ಜಿಲ್ಲೆ

ಪ್ರತಿಯೊಬ್ಬರೂ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ

ಯಾದಗಿರಿ: ಮನುಕುಲಕ್ಕೆ ಮಾರಕವಾಗಿರುವ ಕರೊನಾ ವೈರಸ್ಗೆ ಕಟ್ಟಿಹಾಕಲು ಪ್ರತಿಯೊಬ್ಬರೂ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಎಂ.ಕೂರ್ಮಾರಾವ್ ಮನವಿ ಮಾಡಿದರು.

ನಗರದ ಸರ್ಕಾರಿ ಪದವಿಪೂರ್ವ ಕಾಲೇಜು ಆವರಣದಲ್ಲಿ ಶನಿವಾರ ಜಿಲ್ಲಾಡಳಿತ ಹಮ್ಮಿಕೊಂಡಿದ್ದ 74ನೇ ಸ್ವಾತಂತ್ರೃ ದಿನೋತ್ಸವದಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದ ಅವರು, ಕೋವಿಡ್-19 ಸೋಂಕಿತರ ಪತ್ತೆಗೆ ಆರ್ಟಿಪಿಸಿಆರ್ ಪ್ರಯೋಗಾಲಯವನ್ನು ನೂತನ ಜಿಲ್ಲಾಸ್ಪತ್ರೆಯಲ್ಲಿ ಸ್ಥಾಪಿಸಲಾಗಿದ್ದು, ಪ್ರತಿದಿನ 200ಕ್ಕೂ ಹೆಚ್ಚು ಮಾದರಿಗಳನ್ನು ಪರೀಕ್ಷಿಸಲಾಗುತ್ತಿದೆ ಎಂದರು.

ಸೋಂಕಿತರಿಗೆ ಚಿಕಿತ್ಸೆ ನೀಡಲು ಮುದ್ನಾಳ್ದಲ್ಲಿರುವ ಕೋವಿಡ್ ಆಸ್ಪತ್ರೆಯಲ್ಲಿ 250 ಹಾಸಿಗೆ ಕಾದಿರಿಸಲಾಗಿದೆ. ಅದೇ ರೀತಿ ಮೂರು ಕೋವಿಡ್ ಕೇರ್ ಸೆಂಟರ್ಗಳಲ್ಲೂ 800 ಹಾಸಿಗೆಗಳನ್ನು ಮೀಸಲಿರಿಸಲಾಗಿದೆ. ಜಿಲ್ಲೆಯಲ್ಲಿ ಇದುವರೆಗೆ 3537 ಸೋಂಕಿತರು ಪತ್ತೆಯಾಗಿದ್ದು, ಇವರಲ್ಲಿ 2331 ಚೇತರಿಸಿಕೊಂಡಿದ್ದಾರೆ. ಸೋಂಕಿತರಿಗೆ ಉತ್ತಮ ಚಿಕಿತ್ಸೆ ನೀಡುತ್ತಿರುವ ಕಾರಣ ಗುಣ ಹೊಂದುತ್ತಿರುವವರ ಪ್ರಮಾಣ ಶೇ.66.9 ಇದೆ ಎಂದ ಹೇಳಿದರು.

ಪ್ರವಾಹ ತಡೆಗಟ್ಟುವ ನಿಟ್ಟಿನಲ್ಲಿ ಜಿಲ್ಲಾಡಳಿತ ಎಲ್ಲ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದು, ಸಂಭವನೀಯ ಪ್ರವಾಹಪೀಡಿತ ಗ್ರಾಮಗಳಿಗೆ ನೊಡಲ್ ಅಧಿಕಾರಿಗಳು ಭೇಟಿ ನೀಡುವಂತೆ ಸೂಚಿಸಲಾಗಿದೆ. ಅಗತ್ಯ ಬಿದ್ದಲ್ಲಿ ಜನ ಮತ್ತು ಜಾನುವಾರುಗಳನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸುವಂತೆ ನಿದರ್ೇಶನ ನೀಡಲಾಗಿದೆ. ಯಾವುದೇ ತುತರ್ು ಸಂದರ್ಭ ಎದುರಿಸಲು ಜಿಲ್ಲಾಡಳಿತ ಸಜ್ಜಾಗಿದ್ದು, ಜನರು ಆತಂಕಪಡುವ ಅಗತ್ಯವಿಲ್ಲ ಎಂದರು.

