ಕೂಲಹಳ್ಳಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಮಾದಾಪುರ ಕೆರೆ ಬಳಿಯ ಹೂಳೆತ್ತುವ ಕಾಮಗಾರಿ ಸ್ಥಳದಲ್ಲಿ ಶುಕ್ರವಾರ ಉದ್ಯೋಗ ಖಾತ್ರಿ ನಡಿಗೆ ಸಬಲತೆಯ ಕಡೆಗೆ ಅಭಿಯಾನದಲ್ಲಿ ನರೇಗಾ ಸಹಾಯಕ ನಿರ್ದೇಶಕ ಯು.ಸೋಮಶೇಖರ್ ಮಾತನಾಡಿದರು. ಐಇಸಿ ಸಂಯೋಜಕ ಕೆ.ವಸಿಗೇರಪ್ಪ ಚಾಗನೂರು, ಬಿಎಫ್‌ಟಿ ರಾಮಪ್ಪ, ಎಂಬಿಕೆ ನಾಗಮಂಜುಳಾ, ಎಲ್‌ಸಿಆರ್‌ಪಿ ಸುಧಾ, ಕೃಷಿ ಸಖಿ ವಿಶಾಲಾಕ್ಷಿ, ಪಶು ಸಖಿ ಗೀತಾ ಹಾಗೂ ಮೇಟಿಗಳಿದ್ದರು. 
ಜಿಲ್ಲೆ

ವಾರ್ಡ್‌ಸಭೆ ನ.11ರೊಳಗೆ ಪೂರ್ಣಗೊಳಿಸಿ

ಹರಪನಹಳ್ಳಿ: ನರೇಗಾ ಯೋಜನೆಯಡಿ ಗ್ರಾಮೀಣ ಪ್ರದೇಶದ ಕುಟುಂಬಕ್ಕೆ ವರ್ಷದಲ್ಲಿ 100 ದಿನಗಳ ಕೆಲಸ ನೀಡಲಾಗುತ್ತದೆ. ಮಹಿಳೆ ಹಾಗೂ ಪುರುಷರಿಗೆ ಸಮಾನ ಕೂಲಿ ದಿನಕ್ಕೆ ರೂ.349 ನಿಗದಿಗೊಳಿಸಲಾಗಿದೆ ಎಂದು ನರೇಗಾ ಸಹಾಯಕ ನಿರ್ದೇಶಕ ಯು.ಸೋಮಶೇಖರ್ ತಿಳಿಸಿದರು.

ತಾಲೂಕಿನ ಕೂಲಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾದಾಪುರ ಕೆರೆ ಬಳಿ ಹೂಳೆತ್ತುವ ಕಾಮಗಾರಿ ಸ್ಥಳದಲ್ಲಿ ಉದ್ಯೋಗ ಖಾತ್ರಿ ನಡಿಗೆ ಸಬಲತೆಯ ಕಡೆಗೆ ಅಭಿಯಾನದಲ್ಲಿ ಮಾಹಿತಿ ನೀಡಿ ಮಾತನಾಡಿದರು.

ಕೆಲಸದ ಪ್ರಮಾಣ ಮತ್ತು ಕೆಲಸದ ಅವಧಿ, ಯೋಜನೆಯಡಿ ದೊರೆಯುವ ವೈಯಕ್ತಿಕ ಸೌಲಭ್ಯಗಳು, ಕಾಮಗಾರಿ ಪ್ರಮಾಣದಲ್ಲಿ ಹಿರಿಯ ನಾಗರಿಕರಿಗೆ ಮತ್ತು ಅಂಗವಿಕಲರಿಗೆ ಶೇ.50 ರಿಯಾಯಿತಿ, ಕಾಮಗಾರಿಯ ಸ್ಥಳದಲ್ಲಿ ಒದಗಿಸಲಾಗುವ ಸೌಲಭ್ಯಗಳ ಕುರಿತು ಮಾಹಿತಿ ನೀಡಿದರು.

ಜನರಿಂದ ಹಾಗೂ ಕಾಮಗಾರಿ ಬೇಡಿಕೆ ಪೆಟ್ಟಿಗೆ ಮೂಲಕ ಸ್ವೀಕರಿಸಲಾದ ಅರ್ಜಿಗಳನ್ನು ಪರಿಶೀಲಿಸಬೇಕು. ನಿಯಮಾನುಸಾರ ವಾರ್ಡ್ ಸಭೆಗಳಲ್ಲಿ ಕಾಮಗಾರಿ ಪಟ್ಟಿ ತಯಾರಿಸಿ ಅನುಮೋದಿಸಿ, ಗ್ರಾಮ ಸಭೆಗೆ ಸಲ್ಲಿಸುವುದು, ವಾರ್ಡ್ ಸಭೆಯನ್ನು ನ.11ರೊಳಗೆ ಪೂರ್ಣಗೊಳಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಗ್ರಾಮ ಸಭೆಗಳನ್ನು ಪಂಚಾಯತ್‌ರಾಜ್ ಕಾಯ್ದೆಯ ನಿಯಮಾನುಸಾ ನ.30 ರೊಳಗೆ ಆಯೋಜಿಸಿ ವಾರ್ಡ್ ಸಭೆ ಹಾಗೂ ಮೊಬೈಲ್ ಅಪ್ಲಿಕೇಶನ್ ಮೂಲಕ ಸ್ವೀಕೃತವಾದ ಕಾಮಗಾರಿಗಳ ಕ್ರೋಢೀಕೃತ ಪಟ್ಟಿ ತಯಾರಿಸಿ ಅದರಲ್ಲಿ ಆದ್ಯತಾವಾರು ಸಿದ್ಧಗೊಳಿಸಬೇಕು. ದುರ್ಬಲ ವರ್ಗದ ಕುಟುಂಬಗಳನ್ನು ಗಮನದಲ್ಲಿರಿಸಿಕೊಂಡು ಬೇಡಿಕೆಯ ಅನುಸಾರ ಪಟ್ಟಿ ಸಿದ್ಧ ಪಡಿಸುವುದು ಅತ್ಯಗತ್ಯ ಎಂದರು.