ಮಾನ್ವಿ ತಾಲೂಕಿನ ನಂದಿಹಾಳ ಗ್ರಾಮದಲ್ಲಿ ಉದ್ಯೋಗ ಖಾತ್ರಿ ಕಾರ್ಮಿಕರಿಗೆ ಮಂಗಳವಾರ ಆರೋಗ್ಯ ತಪಾಸಣೆ ಶಿಬಿರ ಏರ್ಪಡಿಸಲಾಗಿತ್ತು.  
ಜಿಲ್ಲೆ

ಆರೋಗ್ಯ ಉಚಿತ ತಪಾಸಣೆ ಶಿಬಿರ

ಮಾನ್ವಿ: ತಾಲೂಕಿನ ನಂದಿಹಾಳ ಗ್ರಾಮದಲ್ಲಿ ಭೋಗಾವತಿ ಗ್ರಾಪಂ ಮತ್ತು ಆರೋಗ್ಯ ಇಲಾಖೆ ಸಂಯುಕ್ತಾಶ್ರಯದಲ್ಲಿ ದುಡಿಯೋಣ ಬಾ ಅಭಿಯಾನ ಕಾರ್ಮಿಕರಿಗಾಗಿ ಆರೋಗ್ಯ ಉಚಿತ ತಪಾಸಣೆ ಶಿಬಿರ ಏರ್ಪಡಿಸಲಾಗಿತ್ತು.

ನರೇಗಾ ತಾಲೂಕ ಸಂಯೋಜಕ ಈರೇಶ ಮಾತನಾಡಿ, ನರೇಗಾ ಕಾರ್ಮಿಕರ ಕಡ್ಡಾಯವಾಗಿ ಎನ್‌ಎಂಎಂಎಸ್ ಆ್ಯಪ್ ಮೂಲಕ ಹಾಜರಾತಿ ಪಡೆದುಕೊಳ್ಳಬೇಕು. ಅಂಗವಿಕಲರು ಹಾಗೂ ಮಂಗಳಮುಖಿಯರಿಗೂ ದುಡಿಯೋಣ ಬಾ ಅಭಿಯಾನದಡಿ ಕೆಲಸ ನೀಡಲಾಗುತ್ತಿದೆ. ಕೂಲಿಕಾರರ ಆರೋಗ್ಯದ ಹಿತದೃಷ್ಠಿಯಿಂದ ಆರೋಗ್ಯ ತಪಾಸಣೆ ಶಿಬಿರ ಹಮ್ಮಿಕೊಂಡಿದ್ದು, ಉಚಿತ ಚಿಕಿತ್ಸೆ ಮತ್ತು ಔಷಧ ನೀಡಲಾಗುತ್ತಿದೆ ಎಂದರು.

ಕಾರ್ಮಿಕರಿಗೆ ರಕ್ತದೊತ್ತಡ, ಮಧುಮೇಹ ಹಾಗೂ ಇತರ ಆರೋಗ್ಯ ತಪಾಸಣೆ ನಡೆಸಲಾಯಿತು. ಸಮುದಾಯ ಆರೋಗ್ಯಾಧಿಕಾರಿ ಶ್ರೀಕಾಂತ ಶಿವಪುರೆ, ಡಿಇಒ ಚನ್ನಬಸವಸ್ವಾಮಿ, ಕೆಎಚ್‌ಪಿಟಿ ತಾಲೂಕ ಸಂಯೋಜಕ ಮರಿಲಿಂಗಪ್ಪ, ಮೇಟಿಗಳು ಇದ್ದರು.