ಕೆ.ಆರ್.ನಗರ ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷರಾಗಿ ತಾಲೂಕು ಆರೋಗ್ಯಾಧಿಕಾರಿ ಡಾ.ಡಿ.ನಟರಾಜು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. 
ಜಿಲ್ಲೆ

ಸರ್ಕಾರಿ ನೌಕರರ ಸಂಘಕ್ಕೆ ನಟರಾಜು ಅವಿರೋಧ ಆಯ್ಕೆ

ಕೆ.ಆರ್.ನಗರ: ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷರಾಗಿ ತಾಲೂಕು ಆರೋಗ್ಯಾಧಿಕಾರಿ ಡಾ.ಡಿ.ನಟರಾಜು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಪಟ್ಟಣದ ಬಿಆರ್‌ಸಿ ಕೇಂದ್ರದಲ್ಲಿರುವ ತಮ್ಮ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಘದ ಖಜಾಂಚಿಯಾಗಿ ಕೃಷಿ ಇಲಾಖೆಯ ಹರೀಶ್ ಮತ್ತು ರಾಜ್ಯ ಪರಿಷತ್ ಸದಸ್ಯರಾಗಿ ಕಂದಾಯ ಇಲಾಖೆಯ ಎಸ್.ಆರ್.ಯಶವಂತ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಮಾಹಿತಿ ನೀಡಿದರು.

ಅಧ್ಯಕ್ಷ ಸ್ಥಾನಕ್ಕೆ ಡಾ.ಡಿ.ನಟರಾಜು ಮತ್ತು ಕೆ.ಮಧುಕುಮಾರ್ ನಾಮಪತ್ರ ಸಲ್ಲಿಸಿದ್ದರು. ಖಜಾಂಚಿ ಸ್ಥಾನಕ್ಕೆ ಆಯ್ಕೆ ಬಯಸಿ ಕೃಷಿ ಇಲಾಖೆಯ ಹರೀಶ್ ಮತ್ತ ಶಿಕ್ಷಕ ಶಂಕರೇಗೌಡ ಸ್ಪರ್ಧಾ ಕಣದಲ್ಲಿದ್ದರು. ಈ ನಡುವೆ ಮಧುಕುಮಾರ್ ಮತ್ತು ಶಂಕರೇಗೌಡ ಸೋಮವಾರ ತಮ್ಮ ನಾಮಪತ್ರ ವಾಪಸ್ ಪಡೆದ ಹಿನ್ನೆಲೆಯಲ್ಕಿ ಅಧ್ಯಕ್ಷ ಮತ್ತು ಖಜಾಂಚಿ ಸ್ಥಾನಕ್ಕೆ ಆಕಾಂಕ್ಷಿಗಳು ಅವಿರೋಧವಾಗಿ ಆಯ್ಕೆಯಾಗಲು ಸಹಕಾರಿಯಾಯಿತು.

ಇನ್ನು ರಾಜ್ಯ ಪರಿಷತ್ ಸದಸ್ಯ ಸ್ಥಾನಕ್ಕೆ ಕಂದಾಯ ಇಲಾಖೆಯ ಯಶವಂತ್ ಹೊರತುಪಡಿಸಿ ಬೇರಾರೂ ನಾಮಪತ್ರ ಸಲ್ಲಿಸದಿದ್ದರಿಂದ ಅವರ ಆಯ್ಕೆಯನ್ನು ಚುನಾವಣಾಧಿಕಾರಿ ಪ್ರಕಟಿಸಿದರು.