ಜಿಲ್ಲೆ

ನರೇಂದ್ರ ಮೋದಿಯಿಂದ ದೇಶದ ಕೀರ್ತಿ, ಗೌರವ ಹೆಚ್ಚಳ

ವಿಜಯವಾಣಿ ಸುದ್ದಿಜಾಲ ಪಡುಬಿದ್ರಿ

ನರೇಂದ್ರ ಮೋದಿ ಪ್ರಧಾನಿಯಾದ ಬಳಿಕ ದೇಶದ ಕೀರ್ತಿ, ಗೌರವ ಹೆಚ್ಚಾಗಿದೆ. ವಿಶ್ವದ ಆರ್ಥಿಕತೆಯಲ್ಲಿ 4ನೇ ಸ್ಥಾನದಲ್ಲಿರುವ ಭಾರತ ಒಂದು ವರ್ಷದಲ್ಲಿ 3ನೇ ಸ್ಥಾನಕ್ಕೇರುವ ವಿಶ್ವಾಸವಿದೆ. ಪ್ರಪಂಚದ 120 ದೇಶಗಳು ಭಾರತವನ್ನು ರೋಲ್ ಮಾಡೆಲ್ ಆಗಿ ಸ್ವೀಕರಿಸಿವೆ ಎಂದು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಹೇಳಿದರು.

ಬಿಜೆಪಿ ಕಾಪು ಮಂಡಲ ವತಿಯಿಂದ, ಕೇಂದ್ರ ಸರ್ಕಾರ 11 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಕಾಪು ವೀರಭದ್ರ ದೇವಸ್ಥಾನದ ಸಭಾಂಗಣದಲ್ಲಿ ಗುರುವಾರ ಆಯೋಜಿಸಿದ್ದ ವಿಕಸಿತ ಭಾರತ ಸಂಕಲ್ಪ ಸಮಾವೇಶ ಉದ್ಘಾಟಿಸಿ ಮಾತನಾಡಿದರು.

ಕೇಂದ್ರ ಸರ್ಕಾರ ಜನಸಾಮಾನ್ಯರಿಗಾಗಿ ಜಾರಿ ಮಾಡಿರುವ ಯೋಜನೆಗಳನ್ನು ಫಲಾನುಭವಿಗಳಿಗೆ ತಲುಪಿಸುವ ಕಾರ್ಯ ಕಾರ್ಯಕರ್ತರಿಂದಾಗಬೇಕು. ಮುಂದಿನ ಗ್ರಾಮ, ತಾಲೂಕು, ಜಿಲ್ಲಾ ಪಂಚಾಯಿತಿ ಚುನಾವಣೆಗೆ ಸಿದ್ಧತೆ ನಡೆಸಬೇಕು ಎಂದರು.

ಮಾಜಿ ಶಾಸಕ ಲಾಲಾಜಿ ಆರ್.ಮೆಂಡನ್, ಉಡುಪಿ ಜಿಲ್ಲಾ ಬಿಜೆಪಿ ನಿಕಟಪೂರ್ವ ಅಧ್ಯಕ್ಷ ಕಿಶೋರ್‌ಕುಮಾರ್, ಮಾಜಿ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ದ.ಕ. ಜಿಲ್ಲಾ ಬಿಜೆಪಿ ಮಾಜಿ ಅಧ್ಯಕ್ಷ ಸುದರ್ಶನ್, ಜಿಲ್ಲಾ ಬಿಜೆಪಿ ನಿಕಟಪೂರ್ವ ಉಪಾಧ್ಯಕ್ಷ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಶ್ರೀಶ ನಾಯಕ್ ಪೆರ್ಣಂಕಿಲ, ನಿಕಟಪೂರ್ವ ಕಾರ್ಯದರ್ಶಿ ಶ್ರೀಕಾಂತ್ ನಾಯಕ್, ವಿಕಸಿತ ಭಾರತ ಸಂಕಲ್ಪ ಕಾರ್ಯಕ್ರಮ ಜಿಲ್ಲಾ ಸಂಚಾಲಕ ರಾಜೇಶ್ ಕಾವೇರಿ, ಪ್ರಸಾದ್ ಶೆಟ್ಟಿ ಕುತ್ಯಾರು ಉಪಸ್ಥಿತರಿದ್ದರು. ಕಾಪು ಮಂಡಲ ಬಿಜೆಪಿ ಅಧ್ಯಕ್ಷ ಜಿತೇಂದ್ರ ಶೆಟ್ಟಿ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು., ಪ್ರಧಾನ ಕಾರ್ಯದರ್ಶಿ ಗೋಪಾಲಕೃಷ್ಣ ರಾವ್ ನಿರೂಪಿಸಿದರು.