ಬೆಳಗಾವಿ: ಸರ್ಕಾರವು ಧಾರವಾಡ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದ ನಾರಾಯಣ ಭರಮನಿ ಅವರನ್ನು ಬೆಳಗಾವಿ ನಗರ ಕಾನೂನು ಮತ್ತು ಸುವ್ಯವಸ್ಥೆ (ಡಿಸಿಪಿ) ಆಗಿ ವರ್ಗಾವಣೆ ಮಾಡಿ ಗುರುವಾರ ಸರ್ಕಾರ ಆದೇಶ ಹೊರಡಿಸಿದೆ.
ಬೆಳಗಾವಿ ನಗರದಲ್ಲಿ ನಡೆದಿದ್ದ ಕಾಂಗ್ರೆಸ್ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೈ ಎತ್ತಿದ್ದರು ಎಂಬ ಕಾರಣಕ್ಕೆ ಬೇಸರಗೊಂಡಿದ್ದ ನಾರಾಯಣ ಭರಮನಿ ಅವರು ರಾಜೀನಾಮೆ ಸಲ್ಲಿಸಿದ್ದರು. ಇದರ ಬೆನ್ನಲ್ಲೆ ಸಾರಿಗೆ ಸಚಿವ ರಾಮಲಿಂಗರೆಡ್ಡಿ, ಗೃಹ ಸಚಿವ ಡಾ.ಜಿ.ಪರಮೇಶ್ವರ ಸಮಾಧಾನ ಪಡಿಸಲು ಯತ್ನಿಸಿದರು. ಇದೀಗ ಸರ್ಕಾರವೇ ಅವರನ್ನು ಬೆಳಗಾರಿ ನಗರದ ಡಿಸಿಪಿ ಆಗಿ ಬಡ್ತಿ ನೀಡಿ ವರ್ಗಾವಣೆ ಮಾಡಿದೆ. ಬೆಳಗಾವಿ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ-2 ಆಗಿದ್ದ ರಾಮಗೊಂಡ ಬಿ.ಬಸರಗಿ ಅವರನ್ನು ಅದೇ ಸ್ಥಳದಲ್ಲಿಯೇ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ-1ಗೆ ಬಡ್ತಿ ನೀಡಿ ಆದೇಶಿಸಿದೆ.