ಜಿಲ್ಲೆ

ಎಲ್ಲರಿಗೂ ನರೇಂದ್ರ ಮೋದಿ ಆದರ್ಶ

ರಾಘವೇಂದ್ರಗೌಡ ಭೀ ಪಾಟೀಲ್

ಬೈಲಹೊಂಗಲ: ಪ್ರಧಾನಮಂತ್ರಿ ನರೇಂದ್ರ ಮೋದಿ 75ನೇ ಜನ್ಮದಿನದ ಅಂಗವಾಗಿ ಬಿಜೆಪಿ ಮಂಡಲ ವತಿಯಿಂದ ನಗರದ ಅಂಗನವಾಡಿ ಮಕ್ಕಳಿಗೆ ಬುಧವಾರ ಪೌಷ್ಟಿಕ ಆಹಾರ ವಿತರಿಸಲಾಯಿತು.

ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಗುರು ಮೆಟಗುಡ್ಡ ಮಾತನಾಡಿ, 75ನೇ ವಸಂತಕ್ಕೆ ಪದಾರ್ಪಣೆ ಮಾಡಿ ಸುದೀರ್ಘ 11 ವರ್ಷ ಭಾರತದ ಪ್ರಧಾನಮಂತ್ರಿ ಹುದ್ದೆ ಸಮರ್ಥವಾಗಿ ನಿರ್ವಹಿಸುತ್ತಿರುವ,

ಜಾಗತಿಕ ಮನ್ನಣೆಗೆ ಪಾತ್ರರಾಗಿರುವ ನರೇಂದ್ರ ಮೋದಿಜಿ ನಮಗೆಲ್ಲ ಆದರ್ಶವಾಗಿದ್ದಾರೆ. ಶತ್ರು ರಾಷ್ಟ್ರಗಳಿಗೆ ಸಿಂಹಸ್ವಪ್ನವಾಗಿ ಭಾರತದ ಕೀರ್ತಿ ಉತ್ತುಂಗಕ್ಕೇರಿಸಿದ್ದಾರೆ ಎಂದು ತಿಳಿಸಿದರು. ಜನ್ಮದಿನದ ಶುಭದಿನದಂದು ನರೇಂದ್ರ ಮೋದಿ ಅವರಿಗೆ ತಾಯಿ ಭಾರತಾಂಬೆ ಆಯುರಾರೋಗ್ಯ ಕರುಣಿಸಲೆಂದು ಶುಭ ಹಾರೈಸಿದರು.

ಬಿಜೆಪಿ ಮಂಡಲ ಅಧ್ಯಕ್ಷ ಸುಭಾಸ ತುರಮರಿ, ಒಬಿಸಿ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಂತೋಷ ಹಡಪದ, ಮಂಡಲ ಪ್ರಧಾನ ಕಾರ್ಯದರ್ಶಿ ಲಕ್ಕಪ್ಪ ಕಾರಗಿ, ಗ್ರಾಪಂ ಸದಸ್ಯ ನಾಗಪ್ಪ ಸಂಗೊಳ್ಳಿ, ರವಿ ಹೊಸೂರ, ಶ್ರೀಶೈಲ ಕಟ್ಟಿಮನಿ, ಬಸವರಾಜ ಗುರವನ್ನವರ, ಬಸವರಾಜ ಬಡಿಗೇರ, ರಾಜು ಗುಡಮಿ, ಬಿಜೆಪಿ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಇದ್ದರು.