ಕೋವಿಡ್-19 ತುತರ್ು ಪರಿಸ್ಥಿತಿಯಲ್ಲಿ ಅನ್ನಭಾಗ್ಯ ಯೋಜನೆ ಪಡಿತರ ವಿತರಣೆ ಜತೆಗೆ ಹೆಚ್ಚುವರಿಯಾಗಿ ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಯೋಜನೆಯಡಿ ದ್ಯತಾ ಕುಟುಂಬ ಮತ್ತು ಎಎವೈ ಪಡಿತರ ಚೀಟಿ ಪ್ರತಿ ಸದಸ್ಯರಿಗೆ 5 ಕೆಜಿ ಅಕ್ಕಿ, ಬಿಪಿಎಲ್ನ ಪ್ರತಿ ಪಡಿತರ ಚೀಟಿಗೆ 1 ಕೆಜಿ ತೊಗರಿ ಬೇಳೆಯನ್ನು ಏಪ್ರಿಲ್ನಿಂದ ಜೂನ್ವರೆಗೆ ಉಚಿತವಾಗಿ ವಿತರಿಸಲಾಗಿದೆ. ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಯೋಜನೆಯನ್ನು ಜುಲೈನಿಂದ ನವೆಂಬರ್ವರೆಗೆ ವಿಸ್ತರಿಸಲಾಗಿದ್ದು, ಆತ್ಮನಿರ್ಭರ ಭಾರತ ಅಭಿಯಾನದಡಿ ಯಾದಗಿರಿ ಜಿಲ್ಲೆ 11,420 ವಲಸಿಗರು ಹಾಗೂ ಪಡಿತರ ಚೀಟಿ ಇಲ್ಲದವರಿಗೆ ಮೇ ಮತ್ತು ಜೂನ್ನಲ್ಲಿ ಪ್ರತಿ ವಲಸಿಗನಿಗೆ ತಲಾ 10 ಕೆಜಿ ಅಕ್ಕಿ ಮತ್ತು 2 ಕೆಜಿ ಕಡಲೆ ಬೇಳೆ ಉಚಿತವಾಗಿ ವಿತರಿಸಲಾಗಿದೆ ಎಂದು ವಿವರಿಸಿದರು.

ಭಾರತೀಯ ಜೈನ ಸಂಘಟನೆ ಸಹಯೋಗದೊಂದಿಗೆ ಜಿಲ್ಲೆಯ 12 ಕೆರೆಗಳ ನಾಲಾ ಹೂಳೆತ್ತುವ ಕಾಮಗಾರಿ ಕೈಗೊಳ್ಳಲಾಗಿದೆ. ಈಗಾಗಲೇ ಯಾದಗಿರಿ ದೊಡ್ಡಕೆರೆ, ರಾಮಸಮುದ್ರ ಕೆರೆ, ಮೈಲಾಪುರ ಹೊನ್ನಪ್ಪನ ಕೆರೆ, ಯರಗೋಳ ಕೆರೆ, ಶಹಾಪುರದ ಮಾವಿನ ಕೆರೆ, ಸುರಪುರ ತಾಲೂಕಿನ ಭೈರಿಮಡ್ಡಿಯ ಭೈರಿಕೆರೆಗಳ ನಾಲಾ ಹೂಳೆತ್ತುವ ಕಾರ್ಯ ಮುಗಿದಿದೆ. ಇದರಿಂದ ಅಂತರ್ಜಲ ಮಟ್ಟದಲ್ಲಿ ಹೆಚ್ಚಳವಾಗಿದ್ದು, ರೈತರ ಹೊಲಗಳಿಗೆ ತೆರಳಲು ನಾಲಾ ಇಕ್ಕೆಲಗಳಲ್ಲಿ ದಾರಿ ನಿಮರ್ಾಣ, ಕೃಷಿ ಬಳಕೆಗೆ ನೀರು ಸಂಗ್ರಹ, ಪ್ರಾಣಿ-ಪಕ್ಷಿಗಳಿಗೆ ಅನುಕೂಲ ಕಲ್ಪಿಸಲು ಸಾಧ್ಯವಾಗಿದೆ ಎಂದು ಡಿಸಿ ಕೂಮರ್ಾರಾವ್ ಸಂತಸ ವ್ಯಕ್ತಪಡಿಸಿದರು.

ಶಾಸಕ ವೆಂಕಟರಡ್ಡಿ ಮುದ್ನಾಳ್, ಜಿಪಂ ಅಧ್ಯಕ್ಷ ಬಸನಗೌಡ ಪಾಟೀಲ್ ಯಡಿಯಾಪುರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಭಗವಾನ ಸೋನವಣೆ, ಪ್ರೊಬೇಷನರಿ ಐಎಎಸ್ ಅಧಿಕಾರಿ ಅಶ್ವಿಜಾ, ಅಪರ ಡಿಸಿ ಪ್ರಕಾಶ್ ಜಿ.ರಜಪೂತ ಇದ್ದರು.

ಸಂಗೀತ ಶಿಕ್ಷಕ ಚಂದ್ರಶೇಖರ ಗೋಗಿ ನಾಡಗೀತೆ ಹಾಡಿದರು. ಡಾ.ಜ್ಯೋತಿಲತಾ ತಡಿಬಿಡಿಮಠ ನಿರೂಪಣೆ ಮಾಡಿದರು. ಸಹಾಯಕ ಆಯುಕ್ತ ಶಂಕರಗೌಡ ಸೋಮನಾಳ ವಂದಿಸಿದರು.