ಚಿತ್ರದುರ್ಗ ಸಂಸದ ನಾರಾಯಣಸ್ವಾಮಿಗೆ ಕೇಂದ್ರ ಸಂಪುಟದಲ್ಲಿ ಸಚಿವ ಸ್ಥಾನ ನೀಡಬೇಕೆಂದು ಆಗ್ರಹಿಸಿ ಹೂವಿನಹಡಗಲಿಯಲ್ಲಿ ತಹಸೀಲ್ದಾರ್ ಮೇಂದ್ರಗೆ ಎ.ನಾರಾಯಣಸ್ವಾಮಿ ಯುವ ಸೇನೆ ಮನವಿ ಸಲ್ಲಿಸಿತು. 
ಜಿಲ್ಲೆ

ನಾರಾಯಣಸ್ವಾಮಿಗೆ ಕೇಂದ್ರ ಸಚಿವ ಸ್ಥಾನ ನೀಡಲು ಹಡಗಲಿ ಯುವ ಸೇನೆ ಮನವಿ

ಹೂವಿನಹಡಗಲಿ: ಚಿತ್ರದುರ್ಗದ ಸಂಸದ ಎ.ನಾರಾಯಣಸ್ವಾಮಿಗೆ ಕೇಂದ್ರ ಸಂಪುಟದಲ್ಲಿ ಸಚಿವ ಸ್ಥಾನ ನೀಡುವಂತೆ ಒತ್ತಾಯಿಸಿ ಎ.ನಾರಾಯಣಸ್ವಾಮಿ ಯುವ ಸೇನೆಯಿಂದ ಮಂಗಳವಾರ ತಹಸೀಲ್ದಾರ್ ಮಹೇಂದ್ರ ಮೂಲಕ ಪ್ರಧಾನಮಂತ್ರಿಗೆ ಮನವಿ ಸಲ್ಲಿಸಿತು.

ಚಿತ್ರದುರ್ಗ ಕ್ಷೇತ್ರದಲ್ಲಿ ಕರೊನಾ ಸಂದರ್ಭದಲ್ಲಿ ಬಡವರ ರಕ್ಷಣೆಗಾಗಿ ಹಗಲಿರುಳು ಶ್ರಮಿಸುತ್ತಿದ್ದಾರೆ. ಕೇಂದ್ರ ಸರ್ಕಾರ ದಲಿತ ಕೋಟಾದಡಿಯಲ್ಲಿ ಸಚಿವ ಸ್ಥಾನ ನೀಡಬೇಕು. ಇಲ್ಲದಿದ್ದರೆ ಯುವ ಸೇನೆಯಿಂದ ರಾಜ್ಯಾದ್ಯಂತ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಸಿದರು.