ಮೈಸೂರು ನಗರದಲ್ಲಿ ಯಶಸ್ವಿಯಾಗಿ ಟೇಕ್‌ಆಫ್ ಆದ ಭಾರತೀಯ ವಾಯುಪಡೆಯ ಹೆಲಿಕಾಪ್ಟರ್ 
ಜಿಲ್ಲೆ

ನರೇಂದ್ರ ಮೋದಿ ಬೆಂಗಾವಲು ಹೆಲಿಕಾಪ್ಟರ್ ಕೊನೆಗೂ ಟೇಕ್‌ಆಫ್

ಮೈಸೂರು: ನಗರದ ಲಲಿತಮಹಲ್ ಹೆಲಿಪ್ಯಾಡ್‌ನಲ್ಲಿ ತಾಂತ್ರಿಕ ದೋಷದಿಂದ ಕೆಟ್ಟು ನಿಂತಿದ್ದ ಪ್ರಧಾನಿ ನರೇಂದ್ರ ಮೋದಿ ಅವರ ಬೆಂಗಾವಲು ಪಡೆಯ ಭಾರತೀಯ ವಾಯುಪಡೆಯ ಹೆಲಿಕಾಪ್ಟರ್‌ನ ತಾಂತ್ರಿಕ ದೋಷವನ್ನು ಸರಿಪಡಿಸಲಾಗಿದ್ದು, ಶನಿವಾರ ಹೆಲಿಕಾಪ್ಟರ್ ಟೇಕ್‌ಆಫ್ ಆಯಿತು.

ನಗರಕ್ಕೆ ಆಗಮಿಸಿದ ತಾಂತ್ರಿಕ ಸಿಬ್ಬಂದಿ ಹೆಲಿಕಾಪ್ಟರ್‌ನ ತಾಂತ್ರಿಕ ಸಮಸ್ಯೆಯನ್ನು ಸರಿಪಡಿಸಿ, ಸುರಕ್ಷಿತವಾಗಿ ಬೆಂಗಳೂರಿಗೆ ಕೊಂಡೊಯ್ದಿದ್ದಾರೆ. ಶುಕ್ರವಾರ ಮಧ್ಯಾಹ್ನ 3.20ಕ್ಕೆ ಪ್ರಧಾನಿ ಮೋದಿ ಲಲಿತಮಹಲ್ ಹೆಲಿಪ್ಯಾಡ್‌ಗೆ ಆಗಮಿಸಿದ್ದರು. ಅವರೊಂದಿಗೆ ಮೂರು ಬೆಂಗಾವಲು ಹೆಲಿಕಾಪ್ಟರ್‌ಗಳು ಬಂದಿದ್ದವು. ಪ್ರಧಾನಿ ಬಂದಿಳಿದ ಬಳಿಕ ಎರಡು ಹೆಲಿಕಾಪ್ಟರ್‌ಗಳು ಟೇಕ್‌ಆಫ್ ಆಯಿತು. ಆದರೆ, ಒಂದು ಹೆಲಿಕಾಪ್ಟರ್ ತಾಂತ್ರಿಕ ದೋಷದಿಂದ ಒಂದು ನಗರದಲ್ಲಿಯೇ ಉಳಿಯಿತು.