ಜಿಲ್ಲೆ

ನಾರಾವಿ ಸಂತ ಅಂತೋನಿ ಶಿಕ್ಷಣ ಸಂಸ್ಥೆಗಳ ದಿನಾಚರಣೆ

ಸೌಮ್ಯ ಆರ್

ಬೆಳ್ತಂಗಡಿ: ನಾರಾವಿ ಸಂತ ಅಂತೋನಿ ಸಂಸ್ಥೆಗಳ ದಿನಾಚರಣೆ ನಡೆಯಿತು. ಧ್ವಜಾರೋಹಣ ನೆರವೇರಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಮಾಜಿ ಶಾಸಕ ಜೆ.ಆರ್.ಲೋಬೋ ಮಾತನಾಡಿದರು. ಸಂತ ಅಂತೋನಿ ಶಿಕ್ಷಣ ಸಂಸ್ಥೆಗಳ ಸಂಚಾಲಕ ಜೆರೋಮ್ ಡಿ’ಸೋಜಾ ಅಧ್ಯಕ್ಷತೆ ವಹಿಸಿದ್ದರು.

ಕರ್ನಾಟಕ ಸಾರ್ವಜನಿಕ ಶಿಕ್ಷಣ ಇಲಾಖೆಯ ನಿವೃತ್ತ ನಿರ್ದೇಶಕಿ ಫಿಲೋಮಿನಾ ಲೋಬೊ, ಸಂತ ಅಂತೋನಿ ಚರ್ಚ್ ಪಾಲನಾ ಸಮಿತಿಯ ಉಪಾಧ್ಯಕ್ಷ ಸಂಜಯ್ ಮಿರಾಂದ, ಕಾರ್ಯದರ್ಶಿ ಎವ್ಜಿನ್ ರೋಡ್ರಿಗಸ್, ಸಂತ ಅಂತೋನಿ ಶಿಕ್ಷಣ ಸಂಸ್ಥೆಗಳ ಎಲ್ಲ ಮುಖ್ಯಸ್ಥರು ಸಂತ ಅಂತೋನಿ ಪದವಿ ಪೂರ್ವ ಹಾಗೂ ಪದವಿ ಕಾಲೇಜಿನ ವಿದ್ಯಾರ್ಥಿ ಸಂಘದ ನಾಯಕರು ಉಪಸ್ಥಿತರಿದ್ದರು.

ಪ್ರಾಂಶುಪಾಲ ಡಾ.ಆಲ್ವಿನ್ ಸೆರಾವೋ ಸ್ವಾಗತಿಸಿ, ಸಂತ ಅಂತೋನಿ ಪದವಿ ಪೂರ್ವ ಕಾಲೇಜಿನ ಅರ್ಥಶಾಸ್ತ್ರ ಉಪನ್ಯಾಸಕಿ ಜ್ಯೋತಿ ಹೆಗ್ಡೆ ನಿರೂಪಿಸಿದರು. ಪದವಿ ಕಾಲೇಜಿನ ಉಪ ಪ್ರಾಂಶುಪಾಲ ಸಂತೋಷ್ ಸಲ್ದಾನ ವಂದಿಸಿದರು.