ಕುಂದಾಪುರ: ಕೇರಳದ ಸಾಮಾನ್ಯ ಕುಟುಂಬದಲ್ಲಿ ಜನಿಸಿದ ಬ್ರಹ್ಮಶ್ರೀ ನಾರಾಯಣ ಗುರುಗಳು ಅಂದು ಸಮಾಜದಲ್ಲಿ ಬೇರೂರಿದ್ದ ಅಸಮಾನತೆಯ ವಿರುದ್ಧ ಶಾಂತಿ ವಾರ್ಗದಲ್ಲಿ ಸಾಮಾಜಿಕ ಕ್ರಾಂತಿಯನ್ನು ಮಾಡಿದ ಪುಣ್ಯ ಪುರುಷರು ಎಂದು ಬೈಂದೂರು ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ ಹೇಳಿದರು.
ವಂಡ್ಸೆ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತ್ಯುತ್ಸವ ಭಾನುವಾರ ಉದ್ಘಾಟಿಸಿ ಮಾತನಾಡಿದರು. ವಂಡ್ಸೆ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಪ್ರದೀಪ್‌ಕುವಾರ್ ಶೆಟ್ಟಿ ಗುಡಿಬೆಟ್ಟು ಅಧ್ಯಕ್ಷತೆ ವಹಿಸಿದ್ದರು.
ಬ್ರಹ್ಮಾವರ ಸಕ್ಕರೆ ಕಾರ್ಖಾನೆ ಉಪಾಧ್ಯಕ್ಷ ಸಂಪಿಗೇಡಿ ಸಂಜೀವ ಶೆಟ್ಟಿ, ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ಮಾಜಿ ವ್ಯವಸ್ಥಾಪನಾ ಸಮಿತಿ ಸದಸ್ಯ ವಂಡಬಳ್ಳಿ ಜಯರಾಮ್ ಶೆಟ್ಟಿ, ತಾಪಂ ಮಾಜಿ ಸದಸ್ಯ ನಾಗಪ್ಪ ಕೊಠಾರಿ, ಬ್ರಹ್ಮಾವರ ಸಕ್ಕರೆ ಕಾರ್ಖಾನೆ ನಿರ್ದೇಶಕ ಉದಯ್‌ಕುವಾರ್ ಶೆಟ್ಟಿ, ಪ್ರಮುಖರಾದ ಜಿ.ಪಿ.ಮೊಮಮ್ಮದ್ ಗುಲ್ವಾಡಿ ಇದ್ದರು. ತಾಪಂ ಮಾಜಿ ಸದಸ್ಯ ಉದಯ್ ಪೂಜಾರಿ ಸ್ವಾಗತಿಸಿದರು, ಗೋವರ್ದನ ಜೋಗಿ ವಂದಿಸಿದರು.