ಬಾಲಕಿಯರ ವಿಭಾಗ ಮಟ್ಟದ ಪಂದ್ಯದಲ್ಲಿ ಪ್ರಥಮಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾದ ಬೆನ್ನೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಬಾಲಕಿಯರನ್ನು ಸಚಿವ ಶಿವರಾಜ ತಂಗಡಗಿ ಸೋಮವಾರ ಕಚೇರಿಯಲ್ಲಿ ಸನ್ಮಾನಿಸಿದರು. ಗ್ರಾಮಸ್ಥರಾದ ಬಸವರಾಜ ಸಾಹುಕಾರ್ ಬೆನ್ನೂರು, ಬಾಲೇಸಾಬ್, ಮಂಜುನಾಥ ಕಂಪ್ಲಿ, ಗೌಡಪ್ಪ, ಕುಮಾರ, ಮುಖ್ಯಶಿಕ್ಷಕ ಎಸ್.ಎಲ್. ಪ್ರಕಾಶ, ಸಹಶಿಕ್ಷಕರಾದ ಶಿವರಾಜಕುಮಾರ, ಯಲ್ಲಾಲಿಂಗ ವಜ್ಜಲ್, ಶಾಂತಾದೇವಿ, ಮಲ್ಲೇಶ ಇತರರಿದ್ದರು. 
ಜಿಲ್ಲೆ

ರಾಷ್ಟ್ರಮಟ್ಟದ ಕ್ರೀಡೆಗೆ ಆಯ್ಕೆ ಆಗಲಿ

Kopala - Desk - Eraveni

ಕಾರಟಗಿ: ರಾಜ್ಯಮಟ್ಟದಲ್ಲಿ ಗೆದ್ದು ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಮಕ್ಕಳು ಆಯ್ಕೆಯಾಗಬೇಕು ಎನ್ನುವುದು ನನ್ನ ಆಶಯ ಎಂದು ಸಚಿವ ಶಿವರಾಜ ತಂಗಡಗಿ ಹೇಳಿದರು.

ಪಟ್ಟಣದ ತಮ್ಮ ಕಚೇರಿಯಲ್ಲಿ ತಾಲೂಕಿನ ಬೆನ್ನೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಬಾಲಕಿಯರು ವಿಭಾಗ ಮಟ್ಟದ ಕಬಡ್ಡಿ ಪಂದ್ಯದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದರಿಂದ ಸೋಮವಾರ ಸನ್ಮಾನಿಸಿ ಮಾತನಾಡಿದರು.

ಇತ್ತೀಚೆಗೆ ಕ್ರೀಡೆಗಳ ಬಗ್ಗೆ ಮಕ್ಕಳಲ್ಲಿ ವಿಶೇಷ ಆಸಕ್ತಿ ಬೆಳೆಯುತ್ತಿದೆ. ಅದಕ್ಕೆ ಶಿಕ್ಷಕರು ಮತ್ತು ಪಾಲಕರು ನಿರೇರೆದು ಪೋಷಿಸುತ್ತಿದ್ದಾರೆ. ಪ್ರತಿ ಮಗುವಿನಲ್ಲೂ ಒಂದೊಂದು ಪ್ರತಿಭೆ ಇರುತ್ತದೆ. ಅದನ್ನು ಗುರುತಿಸುವ ಕೆಲಸ ಮಾಡಬೇಕಿದೆ. ತಾಲೂಕಿನ ಮಕ್ಕಳು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದು ಸಂತಸ ತಂದಿದೆ ಎಂದರು.