ಜಿಲ್ಲೆ

ಬ್ರಹ್ಮ ಶ್ರೀ ನಾರಾಯಣ ಗುರುಗಳ ೧೬೯ ನೇ ಜಯಂತಿ

Mangaluru - Nishantha Narayana

ಪುತ್ತೂರು: ಭಾರತೀಯ ಜನತಾ ಪಾರ್ಟಿ ಪುತ್ತೂರು ವಿಧಾನಸಭಾ ಕ್ಷೇತ್ರದ ವತಿಯಿಂದ ಬ್ರಹ್ಮ ಶ್ರೀ ನಾರಾಯಣ ಗುರುಗಳ ೧೬೯ ನೇ ಜಯಂತಿಯನ್ನು ಗುರುಗಳ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಆಚರಿಸಲಾಯಿತು. ರಕ್ಷಾಬಂಧನ ಕಾರ್ಯಕ್ರಮವನ್ನು ಈ ಸಂದರ್ಭದಲ್ಲಿ ಆಚರಿಸಲಾಯಿತು.

ಬಿಜೆಪಿ ಪುತ್ತೂರು ಗ್ರಾಮಾಂತರ ಮಂಡಲದ ಪ್ರಧಾನ ಕಾರ್ಯದರ್ಶಿ ನಿತೀಶ್ ಕುಮಾರ್ ಶಾಂತಿವನ ಬ್ರಹ್ಮಶ್ರೀ ನಾರಾಯಣ ಗುರುಗಳ ಜನನ ಮತ್ತು ಅವರ ಜೀವನ ಸಂದೇಶವನ್ನು ತಿಳಿಸಿದರು. ಪುತ್ತೂರು ಬಿಜೆಪಿ ನಗರ ಮಂಡಲದ ಅಧ್ಯಕ್ಷ ಪಿ. ಜಿ. ಜಗನ್ನಿವಾಸ್ ರಾವ್ ರಕ್ಷಾ ಬಂಧನ ಹಬ್ಬದ ಬಗ್ಗೆ ಮಾತನಾಡಿದರು.

ಬಿಜೆಪಿ ಪುತ್ತೂರು ಗ್ರಾಮಾಂತರ ಮಂಡಲದ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಬೂಡಿಯಾರು ರಾದಕೃಷ್ಣ ರೈ, ಬಿಜೆಪಿ ಜಿಲ್ಲಾ ಒಬಿಸಿ ಮೋರ್ಚಾ ಅಧಕ್ಷ ಆರ್.ಸಿ. ನಾರಾಯಣ, ಬಿಜೆಪಿ ಪುತ್ತೂರು ಗ್ರಾಮಾಂತರ ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ ಮುಂಗ್ಲಿಮನೆ, ನಗರ ಮಂಡಲ ಪ್ರಧಾನ ಕಾರ್ಯದರ್ಶಿ ಯುವರಾಜ್ ಕೆ ಪೆರಿಯಾತ್ತೊಡಿ, ಜಯಶ್ರೀ ಎಸ್ ಶೆಟ್ಟಿ, ಬಿಜೆಪಿ ಪುತ್ತೂರು ಗ್ರಾಮಾಂತರ ಮಂಡಲದ ಉಪಾಧ್ಯಕ್ಷರಾದ ಹರಿಪ್ರಸಾದ್ ಯಾದವ್, ಅರುಣ್ ವಿಟ್ಲ, ಬಿಜೆಪಿ ಜಿಲ್ಲಾ ಎಸ್.ಟಿ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಹರೀಶ್ ಬಿಜತ್ರೆ, ಬಿಜೆಪಿ ಗ್ರಾಮಾಂತರ ಮಂಡಲದ ಒಬಿಸಿ ಮೋರ್ಚಾ ಅಧ್ಯಕ್ಷ ಸುನೀಲ್ ಕುಮಾರ್ ದಡ್ಡು, ಬಿಜೆಪಿ ಪುತ್ತೂರು ಗ್ರಾಮಾಂತರ ಹಾಗೂ ನಗರ ಮಂಡಲದ ಪದಾಧಿಕಾರಿಗಳು, ಬಿಜೆಪಿ ಪ್ರಕೋಷ್ಟಗಳ ಪದಾಧಿಕಾರಿಗಳು, ಮಂಡಲದ ಪ್ರಮುಖರು ಭಾಗವಹಿಸಿದರು.