ಜಿಲ್ಲೆ

ಏಕವಲಯ ಖೋಖೋ ಪಂದ್ಯಾವಳಿ ಜು. 19ರಂದು

ವಿರೂಪಾಕ್ಷಯ್ಯ ಗುದ್ನಯ್ಯನವರಮಠ

ನರೇಗಲ್ಲ: ಇಲ್ಲಿನ ಅನ್ನದಾನೇಶ್ವರ ಮಹಾವಿದ್ಯಾಲಯದ ಮೈದಾನದಲ್ಲಿ ಜು. 19ರಂದು ಬೆಳಗ್ಗೆ 9.30ಕ್ಕೆ ಕರ್ನಾಟಕ ವಿಶ್ವವಿದ್ಯಾಲಯದ ಏಕವಲಯ ಮಟ್ಟದ ಖೋಖೋ ಪಂದ್ಯಾವಳಿ ಆಯೋಜಿಸಲಾಗಿದೆ ಎಂದು ಕಾಲೇಜಿನ ಪ್ರಾಚಾರ್ಯ ಎಸ್.ಜಿ. ಕೇಶಣ್ಣವರ ತಿಳಿಸಿದ್ದಾರೆ.
ಪ್ರಕಟಣೆ ನೀಡಿರುವ ಅವರು, ಅಂತಾರಾಷ್ಟ್ರೀಯ ಮಲ್ಲಕಂಬ ಕ್ರೀಡಾಪಟು ಮತ್ತು ಕರ್ನಾಟಕ ಕ್ರೀಡಾ ರತ್ನ ಪ್ರಶಸ್ತಿ ಪುರಸ್ಕೃತ ಭೀಮಪ್ಪ ಹಡಪದ ಪಂದ್ಯಾವಳಿ ಉದ್ಘಾಟಿಸುವರು. ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ರವೀಂದ್ರನಾಥ ದೊಡ್ಡಮೇಟಿ ಅಧ್ಯಕ್ಷತೆ ವಹಿಸುವರು. ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಎಸ್.ಬಿ. ಗೌಡರ, ಮುಖ್ಯ ಅತಿಥಿಗಳಾಗಿ ಕಾಲೇಜು ಆಡಳಿತ ಮಂಡಳಿ ಚೇರಮನ್ ಬಸವರಾಜ ವೀರಾಪುರ, ಸಂಸ್ಥೆ ಆಡಳಿತಾಧಿಕಾರಿ ಎನ್.ಆರ್. ಗೌಡರ, ಸದಸ್ಯರಾದ ಸೋಮಣ್ಣ ಹರ್ಲಾಪುರ, ನಿವೃತ್ತ ಪ್ರಾಚಾರ್ಯ ಬಿ.ಎಪ್. ಚೇಗರೆಡ್ಡಿ, ಡಾ. ಡಿ.ಎಲ್. ಪಾಟೀಲ ಪಾಲ್ಗೊಳ್ಳಲಿದ್ದಾರೆ. ಗದಗ, ಹಾವೇರಿ, ಕಾರವಾರ ಮತ್ತು ಧಾರವಾಡ ಜಿಲ್ಲೆಗಳ ಅಂದಾಜು 15 ತಂಡಗಳು ಪಂದ್ಯಾವಳಿಯಲ್ಲಿ ಪಾಲ್ಗೊಳ್ಳಲಿವೆ ಎಂದು ತಿಳಿಸಿದ್ದಾರೆ.