ಪೋಟೋ ಕ್ಯಾಪ್ಸನ್.. 03 ಎಸ್ ಆರ್ ಜಿ 5.6: ಸರಗೂರು ಪಟ್ಟಣದ ತಹಸೀಲ್ದಾರ್ ಕಚೇರಿಯಲ್ಲಿ ನಾರಾಯಣ ಗುರುಗಳ ಹಾಗೂ ವಿಶ್ವಕರ್ಮ ಜಯಂತಿ ಆಚರಣೆಯ ಪೂರ್ವಭಾವಿ ಸಭೆಯನ್ನು ತಹಸಿಲ್ದಾರ್ ಮೋಹನಕುಮಾರಿ ಅಧ್ಯಕ್ಷತೆಯಲ್ಲಿ ನಡೆಸಲಾಯಿತು. 
ಜಿಲ್ಲೆ

7, 17ರಂದು ಮಹನೀಯರ ಜಯಂತಿ

ವಸಂತಕುಮಾರ್ ಬಿ

ಸರಗೂರು: ಸೆಪ್ಟೆಂಬರ್ 7ರಂದು ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಹಾಗೂ ಸೆ.17 ರಂದು ವಿಶ್ವಕರ್ಮ ಜಯಂತಿಯನ್ನು ಅರ್ಥಪೂರ್ಣ ಆಚರಿಸಲು ನಿರ್ಧರಿಸಲಾಗಿದೆ ಎಂದು ತಹಸೀಲ್ದಾರ್ ಮೋಹನಕುಮಾರಿ ಹೇಳಿದರು.

ಪಟ್ಟಣದ ತಹಸಿಲ್ದಾರ್ ಕಚೇರಿ ಸಭಾಂಗಣದಲ್ಲಿ ಮಂಗಳವಾರ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ವೇದಿಕೆ ಕಾರ್ಯಕ್ರಮಗಳನ್ನು ಕಚೇರಿ ಮುಂಭಾಗದ ಆವರಣದಲ್ಲಿ ಆಚರಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು.

ಸೆಪ್ಟೆಂಬರ್ 7ರಂದು ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಅಂಗವಾಗಿ ಅಂದು ಬೆಳಗ್ಗೆ 8.30ಕ್ಕೆ ಆವರಣದಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಕಾರ್ಯಕ್ರಮ ನಡೆಸಲು ಸಭೆಯಲ್ಲಿ ತೀರ್ಮಾನಿಸಲಾಯಿತು.

ಸೆಪ್ಟೆಂಬರ್ 17 ರಂದು ವಿಶ್ವಕರ್ಮ ಜಯಂತಿ ಬೆಳಗ್ಗೆ 10.30ಕ್ಕೆ ಕಾರ್ಯಕ್ರಮ ಹಮ್ಮಿಕೊಳ್ಳಲು ನಿರ್ಧರಿಸಲಾಯಿತು. ಜಯಂತಿ ಕಾರ್ಯಕ್ರಮದಲ್ಲಿ ಮಹನೀಯರ ವಿಚಾರಧಾರೆಗಳನ್ನು ಜನರಿಗೆ ತಲುಪಿಸುವ ನಿಟ್ಟಿನಲ್ಲಿ ಉಪನ್ಯಾಸ ಏರ್ಪಡಿಸಲು ನಿರ್ಧರಿಸಲಾಯಿತು.

ಸಭೆಯಲ್ಲಿ ಪಟ್ಟಣ ಪಂಚಾಯಿತಿ ಅಧ್ಯಕ್ಷೆ ರಾಧಿಕಾ ಶ್ರೀನಾಥ್, ಉಪಾಧ್ಯಕ್ಷ ಶಿವಕುಮಾರ್, ಸದಸ್ಯರು ನೂರಳಾಸ್ವಾಮಿ, ಉಮಾ ರಾಮಚಂದ್ರ, ಚೆಲುವ ಕೃಷ್ಣ, ಸಮಾಜದ ತಾಲೂಕು ಅಧ್ಯಕ್ಷ ರವಿ, ಟೌನ್ ಅಧ್ಯಕ್ಷ ನಟರಾಜು,ವರ್ತಕ ಮಂಡಳಿ ಮಾಜಿ ಅಧ್ಯಕ್ಷ ಶ್ರೀನಿವಾಸ, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಕೆಂಡಗಣ್ಣಸ್ವಾಮಿ, ಮುಖಂಡರಾದ ಸುಭಾನ್, ಅಣ್ಣಯ್ಯ ಸ್ವಾಮಿ, ದಾಸಚಾರಿ, ಸಿಬ್ಬಂದಿ ಮನೋಹರ್, ರವಿಚಂದ್ರನ್, ಷರೀಫ್ ಇತರರು ಇದ್ದರು.