ಮಿಗಳು ಧ್ವಂಸಗೊಳಿಸಿದ ಘಟನೆ ನಡೆದಿದೆ.

ಬಾಬುರಾವ ಯಡ್ರಾಮಿ

ವಿಜಯವಾಣಿ ಸುದ್ದಿಜಾಲ ಕಲಬುರಗಿ

ಶಹಾಬಾದ ತಾಲೂಕಿನ ಮುತ್ತಗಾ ಗ್ರಾಮದಲ್ಲಿರುವ ಕಂಠಿ ಬಸವೇಶ್ವರ ದೇವಸ್ಥಾನದಲ್ಲಿನ ನಂದಿ ವಿಗ್ರಹವನ್ನು ದುಷ್ಕರ್ಮಿಗಳು ಧ್ವಂಸಗೊಳಿಸಿದ ಘಟನೆ ನಡೆದಿದೆ.

ಕೆಲ ದಿನಗಳ ಹಿಂದಷ್ಟೆ ಹಲಕರ್ಟಿ ಗ್ರಾಮದಲ್ಲಿ ವಿಶ್ಚಗುರು ಬಸವೇಶ್ವರ ಭಾವಚಿತ್ರಕ್ಕೆ ಅಪಮಾನಗೊಳಿಸಿದ ಘಟನೆ ಮಾಸುವ ಮುನ್ನ ಮತ್ತೊಂದು ದುಷ್ಕತ್ಯ ನಡೆದಿದೆ. ಇದು ಜಿಲ್ಲೆಯ ಜನರನ್ನು ಆಘಾತಗೊಳಿಸಿದೆ.

ಶಹಾಬಾದ ಪಟ್ಟಣಕ್ಕೆ ಸಮೀಪದಲ್ಲಿ ಇರುವ ತಮುತ್ತಗಾ ಗ್ರಾಮದ ಹೊರವಲಯದಲ್ಲಿರುವ ಕಂಠಿ ಬಸವೇಶ್ವರ ದೇವಸ್ಥಾನದಲ್ಲಿ ನಂದಿ ಬಸವಣ್ಣನ ಮೂರ್ತಿಯನ್ನು ದುಷ್ಕರ್ಮಿಗಳು ಕಿತ್ತು ಹೊರ ತಂದು ಹಾಕಿ ಭಗ್ನಗೊಳಿಸಿ ವಿರೂಪ ಗೊಳಿಸಿದ್ದಾರೆ.

ಕೆಲ ದೇವರ ಮೂರ್ತಿಗಳನ್ನು ಗರ್ಭಗುಡಿಯಿಂದ ಹೊರಗಡೆ ಬಿಸಾಡಿ ಪರಾರಿಯಾಗಿದ್ದಾರೆ. ಇಂದು ಮುಂಜಾನೆ ದೇವರ ಪೂಜೆಗೆ ಬಂದಾಗ ಕೃತ್ಯ ನಡೆದಿರುವುದು ಬೆಳಕಿಗೆ ಬಂದಿದೆ.

ದುಷ್ಕೃತ್ಯ ನಡೆಸಿದ ಆರೋಪಿಗಳ ಪತ್ತೆಗಾಗಿ ಗ್ರಾಮಸ್ಥರು ಒಕ್ಕೋರಲಿನಿಂದ ಆಗ್ರಹಿಸಿದರು.ಸ್ಥಳದಲ್ಲಿ ಕೆಲ ಹೊತ್ತು ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು.

ಶಹಬಾದ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗಿದೆ.