ಲಿಂಗಣ್ಣ ಮಕಾಶಿ 
ಜಿಲ್ಲೆ

ನರೇಗಾ ಅವ್ಯವಹಾರ ತಡೆಯಿರಿ

ರುದ್ರಪ್ಪ ವಾಲಿ

ದೇವದುರ್ಗ: ತಾಲೂಕಿನ ಜಾಲಹಳ್ಳಿ ಗ್ರಾಪಂ ವ್ಯಾಪ್ತಿಯಲ್ಲಿ ಮಹಾತ್ಮಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಅವ್ಯವಹಾರ ನಡೆಯುತ್ತಿದ್ದು ಈ ಬಗ್ಗೆ ತನಿಖೆ ನಡೆಸಿ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸುವಂತೆ ಒತ್ತಾಯಿಸಿ ತಾಪಂ ಇಒ ಬಸವರಾಜ ಹಟ್ಟಿಗೆ ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘ ಶನಿವಾರ ಮನವಿ ಸಲ್ಲಿಸಿತು.

ಜಾಲಹಳ್ಳಿ ಗ್ರಾಪಂ ವ್ಯಾಪ್ತಿಯಲ್ಲಿ ನಾಲಾ ಅಭಿವೃದ್ಧಿ, ಸಮುದಾಯ ಕೆಲಸ ನಡೆಯುತ್ತಿದ್ದು ದುಡಿಯುವ ಕೂಲಿಕಾರರಿಗೆ ಸರಿಯಾಗಿ ಕೆಲಸ ಹಾಗೂ ಕೂಲಿ ಸಿಗುತ್ತಿಲ್ಲ. ಹೆಚ್ಚುವರಿ ಹಾಜರಾತಿ, ಹಳೇ ಫೋಟೋ ಎನ್‌ಎಂಎಂಎಸ್‌ನಲ್ಲಿ ಅಪ್‌ಲೋಡ್ ಮಾಡುವ ಮೂಲಕ ಅನುದಾನ ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ. ಬೋಗಲ್ ಬಿಲ್ ಎನ್ನುವ ಕೆಲಸಕೂಡ ನಡೆಯುತ್ತಿದೆ ಎಂದು ಆರೋಪಿಸಿದರು.

ಕೂಡಲೇ ಈ ಬಗ್ಗೆ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥ ಪಿಡಿಒ, ಜೆಇ ಸೇರಿ ಇದರಲ್ಲಿ ಭಾಗಿಯಾದವರ ವಿರುದ್ಧ ಕ್ರಮ ಕೈಗೊಳ್ಳಬೇಕು. ನರೇಗಾ ಯೋಜನೆ ಸಮರ್ಪಕವಾಗಿ ಅನುಷ್ಠಾನ ಮಾಡಬೇಕು. ಕೆಲಸದ ಸ್ಥಳದಲ್ಲಿ ಅಗತ್ಯ ಸೌಲಭ್ಯ ಕಲ್ಪಿಸಬೇಕು. ಕೆಲಸ ಮಾಡಿದ ಕೂಲಿಕಾರರಿಗೆ ತಕ್ಷಣವೇ ಕೂಲಿಪಾವತಿಸಬೇಕು. ಬೋಗಸ್‌ಬಿಲ್ ಎತ್ತುವಳಿ ತಡೆಯಬೇಕು.

ಹಳೇ ಫೋಟೋ ಎನ್‌ಎಂಎಂಎಸ್‌ನಲ್ಲಿ ಅಪ್‌ಲೋಡ್ ಮಾಡುವುದನ್ನು ತಡೆಯಬೇಕು ಎಂದು ಒತ್ತಾಯಿಸಿದರು. ತಾಲೂಕು ಅಧ್ಯಕ್ಷ ಲಿಂಗಣ್ಣ ಮಕಾಶಿ, ಪ್ರಧಾನ ಕಾರ್ಯದರ್ಶಿ ಬಸವರಾಜ ನಾಯಕ, ಜಂಟಿ ಕಾರ್ಯದರ್ಶಿ ಶಿವರಾಜ ಪೂಜಾರಿ ಇತರರಿದ್ದರು.