ಧಾರವಾಡ: ಇಲ್ಲಿನ ಮದಿಹಾಳದ ಲಕ್ಷ್ಮೀ ನರಸಿಂಹ ದೇವರ ದೇವಸ್ಥಾನದಲ್ಲಿ ನರಸಿಂಹ ಜಯಂತಿ ಪ್ರಯುಕ್ತ ಮೇ 7ರಿಂದ ವಿವಿಧ ಕಾರ್ಯಕ್ರಮಗಳು ಆರಂಭವಾಗಿದ್ದು, ಮೇ 12ರವರೆಗೆ ನಡೆಯಲಿವೆ.
ಮೇ 10ರಂದು ತೊಟ್ಟಿಲೋತ್ಸವ, ಮಂತ್ರಪುಷ್ಪ, ಅಷ್ಟಾವಧಾನ ಹಾಗೂ ವಿವಿಧ ಭಜನಾ ಮಂಡಳಿಗಳಿಂದ ಸಂಗೀತ ಕಾರ್ಯಕ್ರಮ ನಡೆಯಲಿವೆ. ಮೇ 12ರಂದು ಬೆಳಗ್ಗೆ 7ಕ್ಕೆ ರಥಾಂಗ ಹೋಮ, 9ಕ್ಕೆ ಲಕ್ಷ್ಮೀ ನರಸಿಂಹ ದೇವರ ರಥೋತ್ಸವ ಮದಿಹಾಳದ ಮುಖ್ಯ ರಸ್ತೆಯಲ್ಲಿ ನಡೆಯಲಿದೆ. ಪಂಚಾಮೃತ ಅಭಿಷೇಕ ನಂತರ ಮಹಾ ನೈವೇದ್ಯ ಮತ್ತು ಪ್ರಸಾದ ವಿತರಣೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.