ಜಿಲ್ಲೆ

ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ

ಸುನಿಲ್ ಪೊನ್ನೇಟಿ

ಮಡಿಕೇರಿಸ ಮಾನತೆ ಮತ್ತು ಮೌಲ್ಯವನ್ನು ಬೋಧಿಸಿದ ಮಹಾ ಸಂತ ಬ್ರಹ್ಮಶ್ರೀ ನಾರಾಯಣ ಗುರು ತತ್ವಜ್ಞಾನ ಮತ್ತು ಸಮಾಜ ಸುಧಾರಣೆಗಾಗಿ  ಶ್ರಮಿಸಿದ್ದಾರೆ  ಎಂ ಉಪ ವಿಭಾಗ ಅಧಿಕಾರಿ ನಿತಿನ್ ಚಕ್ಕಿ ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನಗರದ ಗಾಂಧಿ ಭವನದಲ್ಲಿ ಭಾನುವಾರ ಏರ್ಪಡಿಸಿದ್ದ  ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.

ಒಂದೇ ಜಾತಿ, ಒಂದೇ ಧರ್ಮ, ಒಂದೇ ದೇವರು ಎನ್ನುವ ಬ್ರಹ್ಮಶ್ರೀ ನಾರಾಯಣ ಗುರು  ಅವರ  ಸಂದೇಶ  ಎಂದಿಗೂ ಜೀವಂತ ಎಂದರು.

ಕರ್ನಾಟಕ ರೇಷ್ಮೆ ಅಭಿವೃದ್ಧಿ ಮಂಡಳಿ ಮಾಜಿ ಅಧ್ಯಕ್ಷ ಟಿ.ಪಿ. ರಮೇಶ್ ಮಾತನಾಡಿ ನಾರಾಯಣ ಗುರುಗಳು ಕೇರಳದ ತಿರುವನಂತಪುರ ಬಳಿಯ ಚೆಂಬಳಂತಿ ಎಂಬ ಗ್ರಾಮದಲ್ಲಿ ಜನಿಸಿದರು. ಕೇರಳದಲ್ಲಿ ಜಾತಿ, ಮತಭೇದಗಳು ಹೆಚ್ಚಾಗಿದ್ದ ಕಾಲದಲ್ಲಿ 'ನಾರಾಯಣ ಗುರು ಅವರು ಒಬ್ಬ ಸಮಾಜದ ಸುಧಾರಕನಾಗಿ ಉದಯಿಸಿ, ಸಮಾಜದ ತಾರತಮ್ಯ ಹೋಗಲಾಡಿಸಲು ಪ್ರಯತ್ನಿಸಿದರು. ಸಮಾನತೆಯ ಸಮಾಜ ನಿರ್ಮಾಣಕ್ಕೆ ಇಡೀ ಜೀವನವನ್ನು ಮುಡಿಪಾಗಿಟ್ಟ ನಾರಾಯಣ ಗುರು ಅವರ ತತ್ವ, ಸಿದ್ದಾಂತ ಹಾಗೂ ಪ್ರತಿಪಾದಿಸಿದ ಸಂದೇಶಗಳು  ಇಡೀ ಸಮಾಜಕ್ಕೆ ಮಾದರಿ ಎಂದು ಹೇಳಿದರು.

 ಬಿಲ್ಲವ ಸಮಾಜ ಸೇವಾ ಸಂಘದ ತಾಲೂಕು ಅಧ್ಯಕ್ಷೆ ಬಿ.ಎಸ್. ಲೀಲಾವತಿ ಮಾತನಾಡಿ ವಿದ್ಯೆಯಿಂದ ಸ್ವತಂತ್ರರಾಗಿರಿ, ಸಂಘಟನೆಯಿಂದ ಬಲಿಷ್ಠರಾಗಿರಬೇಕು  ಹಾಗೂ  ಬ್ರಹ್ಮಶ್ರೀ ನಾರಾಯಣ ಗುರುಗಳ ತತ್ವ ನಿಷ್ಠೆ ಪರಿಪಾಲಿಸಬೇಕು ಎಂದರು.

ಬಿಲ್ಲವ ಸಮಾಜದ ಜಿಲ್ಲಾಧ್ಯಕ್ಷ  ಬಿ.ಆರ್. ಲಿಂಗಪ್ಪ,  ಮಾತನಾಡಿ ಬ್ರಹ್ಮಶ್ರೀ ನಾರಾಯಣ ಗುರುಗಳ ಆದರ್ಶಗಳನ್ನು ಪಾಲನೆ ಮಾಡುವುದರಲ್ಲಿ ಕಾರ್ಯ ಪ್ರವೃತ್ತರಾಗಬೇಕು. ನಾರಾಯಣ ಗುರು ಅವರು  ಹಿಂದುಳಿದ ವರ್ಗಗಳಿಗೆ ಸಮಾನತೆ ಹಕ್ಕನ್ನು ತಂದು ಕೊಟ್ಟಿದ್ದಾರೆ ಎಂದು ಹೇಳಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ, ಮಣಜೂರು ಮಂಜುನಾಥ್, ಆಚಾರ್ಯ, ಪ್ರಮುಖರಾದ ದಿವಾಕರ, ಹಿಂದುಳಿದ ವರ್ಗದ ತಾಲೂಕು ಅಧಿಕಾರಿ ಮೋಹನ್ ಕುಮಾರ್,   ಸಿಂಚನ  ಇತರರು ಮಡಿಕೇರಿ: