ಜಿಲ್ಲೆ

ನಾರಾಯಣಗುರು ಜಯಂತ್ಯುತ್ಸವ 29ರಂದು

ಸಿದ್ದಾಪುರ: ಬ್ರಹ್ಮಶ್ರೀ ನಾರಾಯಣ ಗುರು ಧರ್ಮ ಪರಿಪಾಲನ ಸಂಘದ ವತಿಯಿಂದ ರಾಜ್ಯಮಟ್ಟದ ನಾರಾಯಣ ಗುರುಗಳ ಜಯಂತ್ಯುತ್ಸವ, ಮಹಿಳಾ ಸಮಾವೇಶ ಮತ್ತು ಪರಿವರ್ತನಶ್ರೀ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಸೆ.29ರಂದು ಬೆಳಗ್ಗೆ 10.30ಕ್ಕೆ ಬೆಂಗಳೂರಿನ ಟೌನ್ ಹಾಲ್‌ನಲ್ಲಿ ನಡೆಯಲಿದೆ ಎಂದು ತಾಲೂಕು ಬಿಎಸ್‌ಎನ್‌ಡಿಪಿ ಅಧ್ಯಕ್ಷ ವಿನಾಯಕ ನಾಯ್ಕ ದೊಡ್ಡಗದ್ದೆ ಹೇಳಿದರು.

ಪಟ್ಟಣದಲ್ಲಿ ಸುದ್ದಿಗೋಷ್ಠಿಯಲ್ಲಿ ಬುಧವಾರ ಮಾತನಾಡಿದ ಅವರು ಕಾರ್ಯಕ್ರಮದಲ್ಲಿ ಸೋಲೂರು ಮಠದ ಪೀಠಾಧಿಪತಿಗಳಾದ ವಿಖ್ಯಾತನಂದ ಸ್ವಾಮೀಜಿ, ಗೌರಿಗದ್ದೆಯ ವಿನಯ ಗುರೂಜಿ, ಸಿಗಂದೂರು ಕ್ಷೇತ್ರದ ಧರ್ಮಾಧಿಕಾರಿ ರಾಮಪ್ಪ ಇವರು ಸಾನಿಧ್ಯ ವಹಿಸುವರು. ಬಿಎಸ್‌ಎನ್‌ಡಿಪಿ ರಾಜ್ಯಾಧ್ಯಕ್ಷ ಸೈದಪ್ಪ ಗುತ್ತೇದಾರ್‌ಅಧ್ಯಕ್ಷತೆ ವಹಿಸುವರು. ಕಾರ್ಕಳ ಕ್ಷೇತ್ರದ ಶಾಸಕ ಸುನೀಲ್ ನಾಯ್ಕ ಕಾರ್ಯಕ್ರಮ ಉದ್ಘಾಟಿಸುವರು. ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌದರಿ, ಶಿಕ್ಷಣ ಸಚಿವ ಎಸ್.ಮಧು ಬಂಗಾರಪ್ಪ, ಉಡುಪಿ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಉಪಸ್ಥಿತರಿರುತ್ತಾರೆ ಎಂದು ಹೇಳಿದರು.

ರಾಜೇಶ ಕತ್ತಿ ಕೋಲಸಿರ್ಸಿ, ಪಾಂಡುರಂಗ ಚನ್ಮಾವ್, ಅನಿಲ್ ಕೋಠಾರಿ ಇತರರಿದ್ದರು.