ಮಂಗಳೂರು: ದ.ಕ.ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕುದ್ರೋಳಿ ಗೋಕರ್ಣನಾಥ ಕ್ಷೇತ್ರ ಸಹಯೋಗದಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಆ.31ರಂದು ಸಾಯಂಕಾಲ 4ಕ್ಕೆ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ನಡೆಯಲಿದೆ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಉದ್ಘಾಟಿಸುವರು. ಶಾಸಕ ಡಿ.ವೇದವ್ಯಾಸ ಕಾಮತ್ ಅಧ್ಯಕ್ಷತೆ ವಹಿಸುವರು. ಸಂತ ಆಗ್ನೆಸ್ ಕಾಲೇಜಿನ ಪ್ರಾಧ್ಯಾಪಕ ಡಾ.ಅರುಣ್ ಉಳ್ಳಾಲ ನಾರಾಯಣ ಗುರು ಜಯಂತಿಯ ಸಂದೇಶ ನೀಡಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.